ತಮಿಳುನಾಡು | ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ಯಶಸ್ವಿಯಾಗಿ ಲ್ಯಾಂಡಿಂಗ್ ನಡೆಸಿದ ಪೈಲಟ್

Date:

Advertisements

ತಮಿಳುನಾಡಿನ ತಿರುಚಿರಾಪಳ್ಳಿಯಿಂದ ದುಬೈಯ ಶಾರ್ಜಾ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಾರಾಟದ ಮಧ್ಯದಲ್ಲೇ ಹೈಡ್ರಾಲಿಕ್ ಸಮಸ್ಯೆ ಉಂಟಾಗಿದ್ದು, ಲ್ಯಾಂಡಿಂಗ್ ಗೇರ್ ಅಸಮರ್ಪಕವಾಗಿರುವುದಾಗಿ ವರದಿಯಾಗಿತ್ತು. ಪೈಲಟ್ ಯಶಸ್ವಿಯಾಗಿ ಲ್ಯಾಂಡಿಂಗ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

“ತಿರುಚಿರಾಪಳ್ಳಿಯಿಂದ ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಐಎಕ್ಸ್ 613 ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಡಿಜಿಸಿಎ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಎಂಒಸಿಎ ತಿಳಿಸಿದೆ.

“ಲ್ಯಾಂಡಿಂಗ್ ಗೇರ್ ತೆರೆದಿದ್ದು, ವಿಮಾನವು ಸಾಮಾನ್ಯವಾಗಿ ಇಳಿಯಿತು. ವಿಮಾನ ನಿಲ್ದಾಣವನ್ನು ಅಲರ್ಟ್ ಮೋಡ್ ನಲ್ಲಿ ಇರಿಸಲಾಗಿದೆ” ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಪ್ರಯಾಣಿಕರಿಗೂ ಏನೂ ಆಗಿಲ್ಲ” ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ತಿರುಚಿರಾಪಳ್ಳಿ 144 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನದಲ್ಲಿ ಹೈಡ್ರಾಲಿಕ್ ಸಮಸ್ಯೆ ಉಂಟಾಗಿ, ಇಂಧನ ಖಾಲಿ ಮಾಡಲು ಆಗಸದಲ್ಲಿ ಎರಡು ಗಂಟೆಗಳಿಂದ ಹಾರಾಟ ನಡೆಸುತ್ತಿರುವುದಾಗಿ ವರದಿಯಾಗಿತ್ತು.

ಹೀಗಾಗಿ, ಲ್ಯಾಂಡಿಂಗ್ ಸಮಯದಲ್ಲಿ ಬೆಂಕಿಯ ಅಪಾಯವನ್ನು ತಪ್ಪಿಸಲು, ವಿಮಾನವು ಅದರ ಇಂಧನ ಲೋಡ್ ಅನ್ನು ಕಡಿಮೆ ಮಾಡಿದ ನಂತರ ತುರ್ತು ಭೂಸ್ಪರ್ಶಕ್ಕೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ 20ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳು ಮತ್ತು ಅಗ್ನಿಶಾಮಕ ವಾಹನಗಳನ್ನು ಪೂರ್ವ ಸಿದ್ಧತೆಯಲ್ಲಿ ಇರಿಸಲಾಗಿತ್ತು. ಸಂಭವನೀಯ ಬೆಲ್ಲಿ ಲ್ಯಾಂಡಿಂಗ್‌ಗೆ ಸಿದ್ಧತೆಗಳನ್ನು ಮಾಡಲಾಗಿತ್ತು.

ಯಶಸ್ವಿಯಾಗಿ ಲ್ಯಾಂಡಿಂಗ್ ನಡೆಸಿದ ಪೈಲಟ್

ತಿರುಚಿರಾಪಳ್ಳಿಯಿಂದ ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಐಎಕ್ಸ್ 613 ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಡಿಜಿಸಿಎ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಎಂಒಸಿಎ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X