ವಿಷಕಾರಿ ಕೋಲ್‌ಡ್ರಿಪ್ ಸಿರಪ್ ಪ್ರಕರಣ: ಮತ್ತಿಬ್ಬರು ಮಕ್ಕಳ ಸಾವು; ಮೃತರ ಸಂಖ್ಯೆ 16ಕ್ಕೆ ಏರಿಕೆ

Date:

ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ವಿಷಕಾರಿ ಕೋಲ್‌ಡ್ರಿಪ್ ಸಿರಪ್ ಸೇವಿಸಿದ ಮತ್ತಿಬ್ಬರು ಮಕ್ಕಳು ಸಾವನ್ನಪ್ಪಿದ್ದು ಸದ್ಯ ಮೃತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸಿರಪ್ ಸೇವಿಸಿದ ಬಳಿಕ ಕಿಡ್ನಿ ವೈಫಲ್ಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳಿಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

- Advertisement -

ಈಗಾಗಲೇ ಮಕ್ಕಳಿಗೆ ಈ ವಿಷಕಾರಿ ಸಿರಪ್ ನೀಡಿದ ಚಿಂದ್ವಾರ ಜಿಲ್ಲೆಯ ಪಾರಾಸಿಯಾದ ಮಕ್ಕಳ ತಜ್ಞ ಪ್ರವೀಣ್ ಸೋನಿ ಎಂಬಾತನನ್ನು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? 11 ಮಕ್ಕಳ ಸಾವು | ವಿಷಕಾರಿ ಕೋಲ್‌ಡ್ರಿಪ್ ಸಿರಪ್ ಮಾರಾಟ ನಿಷೇಧ

ಮಂಗಳವಾರ ಜಯುಶ ಯದುವಂಶಿ ಎಂಬ ಎರಡು ವರ್ಷದ ಬಾಲಕಿ ಮೃತಪಟ್ಟಿದ್ದು, ಸೋಮವಾರ ಎರಡುವರೆ ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಮಕ್ಕಳ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಸದ್ಯ ಈ ಸಿರಪ್ ಸೇವಿಸಿದ ಚಿಂದ್ವಾರ ಜಿಲ್ಲೆಯ ಆರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ಮಧ್ಯಪ್ರದೇಶ ಪೊಲೀಸರು ರಚಿಸಿದ್ದಾರೆ. ಆದರೆ ಈ ಪ್ರಕರಣದ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ವಿರೋಧ ಪಕ್ಷ ಕಾಂಗ್ರೆಸ್ ಆಗ್ರಹಿಸಿದೆ. ಹಾಗೆಯೇ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ನೀಡುವಂತೆಯೂ ಆಗ್ರಹಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...