ಜಮ್ಮುವಿನ ಅಖ್‌ನೂರು ಸೆಕ್ಟರ್‌ನಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿ ಸ್ಪೋಟವಾಗಿದ್ದು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬತ್ತಲ್ ಪ್ರದೇಶದಲ್ಲಿ ಪಟ್ರೋಲಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಪೋಟಗೊಂಡು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಜಮ್ಮು-ಕಾಶ್ಮೀರ | ಕತ್ರಾದಲ್ಲಿ ಮದ್ಯ, ಮಾಂಸಾಹಾರ ನಿಷೇಧ
ಐಇಡಿ ಸ್ಪೋಟಗೊಂಡಿದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಸ್ಪಷ್ಟವಾದ ಮಾಹಿತಿ ಲಭಿಸಿಲ್ಲ. ಉಗ್ರರು ಐಇಡಿ ಇರಿಸಿದ್ದಾರೆ ಎಂದು ಶಂಕಿಸಲಾಗಿದೆ.
ಸ್ಪೋಟ ಸಂಭವಿಸಿದ ಬೆನ್ನಲ್ಲೇ ಸಂಪೂರ್ಣ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಕಾಡಿನಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಸುದ್ದಿಯಾದ ಮೂರು ದಿನಗಳ ಬಳಿಕ ಈ ಘಟನೆ ನಡೆದಿದೆ.
