ರೈಲಿನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಟಿಟಿಇ; ಆರೋಪ

Date:

ಅಹ್ಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ತನ್ನ ಮೇಲೆ ಟಿಟಿಇ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಯುವತಿಯೊಬ್ಬರು ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಗೋರಕ್‌ಪುರ ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಪೊಲೀಸರು ದೇವರಿಯಾ ರೈಲ್ವೇ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ.

- Advertisement -

ಸಂತ್ರಸ್ತ ಯುವತಿ ಉತ್ತರ ಪ್ರದೇಶದ ಮೌ ಜಿಲ್ಲೆಯವರಾಗಿದ್ದು, ಗೋರಖ್‌ಪುರದಲ್ಲಿ ವಾಸಿಸುತ್ತಿದ್ದಾರೆ. ಅವರು ಸೇನಾ ನೇಮಕಾತಿಗಾಗಿ ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ತನ್ನ ಮೇಲೆ ಟಿಟಿಇ ರಾಹುಲ್ ಕುಮಾರ್ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾರೆಂದು ಯುವತಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ;...

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ಪೊಲೀಸರಿಗೆ ದೂರು ನೀಡಿರುವ ಯುವತಿ, “ತಾನು ಇಂದ್ರಾದಿಂದ ಗೋರಕ್‌ಪುರಕ್ಕೆ ಅಹ್ಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾನುವಾರ ರಾತ್ರಿ ಪ್ರಯಾಣಿಸುತ್ತಿದೆ. ಈ ವೇಳೆ, ರೈಲು ದೇವರಿಯಾ ಪ್ರದೇಶದಲ್ಲಿ ಸಂಚರಿಸುತ್ತಿದ್ದಾಗ, ಟಿಟಿಇ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ರೈಲು ನಿಲ್ದಾಣದಲ್ಲಿ ಭಾರೀ ಜನಸಂದಣಿಯಿದ್ದ ಕಾರಣ ನನಗೆ ಟಿಕೆಟ್ ಖರೀದಿಸಲು ಸಾಧ್ಯವಾಗಲಿಲ್ಲ. ಟಿಕೆಟ್ ಪರಿಶೀಲನೆಗೆಂದು ಬಂದ ಟಿಟಿಇ, ಟಿಕೆಟ್‌ ವಿಚಾರವಾಗಿ ನನ್ನನ್ನು ಪ್ರಶ್ನಿಸಿದರು. ಬಳಿಕ ದಂಡವನ್ನು ಪಡೆದು ಸೀಟ್ ವ್ಯವಸ್ಥೆ ಮಾಡಿಕೊಡುವುದಾಗಿ ಎಸಿ ಫಸ್ಟ್ ಕ್ಲಾಸ್ ಕೋಚ್‌ನ ಕ್ಯಾಬಿನ್‌ಗೆ ಕರೆದೊಯ್ದರು. ಅಲ್ಲಿ, ನನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದರು. ಘಟನೆ ಬಗ್ಗೆ ಬಹಿರಂಗಪಡಿಸಿದರೆ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದರು” ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಆಡಳಿತ ಬಿತ್ತಿದ ಭಯ ತೊಲಗಿದ್ದು ಒಂದು ಅದ್ಭುತ: ನೇಹಾ ಬೋರಾ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ...

ಮತದಾನದ ಹಕ್ಕು ಕಳೆದುಕೊಂಡವರ ನೆರವಿಗೆ ಕಾಂಗ್ರೆಸ್ ಬೂತ್ ಮಟ್ಟದ ಅಭಿಯಾನ: ‘ಮತ ರಕ್ಷಕ’ರ ನೇಮಕಕ್ಕೆ ತೀರ್ಮಾನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೂಲಕ ಮತದಾರರ...

SIR ನಲ್ಲಿ ಉತ್ತರ ಪ್ರದೇಶದ ಮತದಾರರ ಪಟ್ಟಿಗೆ 16.18 ಲಕ್ಷ ನಿಗೂಢ ಮತದಾರರ ಸೇರ್ಪಡೆ: ಏನಿದು ವರದಿ?

ಉತ್ತರ ಪ್ರದೇಶದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಆರಂಭಿಕ ಹಂತಗಳಲ್ಲಿ 16.18...