ವರದಕ್ಷಿಣೆ ಸಾವು: ನಿವೃತ್ತ ನ್ಯಾಯಾಧೀಶರ ಮಗನಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

Date:

ನಿವೃತ್ತ ನ್ಯಾಯಾಧೀಶರ ಸೊಸೆಯಾಗಿರುವ, ನೋಯ್ಡಾ ಮೂಲದ 33 ವರ್ಷದ ತ್ವಿಷಾ ಶರ್ಮಾ ಅವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಗಂಡ ಹಾಗೂ ವಕೀಲ ಸಮರ್ಥ್ ಸಿಂಗ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಭೋಪಾಲ್ ನ್ಯಾಯಾಲಯವು ಸೋಮವಾರ ತಿರಸ್ಕರಿಸಿದೆ.

- Advertisement -

ತ್ವಿಷಾ ಅವರ ಕುಟುಂಬದವರು ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪ ಮಾಡಿದ್ದಾರೆ. ಇದರ ಮಧ್ಯೆ, ಸಮರ್ಥ್ ತಾಯಿ ಹಾಗೂ ನಿವೃತ್ತ ನ್ಯಾಯಾಧೀಶರಾಗಿರುವ ಗಿರಿಬಾಲಾ ಸಿಂಗ್, ಮೃತ ತನ್ನ ಸೊಸೆ ‘ಮಾದಕವ್ಯಸನಿ’ ಆಗಿದ್ದಳು ಎಂದು ಹೊಸ ಆರೋಪ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ತ್ವಿಷಾ ಶರ್ಮಾ ಅವರು ಡಿಸೆಂಬರ್ 2025 ರಲ್ಲಿ ಭೋಪಾಲ್ ಮೂಲದ ವಕೀಲ ಸಮರ್ಥ್ ಸಿಂಗ್ ಅವರನ್ನು ವಿವಾಹವಾಗಿದ್ದರು. ಆದರೆ, ಮೇ 12 ರಂದು ಭೋಪಾಲ್‌ನಲ್ಲಿರುವ ತನ್ನ ಗಂಡನ ಮನೆಯಲ್ಲಿ ತ್ವಿಷಾ ಶವವಾಗಿ ಪತ್ತೆಯಾಗಿದ್ದಾರೆ. ತನ್ನ ಮಗಳಿಗೆ ಗಂಡ ಮತ್ತು ಅತ್ತೆ(ಮಾಜಿ ನ್ಯಾಯಾಧೀಶೆ)-ಮಾವ ನಿರಂತರ ಮಾನಸಿಕ ಹಿಂಸೆ ಮತ್ತು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ತ್ವಿಷಾ ಅವರ ಕುಟುಂಬದವರು ಗುರುತರ ಆರೋಪ ಮಾಡಿದ್ದಾರೆ.

ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮರ್ಥ್ ಸಿಂಗ್ ಬಂಧನಕ್ಕೆ ಸಹಕರಿಸುವಂತಹ ನಿಖರ ಮಾಹಿತಿ ನೀಡಿದವರಿಗೆ ಭೋಪಾಲ್ ಪೊಲೀಸರು ರೂ. 10,000 ನಗದು ಬಹುಮಾನವನ್ನು ಘೋಷಿಸಿದ್ದಾರೆ. ಈ ಕುರಿತು ಮಾತನಾಡಿದ ಸಹಾಯಕ ಪೊಲೀಸ್ ಕಮಿಷನರ್ ರಜನೀಶ್ ಕಶ್ಯಪ್ ಕೌಲ್, “ಆರೋಪಿಯನ್ನು ಬಂಧಿಸಲು 6 ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಆರೋಪಿಯು ದೇಶ ಬಿಟ್ಟು ಹೋಗದಂತೆ ತಡೆಯಲು ಪಾಸ್‌ಪೋರ್ಟ್ ಕಚೇರಿಗೂ ಪತ್ರ ಬರೆಯಲಾಗಿದೆ,” ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮುಸ್ಲಿಮರು ಕೇವಲ ವೋಟು ಹಾಕಿಕೊಂಡು ಇರಬೇಕಾ? ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

ಸೋಮವಾರ ಈ ಪ್ರಕರಣವು ನಾಟಕೀಯ ತಿರುವು ಪಡೆದುಕೊಂಡಿದ್ದು, ಸಮರ್ಥ್ ಸಿಂಗ್ ಪರವಾಗಿ ಅವರ ತಾಯಿ ಗಿರಿಬಾಲಾ ಸಿಂಗ್ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ ಸಂಚಲನಾತ್ಮಕ ಅಂಶಗಳನ್ನು ಉಲ್ಲೇಖಿಸಿದ್ದಾರೆ. “ತ್ವಿಷಾ ಶರ್ಮಾ ಒಬ್ಬ ಮಾದಕವ್ಯಸನಿ ಆಗಿದ್ದಳು. ಆಕೆಗೆ ಮಾದಕ ದ್ರವ್ಯ ಸಿಗದಿದ್ದಾಗ ಅತಿಯಾದ ಕೋಪ ಮತ್ತು ಕೈಕಾಲುಗಳು ನಡುಗುವ ಸಮಸ್ಯೆ ಇತ್ತು. ಆಕೆ ಮನೋವೈದ್ಯರ ಬಳಿ ಚಿಕಿತ್ಸೆ ಮತ್ತು ಆಪ್ತಸಲಹೆ ಪಡೆಯುತ್ತಿದ್ದಳು,” ಎಂದು ಅರ್ಜಿಯಲ್ಲಿ ಹೇಳಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ತ್ವಿಷಾ ಶರ್ಮಾ ಅವರ ಅತ್ತೆ ಗಿರಿಬಾಲಾ ಸಿಂಗ್ ಅವರು ಭೋಪಾಲ್ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಅವರು ಫೆಬ್ರವರಿ 2023 ರಲ್ಲಿ ತಮ್ಮ ಸೇವೆಯಿಂದ ನಿವೃತ್ತರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...