ಒಡಿಶಾ | ಜನಗಣತಿ ಒತ್ತಡ; ‘ಹೀಟ್ ಸ್ಟ್ರೋಕ್’ಗೆ ಇಬ್ಬರು ಶಿಕ್ಷಕರ ಬಲಿ

Date:

ಜನಗಣತಿ ಕಾರ್ಯದಲ್ಲಿ ತೊಡಗಿದ್ದ ಇಬ್ಬರು ಶಾಲಾ ಶಿಕ್ಷಕರು ‘ಹೀಟ್ ಸ್ಟ್ರೋಕ್’ನಿಂದ ಸಾವನ್ನಪ್ಪಿದ ಘಟನೆ ಒಡಿಶಾದಲ್ಲಿ ನಡೆದಿದೆ. ಎರಡೂ ಪ್ರತ್ಯೇಕ ಘಟನೆಗಳಾಗಿದ್ದು, ಎರಡು ದಿನಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮಯೂರ್ಭಂಜ್ ಮತ್ತು ಸುಂದರ್‌ಗಢ ಜಿಲ್ಲೆಗಳಲ್ಲಿ ಸಾವು ಸಂಭವಿಸಿದೆ. ಈ ಜಿಲ್ಲೆಗಳಲ್ಲಿ ತಾಪಮಾನವು 37 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿದೆ. ರಾಜ್ಯದಲ್ಲಿ ಒಟ್ಟು ಜನಗಣತಿ ಕರ್ತವ್ಯದಲ್ಲಿರುವ ಮೂವರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? Delimitation | ದಕ್ಷಿಣದ ರಾಜ್ಯಗಳಿಗೆ ಕಂಟಕವಾಗಿರುವ ಸಂಸದೀಯ ಕ್ಷೇತ್ರ ಮರುವಿಂಗಡಣೆ

ಮಯೂರ್ಭಂಜ್‌ನಲ್ಲಿ, ಬೆಟ್ನೋಟಿ ಬ್ಲಾಕ್‌ನ ಬೈದ್ಯನಾಥ್ ಪ್ರೌಢಶಾಲೆಯ ಶಿಕ್ಷಕ ರಾಜ್‌ಕಪುರ ಹೆಂಬ್ರಾಮ್ ಹೀಟ್ ಸ್ಟ್ರೋಕ್‌ಗೆ ಒಳಗಾಗಿ ಭಾನುವಾರ ಸಂಜೆ ಬರಿಪಾದದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

ಸೋದರಳಿಯ ಲಕ್ಷ್ಮಿಕಾಂತ್ ಹೆಂಬ್ರಾಮ್ ಹೇಳುವಂತೆ ಜನಗಣತಿ ಕಾರ್ಯದಿಂದ ಹಿಂತಿರುಗುವಾಗ ಹೆಂಬ್ರಾಮ್ ಪ್ರಜ್ಞೆ ಕಳೆದುಕೊಂಡಿದ್ದಾರೆ. ಮುಖ್ಯೋಪಾಧ್ಯಾಯಿನಿ ಮಮತಾ ದಾಸ್ ಕೂಡಾ ಇದೇ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಅನಾರೋಗ್ಯವಿದ್ದರೂ ಜನಗಣತಿ ಕರ್ತವ್ಯಗಳನ್ನು ಮುಂದುವರಿಸಲು ಅಧಿಕಾರಿಗಳ ಒತ್ತಡವಿದೆ ಎಂದು ಹೆಂಬ್ರಾಮ್ ಅವರು ಸಹೋದ್ಯೋಗಿಗಳಿಗೆ ಈ ಹಿಂದೆಯೇ ತಿಳಿಸಿದ್ದರು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಐದು ದಶಕಗಳ ಲಿಂಗಾನುಪಾತ; ಆತಂಕಕಾರಿ ಸಂಗತಿಗಳೇನು?

ಸುಂದರ್‌ಗಢ ಜಿಲ್ಲೆಯಲ್ಲಿ ಗುರುಂಡಿಯಾ ಬ್ಲಾಕ್‌ನಲ್ಲಿರುವ ಜರಡಾ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಅನುರಾಗ್ ಎಕ್ಕಾ ಶನಿವಾರ ಜನಗಣತಿ ಕರ್ತವ್ಯದ ಸಮಯದಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅದೇ ದಿನ ಮೃತಪಟ್ಟಿದ್ದಾರೆ. ಆರಂಭದಲ್ಲಿ ಅವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ನಂತರ ಅವರ ಸ್ಥಿತಿ ಹದಗೆಟ್ಟ ಕಾರಣ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಈ ಹಿಂದೆ, ಏಪ್ರಿಲ್ 21ರಂದು ಸೋನೆಪುರ ಜಿಲ್ಲೆಯ ಗಣತಿದಾರರೊಬ್ಬರು ಜನಗಣತಿ ಕರ್ತವ್ಯದಿಂದ ಹಿಂದಿರುಗಿದ ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ತಾಪಮಾನ ಅಧಿಕವಾಗಿರುವ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ಹೊರಡಿಸಿದೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ಮನೆ ಮನೆಗೆ ತೆರಳಿ ಜನಗಣತಿ ಮಾಡಬಾರದು ಎಂದು ಸೂಚಿಸಿದೆ. ಹಾಗೆಯೇ ಕರ್ತವ್ಯದ ಸಮಯದಲ್ಲಿ ನೀರು ಕುಡಿಯಲು ಮತ್ತು ಒಆರ್‌ಎಸ್‌ ಅನ್ನು ಸೇವಿಸಲು ಅಧಿಕಾರಿಗಳಿಗೆ ಸಲಹೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...

ಬಸವಣ್ಣನವರ ಕನಸಿನ ಸಮಸಮಾಜ ಇನ್ನೂ ನಿರ್ಮಾಣವಾಗಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿರಹಿತ, ವರ್ಗರಹಿತ ಮತ್ತು ಲಿಂಗಭೇದವಿಲ್ಲದ ಸಮಸಮಾಜ ನಿರ್ಮಾಣದ...