ಸಿಎಎ ವಿರುದ್ಧ ಪ್ರತಿಭಟನೆ | ಇಬ್ಬರ ಹತ್ಯೆ; ಮೇಘಾಲಯದಲ್ಲಿ ಉದ್ವಿಗ್ನತೆ

Date:

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಮಾರ್ಚ್ 27ರಂದು ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯ ಬಳಿಕ ಬಾಂಗ್ಲಾದೇಶದ ಜೊತೆ ಗಡಿ ಹಂಚಿಕೊಂಡಿರುವ ಮೇಘಾಲಯ ರಾಜ್ಯದ ಹಲವಾರು ಗ್ರಾಮಗಳಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ.

- Advertisement -

ಸಿಎಎ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಖಾಸಿ ವಿದ್ಯಾರ್ಥಿ ಸಂಘವು (ಕೆಎಸ್‌ಯು) ಇಬ್ಬರನ್ನು ಹತ್ಯೆ ಮಾಡಿದೆ ಎಂದು ಆರೋಪಿಸಲಾಗಿದೆ. ಮೃತರನ್ನು ಸುಜಿತ್ ದತ್ತಾ (35) ಮತ್ತು ಎಸನ್ ಸಿಂಗ್ (24) ಎಂದು ಗುರುತಿಸಲಾಗಿದೆ. ಸುಜಿತ್ ಬಂಗಾಳಿಯಾಗಿದ್ದರೆ, ಎಸಾನ್ ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸುಜಿತ್ ಸುಣ್ಣದ ಕಲ್ಲು ಕ್ವಾರಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ವೇಳೆ ಕೊಲೆ ಮಾಡಲಾಗಿದೆ. ಸಿಎಎ ವಿರುದ್ಧ ಪ್ರತಿಭಟನೆ ನಡೆಸಿದವರು ಕೊಲೆ ಮಾಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಆದರೆ, ಸಿಎಎ ವಿರೋಧಿ ಪ್ರತಿಭಟನೆಗಳು ಮತ್ತು ಹತ್ಯೆಗಳ ನಡುವೆ ಯಾವುದೇ ಸಂಬಂಧವಿರುವುದು ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಈ ಕೊಲೆಗೆ ಸಂಬಂಧಿಸಿ ಕೆಎಸ್‌ಯು ಸದಸ್ಯ ಶಾನ್‌ಬೋರ್ಲಾಂಗ್ ಶಾತಿ (26) ಮತ್ತು ಮೆಸದಪ್ಪೋರ್ ಸ್ಕೆಂಬಿಲ್ (26) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 2 ರಂದು ಸ್ಥಳೀಯ ನ್ಯಾಯಾಲಯವು ಆರೋಪಿಗಳನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

ಇದನ್ನು ಓದಿದ್ದೀರಾ?   ಪುರೋಹಿತ ಕೂಡಾ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದೆಂದ ಸರ್ಕಾರಿ ಸಹಾಯವಾಣಿ!

ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಕೆಎಸ್‌ಯು ಸದಸ್ಯರು ಬುಧವಾರ ಮಧ್ಯಾಹ್ನ ಸೊಹ್ರಾ ಪಟ್ಟಣದ ಸ್ಥಳೀಯ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಅಲ್ಲದೆ, ಸುಮಾರು ಐದು ಜನರು ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಶಿಲ್ಲಾಂಗ್‌ನ ಮಾವ್ಲೈ ಪೊಲೀಸ್ ಠಾಣೆಯತ್ತ ಪೆಟ್ರೋಲ್ ಬಾಂಬ್ ಎಸೆದು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?   ‘ಸಿಎಎ ಅಸಂವಿಧಾನಿಕ’ ಎಂದ ನ್ಯಾಯಮೂರ್ತಿ ಚಂದ್ರಚೂಡ್‌ರ ಪುತ್ರ; ವೀಡಿಯೋ ವೈರಲ್

ಮೃತರಲ್ಲಿ ಒಬ್ಬರಾದ ಸುಜಿತ್ ಅವರ ಕುಟುಂಬವು ಸೊಹ್ರಾದಿಂದ 30 ಕಿಲೋಮೀಟರ್ ದೂರದಲ್ಲಿರುವ ಇಚಮತಿಯಲ್ಲಿರುವ ತಮ್ಮ ಮನೆಯಿಂದ ಹೊರಬರಲು ಕೂಡಾ ಭಯಪಡುತ್ತಿದೆ ಎಂದು ದಿ ವೈರ್ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...