ಕಾರಿನ ಮೇಲೆ ಲಾರಿ ಉರುಳಿ ಬಿದ್ದು ಚಿಕ್ಕಬಳ್ಳಾಪುರ ಮೂಲದ ಮೂವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ನಡೆದಿದೆ.
ಮೃತರನ್ನು ಚಿಕ್ಕಬಳ್ಳಾಪುರ ತಾಲೂಕಿನ ಹರಿಸ್ಥಳದ ಮುನಿವೆಂಕಟ ರೆಡ್ಡಿ, ಚಾಲಕ ರಮೇಶ, ಮಂಜುನಾಥ್ ಎಂದು ಗುರುತಿಸಲಾಗಿದೆ. ಮತ್ತೊರ್ವನಿಗೆ ಗಂಭೀರ ಗಾಯವಾಗಿದೆ ಎಂಬ ಮಾಹಿತಿ ಲಭಿಸಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಹದಗೆಟ್ಟ ರಸ್ತೆಯಲ್ಲಿ ನಿಲ್ಲದ ಅಪಘಾತ; ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಛೀಮಾರಿ
ತಿರುಪತಿಗೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ಭೀಕರ ಅಪಘಾತ ನಡೆದಿದೆ ಎಂದು ಹೇಳಲಾಗಿದೆ. ಸದ್ಯ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಎಲ್.ಸುಬ್ಬರಾಯುಡು ಸ್ಥಳಕ್ಕೆ ಧಾವಿಸಿದ್ದು ಚಂದ್ರಗಿರಿ ಮತ್ತು ಭಾಕರಪೇಟ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.
