ಮದುವೆ ಸಮಾರಂಭದಲ್ಲಿದ್ದ ಭಾಗಿಯಾಗಿದ್ದ ಇಬ್ಬರು ಬಾಲಕಿಯರನ್ನು ಅದೇ ಗ್ರಾಮದು ನಾಲ್ವರು ಕಾಮುಕರು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ.
14 ಮತ್ತು 15 ವರ್ಷದ ಬಾಲಕಿಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಕೃತ್ಯ ಎಸಗಿ, ಪರಾರಿಯಾಗಲು ಯತ್ನಿಸಿದ್ದ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಂದು ಬ್ರಹ್ಮಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶ್ರವಣ್ ವಿವೇಕ್ ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಯರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ, “ಬಾಲಕಿಯರು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾಗ, ಅವರನ್ನು ಆರೋಪಿಗಳು ಅಪಹರಿಸಿದ್ದಾರೆ. ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿಯರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಲ್ಲಿಯೇ ಬಿಟ್ಟು ಹೋಗಿದ್ದಾರೆ” ಎಂದು ಆರೋಪಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುವ ಪೊಲೀಸರು, “ಆರೋಪಿಗಳ ಓರ್ವ ಬಾಲಕಿಗೆ ಪರಿಚಿತನಾಗಿದ್ದ. ಬಾಲಕಿಯರಿಗೆ ಆಮಿಷವೊಡ್ಡಿ ಮದುವೆ ಮನೆಯಿಂದ ಹೊರಗೆ ಕರೆದೊಯ್ದಿದ್ದಾನೆ. ಬಳಿಕ, ಇಬ್ಬರನ್ನೂ ಆರೋಪಿಗಳು ಅಪಹರಿಸಿದ್ದಾರೆ” ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿರುವುದಾಗಿ ತಿಳಿಸಿದ್ದಾರೆ.
“ಬಾಲಕಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಾಲಕಿಯರಿಗೆ ಮಕ್ಕಳ ಕಲ್ಯಾಣ ಸಮಿತಿಯು ಕೌನ್ಸೆಲಿಂಗ್ ನಡೆಸುತ್ತಿದೆ. ಆರೋಪಿಗಳು ವಿಶಾಖಪಟ್ಟಣಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದರು. ಅವರೆಲ್ಲರನ್ನೂ ಗೋಲಂತ್ರ ಪೊಲೀಸರು ಬಂಧಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.