ಜಂತರ್‌ ಮಂತರ್‌ ಬಳಿ ಕಲ್ಲು ತುಂಬಿದ ಟ್ರಕ್‌; ಪ್ರತಿಭಟನೆಗೆ ಕಳಂಕ ತರಲು ಮೋದಿ ಸರ್ಕಾರದ ಯತ್ನ: ಸಿಜೆಪಿ ಆರೋಪ

Date:

ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಲ್ಲುಗಳನ್ನು ತುಂಬಿದ ಟ್ರಕ್‌ವೊಂದನ್ನು ನಿಲ್ಲಿಸಲಾಗಿದೆ. ನಮ್ಮ ಶಾಂತಿಯುವ ಪ್ರತಿಭಟನೆಯನ್ನು ಹಿಂಸಾತ್ಮಕವಾಗಿ ಬಿಂಬಿಸಲು ಮತ್ತು ಹೋರಾಟಕ್ಕೆ ಕಳಂಕ ತರಲು ಸರ್ಕಾರವೇ ಇಲ್ಲಿ ಟ್ರಕ್‌ಅನ್ನು ತಂದು ನಿಲ್ಲಿಸಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಆರೋಪಿಸಿದೆ.

- Advertisement -

ಸ್ಥಳದಲ್ಲಿ ಮುಂಚಿತವಾಗಿಯೇ ಕಲ್ಲುಗಳನ್ನು ಸಂಗ್ರಹಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ. ಬಳಿಕ ಇದೇ ಕಲ್ಲುಗಳನ್ನು ಬಳಸಿ ಪ್ರತಿಭಟನಾಕಾರರ ವಿರುದ್ಧ ಕಲ್ಲು ತೂರಾಟದ ಆರೋಪ ಹೊರಿಸುವ ಸಾಧ್ಯತೆ ಇದೆ ಎಂದು ಸಿಜೆಪಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಕಲ್ಲು ತುಂಬಿದ ಟ್ರಕ್‌ನ ವಿಡಿಯೋವನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದು, “ಪ್ರತಿಭಟನಾ ಸ್ಥಳದಲ್ಲಿ ಕಲ್ಲು ತೂರಾಟ ನಡೆಯುವಂತೆ ಮಾಡಿ, ಅದರ ಹೊಣೆಯನ್ನು ಪ್ರತಿಭಟನಾಕಾರರ ಮೇಲೆಯೇ ಹೊರಿಸುವ ಸಂಚು ರೂಪಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗೆ ಆಗ್ರಹಿಸಿ ಹಲವು ದಿನಗಳಿಂದ ಜಂತರ್‌ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಜುಲೈ 20 (ಇಂದಿನಿಂದ) ಮುಂಗಾರು ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಿಜೆಪಿ ‘ಸಂಸತ್‌ ಚಲೊ’ ಮೆರವಣಿಗೆಗೂ ಕರೆ ನೀಡಿತ್ತು.

ಈ ಮೆರವಣಿಗೆಗೆ ಪರಿಸರ ಹೋರಾಟಗಾರ, ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ನೇತೃತ್ವ ವಹಿಸಬೇಕಾಗಿತ್ತು. ಆದರೆ, ದೆಹಲಿ ಹೈಕೋರ್ಟ್‌ ಆದೇಶದ ಮೇರೆಗೆ ಅವರನ್ನು ಪೊಲೀಸರು ಬಲವಂತವಾಗಿ ಹೊತ್ತೊಯ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಅನುಪಸ್ಥಿತಿಯಲ್ಲೇ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ. ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ.

ಇದೀಗ, ಸರ್ಕಾರವು ಸಿಜೆಪಿಯ ನಿಯೋಗದೊಂದಿಗೆ ಮಾತುಕತೆ ನಡೆಸಲು ಮುಂದಾಗಿದೆ. ಮ್ಯಾಜಿಸ್ಟೇಟ್ ಅಧಿಕಾರಿಗಳು ಅಥವಾ ದೆಹಲಿ ಸರ್ಕಾರದ ವಕ್ತಾರರನ್ನು ಮಾತುಕತೆಗೆ ಕಳಿಸುವುದಾಗಿ ಸರ್ಕಾರ ಹೇಳಿದೆ. ಆದರೆ, ಮಾತುಕತೆಗೆ ಪ್ರಧಾನಿ ಮೋದಿ ಅಥವಾ ಕೇಂದ್ರ ಸಚಿವ ಸಂಪುಟದ ಸಚಿವರೇ ಬರಬೇಕೆಂದು ಸಿಜೆಪಿ ಪಟ್ಟುಹಿಡಿದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...