ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

Date:

Advertisements

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದ ವ್ಯಕ್ತಿಯೊಬ್ಬರಿಗೆ, ಆಸ್ಪತ್ರೆಯಲ್ಲಿ ಹಾಸಿಗೆಗಳು ಹಾಗೂ ಆಮ್ಲಜನಕವಿಲ್ಲ ಎಂಬ ಕಾರಣ ನೀಡಿ, ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಬಾಲಕನಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಏರ್ಪಾಡು ಮಾಡದ ಕಾರಣ ಆ ಬಾಲಕ ಮೃತಪಟ್ಟಿರುವ ಆಘಾತಕಾರಿ ಘಟನೆ ಅಯೋಧ್ಯೆಯ ರಾಜಶ್ರೀ ದಶರಥ್ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ.

ಕಳೆದ ಸೋಮವಾರ ಸರ್ಕಾರಿ ಆಸ್ಪತ್ರೆಯಲ್ಲಿ ತನ್ನ ಪುತ್ರನನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದರಿಂದ, ಹತಾಶ ತಂದೆಯು ತನ್ನ 12 ವರ್ಷದ ಪುತ್ರನನ್ನು ತಮ್ಮ ಹೆಗಲ ಮೇಲೆ ಹಾಕಿಕೊಂಡು ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಬಾಲಕನನ್ನು ಪರೀಕ್ಷಿಸಿದ ವೈದ್ಯರು, ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಿದ್ದಾರೆ.

ಈ ಘಟನೆಗೆ ಕಾರಣರಾದ ಮೂವರು ವೈದ್ಯರನ್ನು ಅಮಾನತುಗೊಳಿಸಿರುವ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಸತ್ಯಜೀತ್ ವರ್ಮ, ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸದನದ ಘನತೆಯನ್ನು ಮಣ್ಣುಪಾಲು ಮಾಡಿದ ಮಹನೀಯರು

ಈ ಕುರಿತು ಪ್ರತಿಕ್ರಿಯಿಸಿದ ಅವರು, “ತುರ್ತು ಚಿಕಿತ್ಸಾ ವಿಭಾಗದಲ್ಲಿ ಇಬ್ಬರು ಹೆಚ್ಚುವರಿ ವೈದ್ಯರನ್ನು ನಿಯೋಜಿಸಿದ್ದರೂ, ಇದು ಬಹುದೊಡ್ಡ ನಿರ್ಲಕ್ಷ್ಯದ ಘಟನೆಯಾಗಿದೆ. ನಾನು ನನ್ನ ರೌಂಡ್ಸ್ ವೇಳೆ ಇಂತಹುದೇ ನಿರ್ಲಕ್ಷ್ಯದ ಘಟನೆಗಳನ್ನು ಗಮನಿಸಿ, ಅಂತಹ ಮಕ್ಕಳಿಗೆ ಚಿಕಿತ್ಸೆ ಒದಗಿಸಿದ್ದೆ. ಆಸ್ಪತ್ರೆಯಲ್ಲಿ ಸಾಕಷ್ಟು ಹಾಸಿಗೆಗಳು ಹಾಗೂ ಆಮ್ಲಜನಕ ಸೌಲಭ್ಯವಿದೆ. ಘಟನೆಗೆ ಕಾರಣರಾಗಿರುವ ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಷಲಾಗುವುದು” ಎಂದು ಭರವಸೆ ನೀಡಿದ್ದಾರೆ.

ಅಯೋಧ್ಯೆಯಲ್ಲಿನ ಹರಿಂಗ್ತೊಂಗಂಜ್ ಗ್ರಾಮದ ಮುಹಮ್ಮದ್ ಮುನೀರ್ ಎಂಬುವವರು ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ತಮ್ಮ ಪುತ್ರ ಮುಹಮ್ಮದ್ ಆರಿಫ್ ನನ್ನು ನಕಲಿ ವೈದ್ಯರೊಬ್ಬರ ಬಳಿ ಕರೆದೊಯ್ದಿದ್ದಾರೆ. ಆದರೆ, ಆರಿಫ್‌ನ ಜ್ವರ ಮತ್ತು ಕೆಮ್ಮು ಮತ್ತಷ್ಟು ವಿಷಮಿಸಿದೆ. ಕೂಡಲೇ ಆತನನ್ನು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಅಲ್ಲಿಯ ವೈದ್ಯರು ವೈದ್ಯಕೀಯ ಕಾಲೇಜಿಗೆ ಬಾಲಕನನ್ನು ಕರೆದೊಯ್ಯುವಂತೆ ಶಿಫಾರಸು ಮಾಡಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ ಬಾಲಕನಿಗೆ ವೈದ್ಯಕೀಯ ಕಾಲೇಜಿನ ವೈದ್ಯರು ಸೂಕ್ತ ಚಿಕಿತ್ಸೆ ನೀಡದೆ ಇದ್ದುದರಿಂದ, ಆತ ಮೃತಪಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ದೆಹಲಿಯ 50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ದೆಹಲಿಯ 50ಕ್ಕೂ ಅಧಿಕ ಶಾಲೆಗಳಿಗೆ ಬುಧವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ...

Download Eedina App Android / iOS

X