ಛತ್ತೀಸ್‌ಗಢ | ಬುಡಕಟ್ಟು ಸಮುದಾಯದ ದಂಪತಿಯನ್ನು ಥಳಿಸಿ ಕೊಂದ ದುಷ್ಕರ್ಮಿಗಳು

Date:

ಬುಡಕಟ್ಟು ಸಮುದಾಯದ ದಂಪತಿಯನ್ನು ಅಪರಿಚಿತ ದುಷ್ಕರ್ಮಿಗಳು ಥಳಿಸಿ ಕೊಂದ ಘಟನೆ ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ಭೆಂದ್ರ ಗ್ರಾಮದಲ್ಲಿ ಬುಧವಾರ ನಡೆದಿದೆ.

- Advertisement -

ಮೃತರನ್ನು ಗುರುವರ್‌ ಸಿಂಗ್ ರಥಿಯಾ(35) ಮತ್ತು ಅವರ ಪತ್ನಿ ಮನಿತಾ ರಥಿಯಾ(30) ಎಂದು ಗುರುತಿಸಲಾಗಿದೆ. ಗುರುವರ್ ಅವರು ಕಾರ್ಮಿಕರಾಗಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಜಾತಿ ವಿಕೃತಿ | ದಲಿತ ಯುವಕರ ಅರ್ಧ ತಲೆ ಬೋಳಿಸಿ, ದನಗಳಂತೆ ನಡೆಸಿ, ಹುಲ್ಲು ತಿನ್ನಿಸಿ ದೌರ್ಜನ್ಯ

ಬುಧವಾರ ದಂಪತಿಯ ಮೃತದೇಹವು ಅವರ ಮನೆಯಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ದಂಪತಿಗೆ ಒಂದರಿಂದ ಆರು ವರ್ಷದೊಳಗಿನ ವಯಸ್ಸಿನ ಮೂವರು ಮಕ್ಕಳಿದ್ದಾರೆ. ಮಕ್ಕಳ ಮೇಲೆ ಯಾವುದೇ ದಾಳಿ ನಡೆದಿಲ್ಲ ಎಂದು ಹೇಳಲಾಗಿದೆ.

ದಂಪತಿಗೆ ಕೋಲಿನಿಂದ ಥಳಿಸಿ ಕೊಲೆ ಮಾಡಲಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತ ದೇಹವನ್ನು ಗರ್ಗೋಡ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಸದ್ಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು ತನಿಖೆ ನಡೆಯುತ್ತಿದೆ. ಇಬ್ಬರು ಶಂಕಿತರ ವಿಚಾರಣೆ ನಡೆಸಲಾಗಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...