ಅತ್ಯಾಚಾರ ಸಂತ್ರಸ್ತರಿಗೆ ‘ಟು ಫಿಂಗರ್ ಟೆಸ್ಟ್’ ಮಾಡುವಂತಿಲ್ಲ: ಜಾರ್ಖಂಡ್ ಹೈಕೋರ್ಟ್

Date:

ಅತ್ಯಾಚಾರ ಸಂತ್ರಸ್ತರನ್ನು ‘ಟು ಫಿಂಗರ್ ಟೆಸ್ಟ್’ಗೆ ಒಳಪಡಿಸುವುದನ್ನು ಜಾರ್ಖಂಡ್ ಹೈಕೋರ್ಟ್ ನಿಷೇಧಿಸಿದೆ. ಎಲ್ಲ ಆಸ್ಪತ್ರೆಗಳಲ್ಲಿ ವಿವಾದಾತ್ಮಕ ಎರಡು ಬೆರಳುಗಳ ಪರೀಕ್ಷೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಜಾರ್ಖಂಡ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹಾಗೆಯೇ ಇದು ಅತ್ಯಾಚಾರ ಸಂತ್ರಸ್ತರಿಗಿರುವ ಗೌಪ್ಯತೆ, ಘನತೆಯ ನಿಯಮ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ತಿಳಿಸಿದೆ.

- Advertisement -

ಅತ್ಯಾಚಾರ ಸಂತ್ರಸ್ತೆಯೊಬ್ಬರ ರಕ್ಷಣೆ ಮತ್ತು ಪುನರ್ವಸತಿಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪಿಐಎಲ್ ಅನ್ನು ವಿಚಾರಣೆ ನಡೆಸಿದ ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಂ ಎಸ್ ಸೋನಕ್ ಮತ್ತು ನ್ಯಾಯಮೂರ್ತಿ ರಾಜೇಶ್ ಶಂಕರ್ ಅವರ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಇದನ್ನು ಓದಿದ್ದೀರಾ? ಅತ್ಯಾಚಾರ ಸಂತ್ರಸ್ತೆಯ ಮಾಹಿತಿ ಬಹಿರಂಗ; ಬಿಜೆಪಿ ಮಾಜಿ ಸಂಸದೆಗೆ ಸಮನ್ಸ್

ಈ ಸಂಬಂಧ ಎಲ್ಲ ವೈದ್ಯಕೀಯ ಸಂಸ್ಥೆಗಳಿಗೆ ಸುತ್ತೋಲೆಯನ್ನು ಹೊರಡಿಸಲು ಜಾರ್ಖಂಡ್ ಸರ್ಕಾರಕ್ಕೆ ಸೂಚಿಸಿದೆ. ಇನ್ನು ಈ ಆದೇಶದ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.

ಏನಿದು ಟು ಫಿಂಗರ್ ಟೆಸ್ಟ್?

ಟು ಫಿಂಗರ್ ಟೆಸ್ಟ್ (ಎರಡು ಬೆರಳುಗಳ ಪರೀಕ್ಷೆ-Two-Finger Test) ಎಂಬುದು ಅತ್ಯಾಚಾರಕ್ಕೆ ಒಳಗಾದ ಮಹಿಳೆಯರು ಲೈಂಗಿಕವಾಗಿ ಸಕ್ರಿಯವಾಗಿದ್ದಾರೆಯೇ ಅಥವಾ ಲೈಂಗಿಕವಾಗಿ ಸಹಕರಿಸಿದ್ದಾಳೆಯೇ ಎಂದು ಪತ್ತೆಹಚ್ಚಲು ಈ ಹಿಂದೆ ಬಳಸಲಾಗುತ್ತಿದ್ದ ಅವೈಜ್ಞಾನಿಕ ಮತ್ತು ಆಕ್ರಮಣಕಾರಿ ವೈದ್ಯಕೀಯ ವಿಧಾನ. ಈ ಪರೀಕ್ಷೆಯಲ್ಲಿ ವೈದ್ಯರು ಮಹಿಳೆಯ ಯೋನಿಯೊಳಗೆ ಎರಡು ಬೆರಳುಗಳನ್ನು ಸೇರಿಸಿ, ಕನ್ಯಾಪೊರೆ (Hymen) ಹರಿದಿದೆಯೇ ಮತ್ತು ಯೋನಿ ಸ್ನಾಯುಗಳು ಸಡಿಲವಾಗಿವೆಯೇ ಎಂಬುದನ್ನು ತಪಾಸಣೆ ಮಾಡುತ್ತಿದ್ದರು.

ಮಹಿಳೆಯು ಲೈಂಗಿಕ ಸಂಪರ್ಕಕ್ಕೆ ಒಗ್ಗಿಕೊಂಡಿದ್ದಾಳೆಯೇ ಎಂದು ನಿರ್ಧರಿಸಲು ಇದನ್ನು ಬಳಸಲಾಗುತ್ತಿತ್ತು. ಮಹಿಳೆ ಲೈಂಗಿಕವಾಗಿ ಸಕ್ರಿಯಳಾಗಿದ್ದರೆ ಆಕೆಯ ಮೇಲೆ ಅತ್ಯಾಚಾರ ನಡೆದಿರಲು ಸಾಧ್ಯವಿಲ್ಲ ಅಥವಾ ಆಕೆ ಸುಳ್ಳು ಹೇಳುತ್ತಿದ್ದಾಳೆ ಎಂಬ ಪಿತೃಪ್ರಧಾನ ಮತ್ತು ತಪ್ಪು ಆಧಾರದ ಮೇಲೆ ಈ ಪರೀಕ್ಷೆಯನ್ನು ನಡೆಸಲಾಗುತ್ತಿತ್ತು. ಸದ್ಯ ದೇಶದಲ್ಲಿ ಈ ಪರೀಕ್ಷೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ ಇಂದಿಗೂ ಕೆಲವೆಡೆ ಈ ವಿಧಾನವನ್ನೇ ಬಳಸಿ ಮಹಿಳೆಯ ಚಾರಿತ್ರ್ಯಹರಣ ಮಾಡಲಾಗುತ್ತಿದೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಕನ್ಯತ್ವವನ್ನು ಸಾಬೀತುಪಡಿಸಲು ಈ ಪರೀಕ್ಷೆಗೆ ಯಾವುದೇ ವೈಜ್ಞಾನಿಕ ಸಿಂಧುತ್ವ ಅಥವಾ ವೈದ್ಯಕೀಯ ಆಧಾರವಿಲ್ಲ. ದೈಹಿಕ ವ್ಯಾಯಾಮ, ಕ್ರೀಡೆ ಅಥವಾ ಇತರ ನೈಸರ್ಗಿಕ ಕಾರಣಗಳಿಂದಲೂ ಕನ್ಯಾಪೊರೆ ಹರಿಯಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...