ಶಾಲೆ ರಸ್ತೆಗಾಗಿ ಆಗ್ರಹ; ಹೊಂಡದಲ್ಲಿ ಕುಳಿತು ಬುಡಕಟ್ಟು ವಿದ್ಯಾರ್ಥಿಗಳ ಪ್ರತಿಭಟನೆ

Date:

ತಾವು ತಮ್ಮೂರಿನಿಂದ ಶಾಲೆಗೆ ಹೋಗಲು ಸರಿಯಾದ ರಸ್ತೆ ಇಲ್ಲದ ಕಾರಣ, ಉತ್ತಮ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಹೊಂಡದಲ್ಲಿ ಕುಳಿತು ಪ್ರತಿಭಟನೆ ನಡೆಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ರಾಯಪಾಲಂ, ಮುನುಪುರೈ, ಚಪ್ಪನಿಗಡ್ಡ, ವಿಪ್ಪಮನುವಲ ಮತ್ತು ಪಲ್ಲಪುದುಂಗಡ ಗ್ರಾಮಗಳ ಬುಡಕಟ್ಟು ವಿದ್ಯಾರ್ಥಿಗಳು ಆಂಧ್ರ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಛಾಯಾಚಿತ್ರಗಳನ್ನು ಕುತ್ತಿಗೆಗೆ ನೇತುಹಾಕಿಕೊಂಡು ಪ್ರತಿಭಟನೆ ನಡೆಸಿದ್ದಾರೆ. “ನಾವು ಪ್ರತಿದಿನ ಶಾಲೆಗೆ ಹೋಗಲು ಗುಡ್ಡಗಾಡು ಪ್ರದೇಶದ ಮೂಲಕ ಸುಮಾರು 12 ಕಿಲೋಮೀಟರ್ ಪ್ರಯಾಣಿಸುತ್ತಿದ್ದೇವೆ. ದಯವಿಟ್ಟು ನಮಗಾಗಿ ರಸ್ತೆ ನಿರ್ಮಿಸಿಕೊಡಿ. ನಾವು ಶಿಕ್ಷಣ ಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಶಿಕ್ಷಣ ಪಡೆಯಲು ಶಾಲೆಗಳಿಗೆ ತೆರಳಲು ಅಡೆತಡೆಯಿಲ್ಲದ ಉತ್ತಮ ರಸ್ತೆ ಸಂಪರ್ಕವನ್ನು ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ, 10 ವರ್ಷದ ಬಾಲಕಿಯೊಬ್ಬಳು ಮಧ್ಯಪ್ರದೇಶದ ಬೇತುಲ್ ಜಿಲ್ಲೆಯ 5ನೇ ತರಗತಿಯ ವಿದ್ಯಾರ್ಥಿನಿ ಸುರಭಿ ಯಾದವ್ ತನ್ನ ಶಾಲಾ ವ್ಯಾನ್ ಬರದ ಕಾರಣ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು. ಸುಮಾರು ಮೂರು ಗಂಟೆಗಳ ಕಾಲ ಆಕೆ ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದ್ದಳು. ಆಕೆ ತನ್ನ ಶಾಲೆಯನ್ನು ತಲುಪಲು ಪ್ರತಿದಿನ ಸುಮಾರು 18 ಕಿಲೋಮೀಟರ್ ಪ್ರಯಾಣಿಸುತ್ತಿದ್ದರು. ಆದರೆ, ಆಕೆಯ ಪೋಷಕರು ಸಾರಿಗೆ ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಕಾರಣ, ಶಾಲಾ ಆಡಳಿತವು ಸುರಭಿಗೆ ವ್ಯಾನ್ ಸೌಲಭ್ಯವನ್ನು ಸ್ಥಗಿತಗೊಳಿಸಿತ್ತು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಅರುಣಾಚಲ ಪ್ರದೇಶದ ಪಕ್ಕೆ ಕೆಸಾಂಗ್ ಜಿಲ್ಲೆಯ ಶಾಲೆಯೊಂದರ ಕನಿಷ್ಠ 90 ವಿದ್ಯಾರ್ಥಿಗಳು ತಮ್ಮ ಸಂಸ್ಥೆಯಲ್ಲಿ ಶಿಕ್ಷಕರ ತೀವ್ರ ಕೊರತೆಯನ್ನು ಎತ್ತಿ ತೋರಿಸಲು 65 ಕಿಲೋಮೀಟರ್ ಮೆರವಣಿಗೆ ನಡೆಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...