ಜೈಪುರ | ಖಾಸಗಿ ಬಸ್ ಬೆಂಕಿಗಾಹುತಿ: ಇಬ್ಬರ ಸಜೀವ ದಹನ, ಹಲವು ಮಂದಿಗೆ ಗಾಯ

Date:

ಖಾಸಗಿ ಬಸ್ ಒಂದಕ್ಕೆ ವಿದ್ಯುತ್ ತಂತಿ ತಗುಲಿ ಬಸ್ ಬೆಂಕಿಗಾಹುತಿಯಾಗಿ ಇಬ್ಬರು ಸಜೀವವಾಗಿ ದಹನಗೊಂಡ ಘಟನೆ ಜೈಪುರದ ಮನೋಹರ್‌ಪುರದಲ್ಲಿ ಮಂಗಳವಾರ ನಡೆದಿದೆ. ಈ ದುರ್ಘಟನೆಯಲ್ಲಿ 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಮನೋಹರ್‌ಪುರದ ಟೋಡಿ ಗ್ರಾಮದಲ್ಲಿರುವ ಇಟ್ಟಿಗೆ ತಯಾರಿಕಾ ಘಟಕಕ್ಕೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್‌ಗೆ ಸುಮಾರು 11,000 ವೋಲ್ಟ್‌ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತಗುಲಿದ್ದು, ಬಸ್‌ ಬೆಂಕಿಗಾಹುತಿಯಾಗಿದೆ ಎಂದು ಜೈಪುರ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ರಾಶಿ ದೋಗ್ರಾ ದುಡಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಕರ್ನೂಲ್ ಬಸ್ ದುರಂತ: ಬೆಂಕಿ ತೀವ್ರತೆಗೆ ಕಾರಣವಾದವೇ 234 ಸ್ಮಾರ್ಟ್‌ಫೋನ್‌ಗಳು?

ಈ ಅವಘಡದ ಬಗ್ಗೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ದುಃಖ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ಪ್ರಶ್ನಿಸಿದ್ದಾರೆ. “ಜೈಪುರದ ಮನೋಹರ್‌ಪುರದಲ್ಲಿ ಕಾರ್ಮಿಕರನ್ನು ಕರೆಯೊಯ್ಯುತ್ತಿದ್ದ ಬಸ್‌ಗೆ ಬೆಂಕಿ ತಗುಲಿ ಇಬ್ಬರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ ಎಂಬ ಸುದ್ದಿ ಅಂತ್ಯಂತ ದುಃಖಕರವಾಗಿದೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹಾಗೆಯೇ, “ರಾಜಸ್ಥಾನದಲ್ಲಿ ಪದೇ ಪದೇ ಇಂತಹ ಅಪಘಾತ ಘಟನೆಗಳು ನಡೆಯುತ್ತಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿರುವುದು ಕಳವಳಕಾರಿ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದೂ ಹೇಳಿದ್ದಾರೆ.

ಇನ್ನು ಇತ್ತೀಚೆಗೆ ಹೈದರಾಬಾದ್‌ನಿಂದ ಬೆಂಗಳೂರಿನೆಡೆ ಸಾಗುತ್ತಿದ್ದ ವಿ. ಕಾವೇರಿ ಟ್ರಾವೆಲಸ್ ಬಸ್‌ ಬೆಂಕಿಗಾಹುತಿಯಾಗಿದ್ದು, 20 ಮಂದಿ ಸಜೀವ ದಹನಗೊಂಡಿದ್ದಾರೆ. ಕುಡಿದು ವಾಹನ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಸವಾರನೊಬ್ಬ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇನ್ನು ಗಾಬರಿಗೊಂಡು ಸ್ಥಳದಿಂದ ಪರಾರಿಯಾಗಿದ್ದ ಬಸ್‌ ಚಾಲಕ ಮಿರಿಯಾಲ ಲಕ್ಷ್ಮಯ್ಯ ಹಾಗೂ ಸಹ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ನಡುವೆ ತೆಲಂಗಾಣ ಸಾರಿಗೆ ಇಲಾಖೆ ಅಧಿಕಾರಿಗಳು ಸುರಕ್ಷತಾ ಮಾನದಂಡಗಳನ್ನು ಪಾಲಿಸದ ಖಾಸಗಿ ಬಸ್‌ಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ. ದುರಂತ ನಡೆದ ಮರುದಿನವೇ(ಅ.25) ಈ ಕಾರ್ಯಾಚರಣೆ ಆರಂಭಿಸಿದ್ದು, ಸುರಕ್ಷತೆ ಮಾನದಂಡಗಳು ಕಾಪಾಡಿಕೊಳ್ಳದವರ ವಿರುದ್ಧ 14 ಪ್ರಕರಣಗಳನ್ನು ದಾಖಲಿಸಿ ಸುಮಾರು 46 ಸಾವಿರ ರೂಪಾಯಿ ದಂಡವನ್ನು ವಿಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...