ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

Date:

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ರದ್ದು ಹಾಗೂ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಅನುಷ್ಠಾನಗೊಳಿಸುವುದನ್ನು ತಡೆಯುವುದನ್ನು ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

- Advertisement -

ಪ್ರಣಾಳಿಕೆ ಬಿಡುಗಡೆ ನಂತರ ಮಾತನಾಡಿದ ಟಿಎಂಸಿ ಸಂಸದ ಡೆರಿಕ್ ಒಬ್ರಾಯಿನ್, ಇಂಡಿಯಾ ಒಕ್ಕೂಟ ಸರ್ಕಾರ ರಚನೆಯ ಭಾಗವಾಗಿ ಟಿಎಂಸಿ ಇವುಗಳನ್ನು ಕಾರ್ಯಗತಗೊಳಿಸುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

ಸಿಎಎ ಹಾಗೂ ಯುಸಿಸಿ ಹೊರತಾಗಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಮನ್‌ರೇಗಾ ಯೋಜನೆಯಡಿ 400 ರೂಗಳಿಗೆ ದಿನ ಭತ್ಯೆ ಹೆಚ್ಚಳ, ಪ್ರತಿ ಭಾರತೀಯನಿಗೆ ಉದ್ಯೋಗ ಖಾತರಿ, ಎಲ್ಲರಿಗೂ ವಸತಿ, ಉಚಿತ ಎಲ್‌ಪಿಜಿ ಸಿಲಿಂಡರ್ ರೈತರಿಗೆ ಎಂಎಸ್‌ಪಿ ಖಾತರಿ, 60 ವರ್ಷ ಮೇಲ್ಪಟ್ಟವರಿಗೆ 1 ಸಾವಿರ ಪಿಂಚಣಿ, 10 ಲಕ್ಷ ವೈದ್ಯಕೀಯ ವಿಮೆ, ಎಸ್‌ಸಿ,ಎಸ್‌ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಭರವಸೆ ನೀಡಲಾಗಿದೆ.

ಟಿಎಂಸಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ನೇಪಾಳಿ ಸೇರಿದಂತೆ ಆರು ಭಾಷೆಗಳಲ್ಲಿ ಬಿಡುಗಡೆ ಮಾಡಿದೆ.

ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಿಗೆ ಏ.19 ರಿಂದ ಜೂನ್‌ 1ರವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...