ತ್ವಿಶಾ ಶರ್ಮಾ ಪ್ರಕರಣ: ನಿವೃತ್ತ ನ್ಯಾಯಾಧೀಶೆಯಾಗಿದ್ದ ಅತ್ತೆಯ ಜಾಮೀನು ರದ್ದುಗೊಳಿಸಿದ ಎಂಪಿ ಹೈಕೋರ್ಟ್

Date:

ಮಧ್ಯಪ್ರದೇಶದ ಬಹುಚರ್ಚಿತ ತ್ವಿಶಾ ಶರ್ಮಾ ವರದಕ್ಷಿಣೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಯಾದ ತ್ವಿಶಾ ಅವರ ಅತ್ತೆ, ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರಿಗೆ ಕೆಳ ನ್ಯಾಯಾಲಯ ಮಂಜೂರು ಮಾಡಿದ್ದ ಮುಂಗಡ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದೆ.

- Advertisement -

ನ್ಯಾಯಮೂರ್ತಿ ದೇವನಾರಾಯಣ್ ಮಿಶ್ರಾ ಅವರಿದ್ದ ಪೀಠವು ಈ ಆದೇಶ ಹೊರಡಿಸಿದೆ. ಮೇ 12 ರಂದು ಭೋಪಾಲ್‌ನಲ್ಲಿ ತ್ವಿಶಾ ಶರ್ಮಾ ಅವರ ಶವ ಪತ್ತೆಯಾಗಿತ್ತು. ಇದಾದ ಕೇವಲ ಮೂರೇ ದಿನಗಳಲ್ಲಿ, ಅಂದರೆ ಮೇ 15 ರಂದು ಭೋಪಾಲ್‌ನ ಸೆಷನ್ಸ್ ನ್ಯಾಯಾಲಯವು ಗಿರಿಬಾಲಾ ಸಿಂಗ್ ಅವರಿಗೆ ಮುಂಗಡ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ತ್ವಿಶಾ ತಂದೆ ನವನಿಧಿ ಶರ್ಮಾ ಮತ್ತು ಮಧ್ಯಪ್ರದೇಶ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮರಣೋತ್ತರ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿದ ಹೈಕೋರ್ಟ್, ತ್ವಿಶಾ ಸಾವು ನೇಣು ಬಿಗಿದುಕೊಂಡಿದ್ದರಿಂದ ಸಂಭವಿಸಿದೆ. ಆದರೆ, ಅದಕ್ಕೂ ಮುನ್ನ ಆಕೆಯ ದೇಹದ ಮೇಲೆ 6 ಹೆಚ್ಚುವರಿ ಗಾಯಗಳಾಗಿದ್ದವು. ಆಕೆಯನ್ನು ನೇಣಿನಿಂದ ಕೆಳಗಿಳಿಸುವಾಗ ಅಥವಾ ಆಸ್ಪತ್ರೆಗೆ ಸಾಗಿಸುವಾಗ ಈ ಗಾಯಗಳಾಗಿಲ್ಲ ಎಂಬುದು ತನಿಖೆಯಿಂದ ಸ್ಪಷ್ಟವಾಗಿದೆ ಎಂಬುದನ್ನು ಗಮನಿಸಿದೆ.

ಮೃತ ತ್ವಿಶಾ ಅವರ ಕುಟುಂಬದ ಹೇಳಿಕೆಗಳು ಕೇವಲ ಆಕೆಯ ಪತಿ ಸಮರ್ಥ್ ಸಿಂಗ್ ವಿರುದ್ಧ ಮಾತ್ರವಲ್ಲದೆ, ಅತ್ತೆ ಗಿರಿಬಾಲಾ ಸಿಂಗ್ ವಿರುದ್ಧವೂ ಇವೆ. ಅಲ್ಲದೆ, ಸಾವಿಗೂ ಮುನ್ನ ತ್ವಿಶಾ ತನ್ನ ಕುಟುಂಬಕ್ಕೆ ಕಳುಹಿಸಿದ್ದ ಕೆಲವು ವಾಟ್ಸಾಪ್ ಸಂದೇಶಗಳಲ್ಲೂ ಅತ್ತೆಯ ಕಿರುಕುಳದ ಬಗ್ಗೆ ಉಲ್ಲೇಖವಿದೆ ಎಂದು ಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ತ್ವಿಶಾ ತಂದೆಯ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ, “ತ್ವಿಶಾ ಮೃತಪಟ್ಟಾಗ ಆಕೆಯ ಪೋಷಕರಿಗೆ ಮಾಹಿತಿಯನ್ನೇ ನೀಡಿರಲಿಲ್ಲ. ಹೀಗಾಗಿ ಇನ್ಕ್ವೆಸ್ಟ್ (ಮಹಜರು) ಪ್ರಕ್ರಿಯೆಯಲ್ಲೂ ಅವರು ಭಾಗಿಯಾಗಲು ಸಾಧ್ಯವಾಗಲಿಲ್ಲ” ಎಂದಿದ್ದರು.

ಇದನ್ನೂ ಓದಿ: ತ್ವಿಶಾ ಶರ್ಮಾ ಸಾವು ಪ್ರಕರಣ: ನ್ಯಾಯಾಲಯಕ್ಕೆ ಶರಣಾದ ಪತಿ

ಸರ್ಕಾರದ ಪರವಾಗಿ ತುಷಾರ್ ಮೆಹ್ತಾ, “ಕೆಳ ನ್ಯಾಯಾಲಯವು ಎಲ್ಲಾ ಸತ್ಯಾಸತ್ಯತೆಗಳನ್ನು ಪರಿಶೀಲಿಸದೆ, ಕೇವಲ 24 ಗಂಟೆಗಳ ಒಳಗಾಗಿ ಅತ್ಯಂತ ತರಾತುರಿಯಲ್ಲಿ ನಿವೃತ್ತ ನ್ಯಾಯಾಧೀಶೆಗೆ ಜಾಮೀನು ನೀಡಿದೆ. ಆರೋಪಿಯು ನ್ಯಾಯಾಂಗ ವ್ಯವಸ್ಥೆಯಲ್ಲಿದ್ದ ಪ್ರಭಾವಿ ವ್ಯಕ್ತಿಯಾಗಿದ್ದು, ಜಾಮೀನು ಸಿಕ್ಕ ತಕ್ಷಣ ಮಾಧ್ಯಮಗಳಿಗೆ ಸಂದರ್ಶನ ನೀಡಿ ಮೃತ ತ್ವಿಶಾ ಅವರ ಚಾರಿತ್ರ್ಯ ವಧೆ ಮಾಡಲು ಯತ್ನಿಸುತ್ತಿದ್ದಾರೆ. ಇದು ಸಾಕ್ಷಿಗಳ ಮೇಲೆ ಪ್ರಭಾವ ಬೀರುತ್ತದೆ” ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಭಾರತದಲ್ಲಿ ಹೆಣ್ಣುಮಕ್ಕಳಿಗೆ ಸಮಸ್ಯೆ ಬಂದಾಗ ‘ಹೊಂದಿಕೊಂಡು ಹೋಗು’ ಎಂದು ಪೋಷಕರು ಹೇಳುವ ಮಾತೇ ಕೊನೆಗೆ ಇಂತಹ ಆತ್ಮಹತ್ಯೆಗಳಿಗೆ ದಾರಿಯಾಗುತ್ತದೆ ಎಂದು ಅವರು ವಿಷಾದಿಸಿದರು.

ನೋಯ್ಡಾ ಮೂಲದ ತ್ವಿಶಾ ಶರ್ಮಾ ಮತ್ತು ಭೋಪಾಲ್‌ನ ವಕೀಲ ಸಮರ್ಥ್ ಸಿಂಗ್ ಡೇಟಿಂಗ್ ಆಪ್ ಮೂಲಕ ಪರಿಚಯವಾಗಿ, ಐದು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಆದರೆ ಮೇ 12 ರಂದು ಭೋಪಾಲ್‌ನ ತಮ್ಮ ನಿವಾಸದಲ್ಲಿ ತ್ವಿಶಾ ನಿಗೂಢವಾಗಿ ಸಾವನ್ನಪ್ಪಿದ್ದರು. ತ್ವಿಶಾ ಪೋಷಕರು ಅಳಿಯ ಮತ್ತು ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯದ ಆರೋಪ ಹೊರಿಸಿದ್ದಾರೆ. ಆರೋಪಿ ಗಿರಿಬಾಲಾ ಸಿಂಗ್ ನಿವೃತ್ತ ನ್ಯಾಯಾಧೀಶೆಯಾಗಿದ್ದು, ಸದ್ಯ ಮಧ್ಯಪ್ರದೇಶದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಹೈಕೋರ್ಟ್ ಅವರ ಮುಂಗಡ ಜಾಮೀನನ್ನು ರದ್ದುಗೊಳಿಸಿರುವುದರಿಂದ ಅವರ ಬಂಧನವಾಗುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...