ಶಹಜಹಾನ್ ಶೇಖ್‌ನನ್ನು 6 ವರ್ಷಗಳ ಕಾಲ ಅಮಾನತುಗೊಳಿಸಿದ ಟಿಎಂಸಿ

Date:

ಪಶ್ಚಿಮ ಬಂಗಾಳ ಪೊಲೀಸರು ಸಂದೇಶ್‌ಖಾಲಿ ಹಾಗೂ ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶೇಖ್ ಶಹಜಹಾನ್‌ನನ್ನು ಬಂಧಿಸಿದ ನಂತರ ಟಿಎಂಸಿ ಶಹಜಹಾನ್‌ನನ್ನು ಪಕ್ಷದಿಂದ ಆರು ವರ್ಷಗಳ ಕಾಲ ಅಮಾನತುಗೊಳಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿಎಂಸಿ ಸಂಸದ ಡೆರಿಕ್ ಓ ಬ್ರಿಯೆನ್, “ನಾವು ಶೇಖ್ ಶಹಜಹಾನ್‌ನನ್ನು 6 ವರ್ಷಗಳ ಕಾಲ ಅಮಾನತುಗೊಳಿಸಲು ನಿರ್ಧರಿಸಿದ್ದೇವೆ. ಹೇಳಿದ ಮಾತಿನಂತೆ ನಾವು ನೆಡೆಯುತ್ತೇವೆ. ನಾವು ಹಿಂದೆ ಹೇಳಿದ್ದನ್ನು ಈಗ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

“ಭ್ರಷ್ಟಾಚಾರ ಪ್ರಕರಣಗಳು, ಹಲವು ಕ್ರಿಮಿನಲ್ ಪ್ರಕರಣಗಳಿರುವ ಆರೋಪಿಗಳನ್ನು ಅಮಾನತುಗೊಳಿಸಿದ್ದೇವೆ. ಆದರೆ ಬಿಜೆಪಿ ಈ ಧೈರ್ಯವನ್ನು ತೋರಿಸಬೇಕು.ನೀವು ಯಾರೆ ಆಗಿದ್ದರೂ ಜನರಿಗೆ ತೊಂದರೆ ನೀಡಿದ್ದರೆ ನಿಮ್ಮ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂಬುದನ್ನು ತೋರಿಸಿದ್ದೇವೆ.  ನಮ್ಮಿಂದ ಅಮಾನತುಗೊಂಡವರು ನರೇಂದ್ರ ಮೋದಿ ಅವರ ಸಭೆಗಳಲ್ಲಿ ಪಾಲ್ಗೊಂಡರೆ ನಮಗೆ ಯಾವುದೇ ಆಶ್ಚರ್ಯ ಉಂಟಾಗುವುದಿಲ್ಲ” ಎಂದು ಡೆರಿಕ್ ಓ ಬ್ರಿಯೆನ್ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಶೇಖ್ ಶಹಜಹಾನ್‌ ಸಂದೇಶ್‌ಖಾಲಿ ವಿಧಾನಸಭೆಯ ಪಕ್ಷದ ವಕ್ತಾರನಾಗಿದ್ದು, ಟಿಎಂಸಿಯ 24 ಉತ್ತರ ಪರಗಣದ ಜಿಲ್ಲಾ ಪರಿಷತ್‌ನ ಸದಸ್ಯನಾಗಿದ್ದಾನೆ.

ಸಂದೇಶ್‌ಖಾಲಿ ಹಾಗೂ ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ 53 ವರ್ಷದ ಶೇಖ್ ಶಹಜಹಾನ್‌ನ್ನು ಬಂಧಿಸಲಾಗಿದ್ದು, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇ.ಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ನಂತರ ಈತ ಕಳೆದ 55 ದಿನಗಳಿಂದ ಪೊಲೀಸರಿಂದ ತಲೆ ತಪ್ಪಿಸಿಕೊಂಡಿದ್ದ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ...

ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ...

ಭಾರತದ ಯುವಕರದು ವಿರಾಟ್ ಕೊಹ್ಲಿ ರೀತಿಯ ಮನಸ್ಥಿತಿ: ರಘುರಾಂ ರಾಜನ್

ಬೃಹತ್ ಸಂಖ್ಯೆಯ ಭಾರತದ ಯುವಕರು ವಿದೇಶಗಳಿಗೆ ಹೋಗಿ ಅಲ್ಲಿ ತಮ್ಮ ಉದ್ಯಮವನ್ನು...