ಕಮರಿಗೆ ಸೇನಾ ವಾಹನ ಉರುಳಿದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ.
ಸೇನಾ ವಾಹನವು ಬಂಡಿಪೋರಾಡದ ಎಸ್ಲೆ ಪಾಯೆನ್ ಬಳಿ ಸ್ಕಿಡ್ ಆಗಿ ಕಮರಿಗೆ ಉರುಳಿದೆ ಎಂದು ಹೇಳಲಾಗಿದೆ. ಸದ್ಯ ಮೂವರು ಗಾಯಾಳು ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಸೇನಾ ವಾಹನ ಅಪಘಾತ; ಮೃತ ಐವರು ಯೋಧರಲ್ಲಿ ಮೂವರು ಕನ್ನಡಿಗರು
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ವೈದ್ಯಾದಿಕಾರಿ ಡಾ ಮಸ್ರತ್ ಇಕ್ಬಾಲ್, “ಇಬ್ಬರು ಯೋಧರನ್ನು ಕರೆತರುವಾಗಲೇ ಅವರು ಸಾವನ್ನಪ್ಪಿದ್ದರು” ಎಂದು ತಿಳಿಸಿದ್ದಾರೆ.
“ಮೂವರು ಯೋಧರು ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಸಾವಿನಿಂದ ರಕ್ಷಿಸಲಾಗಿದೆ. ಬಳಿಕ ಶ್ರೀನಗರದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ.
