ನೋಯ್ಡಾ| ಚರಂಡಿ ಸ್ವಚ್ಛಗೊಳಿಸುತ್ತಿದ್ದ ಇಬ್ಬರು ಪೌರ ಕಾರ್ಮಿಕರು ಮೃತ್ಯು

Date:

ನೋಯ್ಡಾದ ಮನೆಯೊಂದರಲ್ಲಿ ಚರಂಡಿ ಸ್ವಚ್ಛ ಮಾಡುತ್ತಿದ್ದ ಸಂದರ್ಭದಲ್ಲಿ ವಿಷಕಾರಿ ಅನಿಲ ಉಸಿರಾಡಿದ ಕಾರಣ ಪಶ್ಚಿಮ ಬಂಗಾಳ ಮೂಲದ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

- Advertisement -

ಶುಕ್ರವಾರ ಸಂಜೆ ನೂನಿ ಮಂಡಲ್ ಮತ್ತು ತಪನ್ ಮಂಡಲ್ ಸೆಕ್ಟರ್ 26 ರಲ್ಲಿ ಸುಮಿತ್ ಚಾವ್ಲಾ ಎಂಬ ವ್ಯಕ್ತಿಯ ನಿವಾಸದಲ್ಲಿ ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪೊಲೀಸ್ ಅಧಿಕಾರಿಗಳ ಪ್ರಕಾರ, ಇಬ್ಬರೂ ಕಾರ್ಮಿಕರು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯವರು ಮತ್ತು ನೋಯ್ಡಾ ಸೆಕ್ಟರ್ 9 ರ ಕೊಳೆಗೇರಿಯ ನಿವಾಸಿಗಳು ಆಗಿದ್ದರು.

ಇದನ್ನು ಓದಿದ್ದೀರಾ?  ದೇಶಾದ್ಯಂತ ಕಳೆದ 5 ವರ್ಷಗಳಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ 443 ಮಂದಿ ಸಾವು

“ನೋಯ್ಡಾ ಸೆಕ್ಟರ್ 26ರಲ್ಲಿ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿನ ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಬ್ಬರು ಪೌರ ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ನಿನ್ನೆ (ಶುಕ್ರವಾರ) ರಾತ್ರಿ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಇಬ್ಬರಿಗೂ ಪ್ರಜ್ಞೆ ತಪ್ಪಿತ್ತು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಕಾರ್ಮಿಕರು ಬದುಕುಳಿಯಲಿಲ್ಲ” ಎಂದು ಉಪ ಪೊಲೀಸ್ ಆಯುಕ್ತ (ನೋಯ್ಡಾ) ವಿದ್ಯಾ ಸಾಗರ್ ಮಿಶ್ರಾ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಇನ್ನೊರ್ವ ಪೊಲೀಸ್ ಅಧಿಕಾರಿ, “ಮೃತರಿಬ್ಬರು ಶುಕ್ರವಾರ ಸಂಜೆ 7 ಗಂಟೆಗೆ ಮನೆಗೆ ಬಂದು ಸ್ವಚ್ಛತೆ ಆರಂಭಿಸಿದ್ದಾರೆ. ರಾತ್ರಿ 11.15 ರ ನಂತರ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವೈದ್ಯರು ಪರೀಕ್ಷಿಸುವ ವೇಳೆಗಾಗಲೇ ಮೃತಪಟ್ಟಿದ್ದರು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ದಾವಣಗೆರೆ | ಕಾರ್ಮಿಕರೊಬ್ಬರಿಂದ ಒಳಚರಂಡಿ ಸ್ವಚ್ಛತೆ; ಎಫ್‌ಐಆರ್‌ ದಾಖಲು

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶ

ಚರಂಡಿಗೆ ಜನರು ಇಳಿದು ಶುಚಿಗೊಳಿಸುವುದನ್ನು 25 ವರ್ಷಗಳ ಹಿಂದೆ ನಿಷೇಧಿಸಲಾಗಿದೆ. ಆದರೂ ಕೂಡಾ ಇಂದಿಗೂ ಈ ಕಾರ್ಯವನ್ನು ಪೌರ ಕಾರ್ಮಿಕರಿಂದ ಮಾಡಿಸಲಾಗುತ್ತಿದೆ. ಇನ್ನು ಕಳೆದ ಐದು ವರ್ಷಗಳಲ್ಲಿ ಒಳ ಚರಂಡಿ ಸ್ವಚ್ಛಗೊಳಿಸುವಾಗ ಕನಿಷ್ಠ 443 ಮಂದಿ ಸಾವನ್ನಪ್ಪಿದ್ದಾರೆ. ಈ ಉದ್ಯೋಗ ನಿಷೇಧಿಸುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಈ ಹಿಂದೆ 2023ರ ಅಕ್ಟೋಬರ್‌ನಲ್ಲಿ ಸುಪ್ರಿಂ ಕೋರ್ಟ್ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...