ಡಿಎಂಕೆ, ಎಐಎಡಿಎಂಕೆ ಸರ್ಕಾರ ರಚಿಸಲು ಮುಂದಾದರೆ ಸಾಮೂಹಿಕ ರಾಜೀನಾಮೆ ವದಂತಿ: ಟಿವಿಕೆ ಸ್ಪಷ್ಟನೆ

Date:

ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ನಮ್ಮ ಎಲ್ಲ 108 ಶಾಸಕರು ರಾಜೀನಾಮೆ ನೀಡುವುದಾಗಿ ಜೋಸೆಫ್ ವಿಜಯ್ ಅವರ ಟಿವಿಕೆ ಪಕ್ಷ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದ್ದು ಈ ಬಗ್ಗೆ ಟಿವಿಕೆ ಸ್ಪಷ್ಟನೆ ನೀಡಿದೆ.

- Advertisement -

ಬಹುಮತ ಇಲ್ಲದ ಕಾರಣಕ್ಕೆ ಸರ್ಕಾರ ನಡೆಸಲು ಅವಕಾಶ ನೀಡಲು ತಮಿಳುನಾಡು ರಾಜ್ಯಪಾಲರು ಅವಕಾಶ ನೀಡಿಲ್ಲ. ಆದರೆ ರಾಜಕೀಯವಾಗಿ ಬದ್ಧ ವಿರೋಧಿಗಳಾದ ಡಿಎಂಕೆ ಮತ್ತು ಎಐಎಡಿಎಂಕೆ ಜತೆಯಾಗಿ ಸರ್ಕಾರ ರಚಿಸಲಿದೆ ಎಂಬ ವದಂತಿಗಳು ಹರಡುತ್ತಿವೆ. ಹೀಗೆ ಅವಕಾಶ ನೀಡಿದರೆ ಟಿವಿಕೆ ರಾಜೀನಾಮೆಯ ಎಚ್ಚರಿಕೆ ನೀಡಿದೆ ಎಂಬ ವದಂತಿಯೂ ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ತಮಿಳುನಾಡು | ಬಹುಮತ ಕೊರತೆ; ಎಡಪಕ್ಷಗಳು, ವಿಸಿಕೆ ಬೆಂಬಲ ಪಡೆಯಲು ಜೋಸೆಫ್ ವಿಜಯ್ ಯತ್ನ

ಈ ಬಗ್ಗೆ ಸ್ಪಷ್ಟನೆ ನೀಡಿರುವ ಟಿವಿಕೆ ನಾಯಕರು, ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ. ಟಿವಿಕೆ ಸದ್ಯ ಸರ್ಕಾರ ರಚನೆಯ ಕಡೆ ಗಮನಹರಿಸಿದೆ. ಸಿಪಿಐ, ಸಿಪಿಐಎಂ, ವಿಸಿಕೆ ಬೆಂಬಲ ಕೋರಿದೆ ಎಂದು ತಿಳಿಸಿದ್ದಾರೆ.

117 ಶಾಸಕರ ಬೆಂಬಲವಿದ್ದರೆ ಮಾತ್ರ ವಿಜಯ್‌ಗೆ ಸರ್ಕಾರ ರಚಿಸಲು ಆಹ್ವಾನ ನೀಡುವುದಾಗಿ ರಾಜ್ಯಪಾಲರು ಹೇಳಿದ್ದಾರೆ. ಆದರೆ ವಿಜಯ್ ಮೈತ್ರಿಕೂಟದಲ್ಲಿ 113 ಶಾಸಕರು (ಟಿವಿಕೆಯ 108 ಮತ್ತು ಕಾಂಗ್ರೆಸ್‌ನ 5) ಇದ್ದು, ಇನ್ನೂ ನಾಲ್ಕು ಸ್ಥಾನಗಳ ಕೊರತೆಯಿದೆ. ಆರು ಸದಸ್ಯ ಬಲ ಹೊಂದಿರುವ ಎಡಪಕ್ಷಗಳು, ಇತರೆ ಪಕ್ಷಗಳು ಟಿವಿಕೆಗೆ ಬೆಂಬಲ ನೀಡಿದರೆ ವಿಜಯ್ ಸರ್ಕಾರ ರಚಿಸಲು ಸಾಧ್ಯವಾಗಲಿದೆ.

ಇನ್ನು ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಕಾರಣ ಸರ್ಕಾರ ರಚಿಸಲು ಅವಕಾಶ ನೀಡಲಾದ ಕರ್ನಾಟಕದ ವಿಚಾರವನ್ನು ವಿಜಯ್ ಅವರ ಕಾನೂನು ತಂಡ ರಾಜ್ಯಪಾಲರ ಮುಂದಿಟ್ಟಿದೆ. ಈ ಆಧಾರದಲ್ಲಿ 24 ಗಂಟೆಗಳ ಅವಧಿಯಲ್ಲಿ, ತಮಿಳುನಾಡು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಎರಡು ಬಾರಿ ವಿಜಯ್ ಭೇಟಿಯಾಗಿದ್ದಾರೆ. ಆದರೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಹೇಳಿದ್ದಾರೆ.

ಕರ್ನಾಟಕದಲ್ಲಿ ನಡೆದಿದ್ದೇನು?

2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ನಂತರ ಒಟ್ಟು 224 ಕ್ಷೇತ್ರಗಳ ಪೈಕಿ ಬಿಜೆಪಿ 104 ಸ್ಥಾನಗಳನ್ನು ಗೆದ್ದು ‘ಏಕೈಕ ದೊಡ್ಡ ಪಕ್ಷ’ವಾಗಿ ಹೊರಹೊಮ್ಮಿತು. ಕಾಂಗ್ರೆಸ್ 78 ಮತ್ತು ಜೆಡಿಎಸ್ 37 ಸ್ಥಾನಗಳನ್ನು ಪಡೆದಿದ್ದವು. ಅಂದಿನ ಕರ್ನಾಟಕದ ರಾಜ್ಯಪಾಲರಾಗಿದ್ದ ವಜುಭಾಯಿ ವಾಲಾ ಅವರು ಬಿಜೆಪಿ ಏಕೈಕ ದೊಡ್ಡ ಪಕ್ಷ ಎಂಬ ಕಾರಣಕ್ಕೆ ಸರ್ಕಾರ ರಚಿಸಲು ಬಿ.ಎಸ್. ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದರು.

ಈ ನಿರ್ಧಾರದ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರೂ, ಕೋರ್ಟ್ ತಡೆಯಾಜ್ಞೆ ನೀಡದ ಕಾರಣ 2018ರ ಮೇ 17ರಂದು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಬಹುಮತ ಸಾಬೀತುಪಡಿಸಲು 15 ದಿನಗಳ ಕಾಲಾವಕಾಶ ನೀಡಲಾಗಿತ್ತಾದರೂ, ಸುಪ್ರೀಂ ಕೋರ್ಟ್ ಅದನ್ನು 24 ಗಂಟೆಗಳಿಗೆ ಕಡಿತಗೊಳಿಸಿತ್ತು. ವಿಧಾನಸಭೆಯಲ್ಲಿ ಸಂಖ್ಯಾಬಲದ ಕೊರತೆಯಿಂದಾಗಿ ವಿಶ್ವಾಸಮತ ಯಾಚನೆಗೆ ಮೊದಲೇ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

ಇದನ್ನು ಓದಿದ್ದೀರಾ? ಕಾಂಗ್ರೆಸ್‌ನಿಂದ ಮೈತ್ರಿ ಧರ್ಮದ ಉಲ್ಲಂಘನೆ: ‘ಹಳೆಯ ರಾಜಕೀಯ ಚಾಳಿ’ ಖಂಡಿಸಿ ಡಿಎಂಕೆ ಮಹತ್ವದ ನಿರ್ಣಯ

ಟಿವಿಕೆ ಶಾಸಕರು ರಾಜೀನಾಮೆ ನೀಡಿದರೆ ಏನಾಗಲಿದೆ?

ಟಿವಿಕೆಯ ಎಲ್ಲ 108 ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಿದರೆ ರಾಜ್ಯದ ರಾಜಕೀಯದಲ್ಲಿ ಅನಿಶ್ಚಿತತೆ ಉಂಟಾಗಲಿದೆ. ಡಿಎಂಕೆ ಮತ್ತು ಎಐಡಿಎಂಕೆ ಮೈತ್ರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಬಹುದು. ಇಲ್ಲವಾದರೆ ಮರು ಚುನಾವಣೆ ನಡೆಸಬೇಕಾಗಬಹುದು. ಈ ಎಲ್ಲ ಕ್ಷೇತ್ರಗಳು ಉಪಚುನಾವಣೆ ಎದುರಿಸಬೇಕಾಗಬಹುದು. ಇದಕ್ಕೂ ಮುಂದುವರೆದು ರಾಜ್ಯದಲ್ಲಿ ಸಾಂವಿಧಾನಿಕ ಯಂತ್ರಾಂಗ ಕುಸಿದಿದೆ ಎಂದು ಪರಿಗಣಿಸಿ ರಾಜ್ಯಪಾಲರು ಸಂವಿಧಾನದ 356ನೇ ವಿಧಿಯಡಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು. ಆದರೆ ಇಂತಹ ಚರ್ಚೆಯೇ ನಡೆದಿಲ್ಲ ಎಂದು ಈಗಾಗಲೇ ಟಿವಿಕೆ ಸ್ಪಷ್ಟಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...