ಮಹಾರಾಷ್ಟ್ರ: ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದವರ ಅಂಗಡಿಗಳನ್ನು ಧ್ವಂಸಗೊಳಿಸಿದ ಪಾಲಿಕೆ

Date:

Advertisements

ಮೂರು ದಿನಗಳ ನಂತರ ಎರಡು ಬಣಗಳ ನಡುವೆ ಹಿಂಸಾಚಾರ ನಡೆದ ನಂತರ ಮಹಾರಾಷ್ಟ್ರ ಥಾಣೆ ಜಿಲ್ಲೆಯ ಮಿರಾ ಬಯಂದರ್ ಮಹಾನಗರ ಪಾಲಿಕೆ ಮುಸ್ಲಿಂ ಸಮುದಾಯ ಹೆಚ್ಚಿದ್ದ ಹೈದರಿ ಚೌಕ ಪ್ರದೇಶದಲ್ಲಿ 15 ಕಟ್ಟಡಗಳನ್ನು ನೆಲಸಮಗೊಳಿಸಿದೆ.

ಗಲಭೆಗೆ ಸಂಬಂಧಿಸಿದಂತೆ ನಾಲ್ವರು ಅಪ್ರಾಪ್ತರನ್ನು ಒಳಗೊಂಡು 15 ಮಂದಿಯನ್ನು ಪೊಲೀಸರು ಬಂಧಿಸಿದ್ದರು.

ಭಾನುವಾರ ರಾತ್ರಿ ಹೈದರಿ ಚೌಕ್‌ನಲ್ಲಿ ಒಂದು ಸಮುದಾಯದ ಗುಂಪು ಘೋಷಣೆಗಳನ್ನು ಕೂಗುತ್ತ ವಾಹನಗಳಲ್ಲಿ ಮೆರವಣಿಗೆಗೆ ತೆರಳುತ್ತಿದ್ದಾಗ ಇನ್ನೊಂದು ಸಮುದಾಯದ ಗುಂಪು ಆಕ್ಷೇಪ ವ್ಯಕ್ತಪಡಿಸಿದ ನಂತರ ಗಲಭೆ ಶುರುವಾಗಿತ್ತು.

Advertisements

“ನಾವು ಹೈದರಿ ಚೌಕ್‌ ಪ್ರದೇಶದ ಸುಮಾರು 15 ಕಟ್ಟಡಗಳನ್ನು ನೆಲಸಮಗೊಳಿಸಿದ್ದೇವೆ.ಈ ಕಟ್ಟಡಗಳು ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಹಾಗೂ ಕಾನೂನು ಬಾಹಿರವಾಗಿ ನಿರ್ಮಿಸಲಾಗಿದ್ದ ಕಾರಣ ಈ ಕ್ರಮ ಜರುಗಿಸಿದ್ದೇವೆ” ಎಂದು ಮಿರಾ ಬಯಂದರ್ ಮಹಾನಗರ ಪಾಲಿಕೆ ಸಾಹಾಯಕ ಆಯುಕ್ತರಾದ ಮಾರುತಿ ಗಾಯಕ್‌ವಾಡ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಯಾವುದು ರಾಮರಾಜ್ಯ? ಗಾಂಧೀಜಿ ಹೇಳಿದ್ದೇ, ಪ್ರಧಾನಿ ಪಾಲಿಸುತ್ತಿರುವುದೇ?

ಸ್ಥಳೀಯರು ಹೇಳುವ ಪ್ರಕಾರ, ಈ ಅಂಗಡಿ ಮಾಲೀಕರು ಅಕ್ರಮ ದಾಖಲೆಗಳನ್ನು ಹೊಂದಿದ್ದರು. ಅಲ್ಲದೆ ಯಾವುದೇ ನೋಟಿಸ್ ನೀಡದೆ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಈ ಬಗ್ಗೆ ಸಹಾಯಕ ಆಯುಕ್ತ  ಗಾಯಕ್‌ವಾಡ್ ಅವರನ್ನು ವಿಚಾರಿಸಿದರೆ, ಪಾಲಿಕೆ ಪ್ರದೇಶದ ಪಾದಾಚಾರಿ ಮಾರ್ಗ, ಗಟಾರಗಳಲ್ಲಿ ಕಟ್ಟಡ ನಿರ್ಮಿಸಿದ್ದರೆ ನೋಟಿಸ್ ಅಗತ್ಯವಿಲ್ಲ. ಅಲ್ಲದೆ ನಾವು ಯಾವುದೇ ಮನೆಗಳನ್ನು ಧ್ವಂಸಗೊಳಿಸಿಲ್ಲ ಎಂದು ತಿಳಿಸಿದ್ದಾರೆ.

ನೆಲಸಮಗೊಂಡ ಬಹುತೇಕ ಕಟ್ಟಡಗಳು ಮುಸ್ಲಿಂ ಸಮುದಾಯವರಿಗೆ ಸೇರಿದ್ದಾಗಿದ್ದು, ಇವುಗಳಲ್ಲಿ ಕೆಲವು ಅಂಗಡಿಗಳಲ್ಲಿ ಹಿಂದೂ ಸಮುದಾಯದವರು ಬಾಡಿಗೆಗೆ ಇದ್ದರು.

ಸ್ಥಳದಲ್ಲಿ ನಿನ್ನೆಯಿಂದ(ಜ.24) ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ನಿಯೋಜಿಸಲಾಗಿದೆ. ಭದ್ರತಾ ಪಡೆಗಳು ಕೆಲವು ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X