ತ್ರಿಪುರಾ | ಶಾಲೆಯಿಂದ ಮರಳುತ್ತಿದ್ದ 5ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Date:

ಶಾಲೆಯಿಂದ ಮರಳುತ್ತಿದ್ದ ಐದನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ. ಎರಡು ದಿನಗಳ ಹಿಂದಷ್ಟೆ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈಗ ಮತ್ತೆ ದುರುಳರು ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.

- Advertisement -

ತನ್ನ ಮಗಳು ಶಾಲೆಯಿಂದ ಮನೆಗೆ ಬರದ ಕಾರಣ ಅಪ್ರಾಪ್ತರ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಹುಡುಕಾಟ ನಡೆಸಿದಾಗ ಬಾಲಕಿ ಮನೆಯ ಬಳಿಯೇ ಕಂಡುಬಂದಿದ್ದಾಳೆ. ಈ ವೇಳೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಐದನೇ ತರಗತಿಯ ವಿದ್ಯಾರ್ಥಿಯು ಶಾಲೆಯಿಂದ ಮನೆಗೆ ಹಿಂತಿರುಗಿಲ್ಲ ಎಂದು ನಮಗೆ ನಿನ್ನೆ ಮಾಹಿತಿ ಬಂದಿತ್ತು. ಅದರಂತೆ, ನಾವು ತನಿಖೆಯನ್ನು ಪ್ರಾರಂಭಿಸಿದ್ದೇವು. ಅಷ್ಟರಲ್ಲಿ ಒಬ್ಬ ವ್ಯಕ್ತಿ ಬಾಲಕಿಯನ್ನು ಅವಳ ಮನೆ ಬಳಿ ಬಿಟ್ಟು ಹೋಗಿದ್ದಾನೆ ಎಂದು ತಿಳಿದುಬಂದಿದೆ. ಆತನನ್ನು ಅದೇ ಪ್ರದೇಶದ 22 ವರ್ಷದ ಯುವಕ ಎಂದು ಗುರುತಿಸಲಾಗಿದೆ. ನಾವು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದೇವೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಇಬ್ಬರು ಡ್ಯಾನ್ಸರ್‌ಗಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ; 8 ಮಂದಿ ಕಾಮುಕರ ಬಂಧನ

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಯಾವುದೇ ಬಂಧನವಾಗಿಲ್ಲ ಎಂದು ವರದಿಯಾಗಿದೆ.

ಎರಡು ದಿನಗಳಲ್ಲಿ ನಡೆದ ಎರಡನೇ ಸಾಮೂಹಿಕ ಅತ್ಯಾಚಾರ ಘಟನೆ ಇದಾಗಿದೆ. ಉತ್ತರ ತ್ರಿಪುರಾ ಜಿಲ್ಲೆಯಲ್ಲಿ ಇಬ್ಬರು 16 ವರ್ಷದ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ಕಾಡಿನಲ್ಲಿ ಬಿಟ್ಟು ಹೋಗಿದ್ದರು. ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಧರ್ಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಗುರುವಾರ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕಾಮುಕರು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು ಎಂದು ಉತ್ತರ ತ್ರಿಪುರದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಭಾವುಪಾದ ಚಕ್ರವರ್ತಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...