ಜಾರ್ಖಂಡ್ | ಮೇಕೆ ಕದ್ದ ಆರೋಪ; ಇಬ್ಬರನ್ನು ಥಳಿಸಿ ಕೊಂದ ಗುಂಪು

Date:

ಗ್ರಾಮಸ್ಥರೊಬ್ಬರ ಮನೆಯಿಂದ ಮೇಕೆಗಳನ್ನು ಕದ್ದಾಗ ಸಿಕ್ಕಿಬಿದ್ದ ಇಬ್ಬರು ಯುವಕರನ್ನು ಥಳಿಸಿ ಕೊಂದಿರುವ ಘಟನೆ ಜಾರ್ಖಂಡ್‌ನ ಜೋರ್ಸಾ ಗ್ರಾಮದಲ್ಲಿ ನಡೆದಿದೆ. ಶನಿವಾರ ಮುಂಜಾನೆ ಈ ಘಟನೆ ಜಮ್ಶೆದ್‌ಪುರದ ಚಾಕುಲಿಯಾ ಪೊಲೀಸ್ ಠಾಣೆಯಿಂದ ಸುಮಾರು 15 ಕಿ.ಮೀ ದೂರದಲ್ಲಿ ನಡೆದಿದೆ.

- Advertisement -

ಮೃತರಿಬ್ಬರಲ್ಲಿ ಒಬ್ಬರಾದ ಕುಶಾಕ್ ಬೆಹೆರಾ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರು ಭೋಲಾ ನಾಥ್ ಮಹ್ತೋ ಒಂದು ದಿನದ ನಂತರ ಮಹಾತ್ಮ ಗಾಂಧಿ ಮಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ದಲಿತ ಯುವಕನನ್ನು ಕೊಂದಿದ್ದ 17 ಮಂದಿಗೆ ಜೀವಾವಧಿ ಶಿಕ್ಷೆ

ಆರೋಪಿಗಳನ್ನು ಇಬ್ಬರನ್ನು ಚಕುಲಿಯಾದಲ್ಲಿನ ಜೀರಾಪಾರ ಗ್ರಾಮದ ನಿವಾಸಿಗಳು ಎಂದು ಹೇಳಲಾಗಿದೆ. ಶಂಕಿತ ಆರೋಪಿಗಳು ಮನೆಯಿಂದ ಮೇಕೆಗಳನ್ನು ಕದಿಯಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇಬ್ಬರು ಕಳ್ಳತನ ಮಾಡುವಾಗ ಮೇಕೆಯ ಕುತ್ತಿಗೆಗೆ ಕಟ್ಟಿದ್ದ ಗಂಟೆ ಶಬ್ದಗೊಂಡು ಮನೆ ಮಾಲೀಕ ಹರ್‌ಗೋವಿಂದ್ ನಾಯಕ್ ಎಚ್ಚರಗೊಂಡರು. ನಾಯಕ್ ಹೊರಬಂದು ಪರಿಶೀಲಿಸಿದಾಗ ಇಬ್ಬರು ಯುವಕರು ಬೈಕ್‌ನಲ್ಲಿ ಮೂರು ಮೇಕೆಗಳನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ನೋಡಿದರು ಎಂದು ವರದಿಯಾಗಿದೆ.

ಮನೆ ಮಾಲೀಕರು ಆರೋಪಿಗಳನ್ನು ಹಿಡಿದು, ಇತರ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದು, ತಕ್ಷಣ ಗ್ರಾಮಸ್ಥರು ಜಮಾಯಿಸಿ ಶಂಕಿತರನ್ನು ಸೆರೆಹಿಡಿದಿದ್ದರು. ಗ್ರಾಮಸ್ಥರು ಥಳಿಸಿದ್ದು ಕುಶಾಕ್ ಬೆಹೆರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಜಾರ್ಖಂಡ್ | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕೊಲೆಗೆ ಯತ್ನಿಸಿದ ದುರುಳ

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹ್ತೋ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಮಹ್ತೋ ಸಾವನ್ನಪ್ಪಿದರು ಎಂದು ಎಸ್‌ಪಿ ರಿಷಭ್ ಗರ್ಗ್ ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಐವರನ್ನು ವಶಕ್ಕೆ ಪಡೆಯಲಾಗಿದ್ದು, ಇತರರನ್ನು ಗುರುತಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗೆ ಯಾವುದೇ ಲಿಖಿತ ದೂರು ಬಂದಿಲ್ಲ ಮತ್ತು ದೂರು ಬಂದ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೂಡಾ ಎಸ್‌ಪಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...