ಭೂಗಳ್ಳರಿಂದ ರಕ್ಷಣೆ ನೀಡಿ: ತಹಸೀಲ್ದಾರ್ ಕಾಲಿಗೆ ಬಿದ್ದು ನ್ಯಾಯಕ್ಕೆ ಮೊರೆಯಿಟ್ಟ ಆದಿವಾಸಿ ಮಹಿಳೆಯರು

Date:

ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಭೂ ಮಾಫಿಯಾ ದಬ್ಬಾಳಿಕೆಗೆ ತುತ್ತಾದ ಇಬ್ಬರು ಆದಿವಾಸಿ ಮಹಿಳೆಯರು, ನ್ಯಾಯ ಕೋರಿ ತಹಸೀಲ್ದಾರ್ ಅವರ ಕಾಲಿಗೆ ಬಿದ್ದ ಘಟನೆ ನಡೆದಿದೆ.

- Advertisement -

ಶಿವಪುರಿ ಜಿಲ್ಲೆಯ ಕರಹಾಲ್ ಬ್ಲಾಕ್‌ನ ಖಿರ್ಖಿರಿ ಗ್ರಾಮದ ಸಾವಿತ್ರಿ ಬಾಯಿ ಹಾಗೂ ಅವರ ಸೊಸೆ, ತಮ್ಮ ಪೂರ್ವಜರ ಭೂಮಿಯನ್ನು ಮರಳಿ ಪಡೆಯಲು ತಹಸೀಲ್ದಾರ್ ರೋಶ್ನಿ ಶೇಖ್ ಅವರ ಕಾಲಿಗೆ ಬಿದ್ದು ಕಣ್ಣೀರಿಟ್ಟರು. ” ಏನಾದರೂ ಮಾಡಿ, ಇಲ್ಲದಿದ್ದರೆ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ” ಎಂದು ನೋವನ್ನು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಕರಹಾಲ್ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಈ ಹೃದಯವಿದ್ರಾವಕ ಘಟನೆ, ಆದಿವಾಸಿ ಸಮುದಾಯದ ಮೇಲಿನ ದಬ್ಬಾಳಿಕೆಯ ಆಳವನ್ನು ಬಿಚ್ಚಿಟ್ಟಿದೆ. ಸಾವಿತ್ರಿ ಬಾಯಿ ಅವರು ತಮ್ಮ ಸೊಸೆಯೊಂದಿಗೆ ಮತ್ತೊಮ್ಮೆ ದೂರು ಸಲ್ಲಿಸಲು ಬಂದಿದ್ದರು. ತಹಸೀಲ್ದಾರ್ ಕಚೇರಿ ಬಿಟ್ಟು ಹೊರಡುತ್ತಿದ್ದ ವೇಳೆ, ಮೆಟ್ಟಿಲುಗಳ ಮಧ್ಯೆಯೇ ಇಬ್ಬರು ಮಹಿಳೆಯರು ಅವರ ಕಾಲಿಗೆ ಬಿದ್ದು ಅಳತೊಡಗಿದರು.

ಗ್ರಾಮದ ಪ್ರಭಾವಿ ವ್ಯಕ್ತಿಗಳು ಹಾಗೂ ಭೂ ಮಾಫಿಯಾ ಒಡೆಯರು ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ನಮ್ಮ ಮನೆಯನ್ನು ಧ್ವಂಸ ಮಾಡಿ ಅಲ್ಲಿಯೇ ಕಟ್ಟಡ ನಿರ್ಮಿಸಿದ್ದಾರೆ. ಪೊಲೀಸ್ ಠಾಣೆ ಮತ್ತು ತಹಸೀಲ್ದಾರ್ ಕಚೇರಿಗೆ ಹಲವು ಬಾರಿ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ʼವಂದೇ ಮಾತರಂ’ವಿವಾದ; ಪರಿವಾರ- ಪ್ರಧಾನಿ ಪೋಣಿಸಿದ ಸುಳ್ಳುಗಳ ಬೊಂತೆ

ಮಹಿಳೆಯರ ನೋವನ್ನು ಆಲಿಸಿದ ತಹಸೀಲ್ದಾರ್ ರೋಶ್ನಿ ಶೇಖ್ ಅವರು ಮೆಟ್ಟಿಲ ಮೇಲೆ ಕುಳಿತು ಅವರ ಮಾತುಗಳನ್ನು ಆಲಿಸಿದರು. “ನಾನೇ ಖುದ್ದಾಗಿ ತನಿಖೆ ನಡೆಸುತ್ತೇನೆ. ಸ್ಥಳೀಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಕಟ್ಟಡವನ್ನು ತಕ್ಷಣವೇ ಖಾಲಿ ಮಾಡಿಸುತ್ತೇನೆ” ಎಂದು ಭರವಸೆ ನೀಡಿದರು. ಅಧಿಕಾರಿಗಳಿಗೆ ತಕ್ಷಣದ ಕ್ರಮಕ್ಕೆ ಸೂಚನೆ ನೀಡಿದರು.

ಕರಹಾಲ್ ಆದಿವಾಸಿ ಬ್ಲಾಕ್‌ನಲ್ಲಿ ನಡೆದ ಘಟನೆ ಮಾಮೂಲಿ ಘಟನೆಯಲ್ಲ. ಹಲವು ಆದಿವಾಸಿ ಕುಟುಂಬಗಳು ವರ್ಷಗಳಿಂದ ಭೂ ಕಬಳಿಕೆಯಿಂದ ಬಳಲುತ್ತಿವೆ. ಅಧಿಕಾರಿಗಳು ಮತ್ತು ರಾಜಕೀಯದ ಬೆಂಬಲದಿಂದ ಭೂಮಾಫಿಯಾ ದೌರ್ಜನ್ಯ ನಡೆಸುತ್ತಿದೆ.

ಬಲಹೀನ ಆದಿವಾಸಿ ಜನತೆ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. “ಈ ಘಟನೆ ಕೇವಲ ಒಂದು ಕುಟುಂಬದ ನೋವಲ್ಲ, ಇಡೀ ಸಮುದಾಯದ ರೋದನೆ” ಎಂದು ಆದಿವಾಸಿ ಹಕ್ಕುಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...