ರೈತನಿಗೆ ಲಂಚದ ಬೆದರಿಕೆ: ಪಕ್ಷದ ಕಾರ್ಯದರ್ಶಿಯನ್ನು 6 ಗಂಟೆಯಲ್ಲೇ ಪಕ್ಷದಿಂದ ವಜಾಗೊಳಿಸಿದ ಟಿವಿಕೆ

Date:

ರೈತರೊಬ್ಬರಿಗೆ ಒಂದು ಲಕ್ಷ ರೂಪಾಯಿ ಲಂಚ ನೀಡುವಂತೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ, ತಮಿಳುನಾಡು ವೆಟ್ರಿ ಕಳಗಂ (TVK) ಪಕ್ಷದ ಜಿಲ್ಲಾ ಜಂಟಿ ಕಾರ್ಯದರ್ಶಿ ಪುಲವೇಂದ್ರನ್ ಅವರನ್ನು ಕೇವಲ 6 ಗಂಟೆಗಳ ಒಳಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ.

- Advertisement -

ವರದಿಗಳ ಪ್ರಕಾರ, ಕಡಲೂರು ಜಿಲ್ಲೆಯ ಕಟ್ಟುಮನ್ನಾರ್ಕೋವಿಲ್ ಬಳಿಯ ಕರುಣಾಕರನಲ್ಲೂರಿನ ನಿವಾಸಿಯಾದ ಪುಲವೇಂದ್ರನ್, ಕಂದಾಯ ಇಲಾಖೆಯಿಂದ ಅಧಿಕೃತ ಅನುಮತಿ ಪಡೆದು ಮಣ್ಣು ತೆಗೆಸುತ್ತಿದ್ದ ರೈತರೊಬ್ಬರನ್ನು ಸಂಪರ್ಕಿಸಿದ್ದರು. ‘ಪಕ್ಷದ ನಿಧಿ’ಗಾಗಿ 1 ಲಕ್ಷ ರೂಪಾಯಿ ನೀಡಬೇಕು, ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ರೈತನಿಗೆ ನೇರ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪುಲವೇಂದ್ರನ್ ಅವರ ಈ ಧನದಾಹದಿಂದ ಆಕ್ರೋಶಗೊಂಡ ಕಂದಮಂಗಲಂ ಗ್ರಾಮಸ್ಥರು, ಅವರ ಕಾರನ್ನು ತಡೆದು ಮುತ್ತಿಗೆ ಹಾಕಿದ್ದಲ್ಲದೆ, ಕಾರಿನ ಗಾಜುಗಳನ್ನು ಪುಡಿಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಸಾರ್ವಜನಿಕರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಈ ಇಡೀ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿ, ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ಆರೋಪಿ ಬುಲವೇಂದ್ರನ್ (ಪುಲವೇಂದ್ರನ್) ವಿರುದ್ಧ ಟಿವಿಕೆ ಪಕ್ಷದ ಹೈಕಮಾಂಡ್‌ಗೂ ದೂರು ಸಲ್ಲಿಕೆಯಾಗಿತ್ತು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪಕ್ಷದ ನಾಯಕತ್ವ, ತಕ್ಷಣವೇ ಕಾರ್ಯಪ್ರವೃತ್ತವಾಗಿದೆ.ಅವರನ್ನು ಪಕ್ಷದಿಂದ ವಜಾಗೊಳಿಸಿದೆ.

“ಪಕ್ಷದ ನಿಯಮಗಳನ್ನು ಮೀರಿ ವರ್ತಿಸಿದ, ಸಂಘಟನೆಯ ಗೌರವಕ್ಕೆ ಕಳಂಕ ತಂದ ಹಾಗೂ ಮುಖ್ಯಮಂತ್ರಿ ವಿಜಯ್ ಅವರ ವರ್ಚಸ್ಸಿಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಶಿಸ್ತು ಕ್ರಿಯಾ ಸಮಿತಿಯ ಅನುಮೋದನೆಯೊಂದಿಗೆ ಪುಲವೇಂದ್ರನ್‌ನನ್ನು ಪಕ್ಷದ ಮೂಲ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ,” ಎಂದು ಟಿವಿಕೆ ಜಿಲ್ಲಾ ಕಾರ್ಯದರ್ಶಿ ಸೀನುವಾಸನ್ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...