ತ್ರಿಪುರಾ | ಕೋಮು ಸಂಘರ್ಷ: ಹಲವು ಮನೆಗಳಿಗೆ ಬೆಂಕಿಹಚ್ಚಿದ್ದ ಪುಂಡರು

Date:

ಸ್ಥಳೀಯ ಜಾತ್ರೆಗಾಗಿ ಚಂದಾ ಸಂಗ್ರಹದ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ ಭುಗಿಲೆದ್ದಿದ್ದು, ಕೋಮು ಸಂಘರ್ಷಕ್ಕೆ‌ ಕಾರಣವಾಗಿದೆ. ಘಟನೆಯು ತ್ರಿಪುರಾದ ಉನಕೋಟಿ ಜಿಲ್ಲೆಯ ಸೈದರ್ಪರ್ ಗ್ರಾಮದಲ್ಲಿ ನಡೆದಿದೆ.‌ ಸುಮಾರು 10 ಮಂದಿ ಗಾಯಗೊಂಡಿದ್ದು, ಹಲವಾರು ಮನೆಗಳು ಸುಟ್ಟುಹೋಗಿವೆ ಎಂದು ವರದಿಯಾಗಿದೆ.

- Advertisement -

ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸೈದರ್ಪರ್ ಗ್ರಾಮದಲ್ಲಿ ಶನಿವಾರ ರಾತ್ರಿ ನಿಷೇಧಾಜ್ಞೆ ಹೊರಡಿಸಿ ತ್ರಿಪುರ ಸರ್ಕಾರ ಆದೇಶಿಸಿದೆ. ಅಲ್ಲದೆ, ಘರ್ಷಣೆ ನಡೆದ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಭದ್ರತಾ ಪಡೆಗಳ ದೊಡ್ಡ ತುಕಡಿಯನ್ನು ನಿಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಚಂದಾ ವಸೂಲಿ ವಿವಾದವು ಕೋಮು ತಿರುವು ಪಡೆದುಕೊಂಡ ನಂತರ ಘರ್ಷಣೆಗಳು ಭುಗಿಲೆದ್ದಿವೆ. ಇದು ಬೆಂಕಿ ಹಚ್ಚುವಿಕೆ ಮತ್ತು ವಿಧ್ವಂಸಕ ಘಟನೆಗಳಿಗೆ ಕಾರಣವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘರ್ಷಣೆಯಲ್ಲಿ ಹಲವಾರು ಆಸ್ತಿಗಳಿಗೆ ಹಾನಿಯಾಗಿದೆ. ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕುಮಾರ್‌ಘಾಟ್ ಉಪವಿಭಾಗದಾದ್ಯಂತ 48 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕನಿಷ್ಠ ಎಂಟು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ‌ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಫಾತಿಕ್ರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಸೈದರ್ಪರ್ ಗ್ರಾಮದಲ್ಲಿ ಜನರ ಗುಂಪೊಂದು ಮರ ತುಂಬಿದ ವಾಹನವನ್ನು ತಡೆದು ಜಾತ್ರೆಗೆ ಚಂದಾ ನೀಡುವಂತೆ ಒತ್ತಾಯಿಸಿದ್ದು ಘರ್ಷಣೆಗೆ ಮುಲ‌ಕಾರಣವೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...