ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಅನುಮೋದನೆಯನ್ನು ಕೇಂದ್ರವು ಘೋಷಿಸಿದ ನಂತರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಇಂದು ನರೇಂದ್ರ ಮೋದಿ ಸರ್ಕಾರವನ್ನು “ಯು-ಟರ್ನ್‌ಗಳ ಸರ್ಕಾರ” ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಯುಪಿಎಸ್‌ನಲ್ಲಿ ‘ಯು’ ಎಂದರೆ ಮೋದಿ ಸರ್ಕಾರದ ಯು-ಟರ್ನ್‌ಗಳು.ಜೂನ್ 4 ರ ನಂತರ ಪ್ರಧಾನಿಯ ಅಧಿಕಾರದ ದುರಹಂಕಾರದ ಮೇಲೆ ಜನರ ಶಕ್ತಿ ಮೇಲುಗೈ ಸಾಧಿಸಿದೆ ಎಂದು ಖರ್ಗೆ ಹೇಳಿದ್ದಾರೆ.
ಯುಪಿಎಸ್ ಖಚಿತವಾದ ಪಿಂಚಣಿ, ಕನಿಷ್ಠ ಪಿಂಚಣಿ ಮತ್ತು ಖಚಿತವಾದ ಕುಟುಂಬ ಪಿಂಚಣಿಯನ್ನು ಒದಗಿಸುತ್ತದೆ. ಯುಪಿಎಸ್‌ನಲ್ಲಿನ ‘ಯು’ ಎಂದರೆ “ಮೋದಿ ಸರ್ಕಾರದ ಯು-ಟರ್ನ್‌ಗಳು” ಎಂದು ಖರ್ಗೆ ಹೇಳಿದ್ದಾರೆ.
“ಜೂನ್ 4 ರ ನಂತರ, ಪ್ರಧಾನ ಮಂತ್ರಿಯ ಅಧಿಕಾರದ ದುರಹಂಕಾರದ ಮೇಲೆ ಜನರ ಶಕ್ತಿ ಮೇಲುಗೈ ಸಾಧಿಸಿದೆ. ಜಂಟಿ ಸಂಸದೀಯ ಸಮಿತಿಗೆ ವಕ್ಫ್ ಮಸೂದೆಯನ್ನು ಕಳುಹಿಸುವುದು, ಪ್ರಸಾರ ಮಸೂದೆಯ ಹಿಂಪಡೆಯುವಿಕೆ ಮುಂತಾದವು ಮೋದಿ ಸರ್ಕಾರದ ಯು-ಟರ್ನ್‌ಗಳು” ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹೊಸ ಪಿಂಚಣಿ ಯೋಜನೆ ಅಥವಾ ರಾಷ್ಟ್ರೀಯ ಪಿಂಚಣಿ ಯೋಜನೆಗೆ ( ಎನ್ ಪಿಎಸ್ ) ಗೆ ತೀವ್ರ ವಿರೋಧ ವ್ಯಕ್ತವಾಗಿರುವ ನಡುವೆ, ಏಕೀಕೃತ ಪಿಂಚಣಿ ಯೋಜನೆಗೆ ( ಯುಪಿಎಸ್) ಕೇಂದ್ರ ಸಚಿವ ಸಂಪುಟ ಶನಿವಾರ ಅನುಮೋದನೆ ನೀಡಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ
ಈ ಮೂಲಕ ಸರ್ಕಾರಿ ನೌಕರರಿಗೆ ನಿವೃತ್ತಿಯ ಬಳಿಕ ಮೂಲ ವೇತನದ ಕನಿಷ್ಠ ಶೇ 50 ಪಿಂಚಣಿಯಾಗಿ ನೀಡಲು ಸರ್ಕಾರ ನಿರ್ಧರಿಸಿತ್ತು.
ಸಚಿವ ಸಂಪುಟದ ನಿರ್ಧಾರಗಳನ್ನು ಪ್ರಕಟಿಸಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ “ಏಕಿಕೃತ ಪಿಂಚಣಿ ಯೋಜನೆ ( ಯುಪಿಎಸ್ ) ಅಡಿ ಸರ್ಕಾರಿ ನೌಕರರು ನಿವೃತ್ತಿಯ ಹಿಂದಿನ 12 ತಿಂಗಳ ಸರಾಸರಿ ಮೂಲ ವೇತನದ ಕನಿಷ್ಠ ಶೇ. 50ರಷ್ಟನ್ನು ಪಿಂಚಣಿಯಾಗಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದರು.
ಎನ್ ಪಿಎಸ್ ಆಯ್ಕೆ ಮಾಡಿಕೊಂಡವರಿಗೆ ಈಗ ಯುಪಿಎಸ್ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಕನಿಷ್ಠ 25 ವರ್ಷ ಕೆಲಸ ಮಾಡಿದವರಿಗೆ ಮೂಲ ವೇತನದ ಶೇ.50ರಷ್ಟು ಪಿಂಚಣಿಯಾಗಿ ಸಿಗಲಿದೆ. ಅದಕ್ಕಿಂತ ಕಡಿಮೆ ವರ್ಷ ಕೆಲಸ ಮಾಡಿದವರಿಗೆ ಸಿಗುವ ಮೊತ್ತ ಕಡಿಮೆಯಾಗಲಿದೆ.
ಯುಪಿಎಸ್ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ನಿಯೋಜಿತ ಸಂಪುಟ ಕಾರ್ಯದರ್ಶಿ ಟಿ.ವಿ ಸೋಮನಾಥ್ ಅವರು ಹೊಸ ಯೋಜನೆಯು 2025ರ ಏಪ್ರಿಲ್ 1ರಿಂದ ಅನ್ವಯವಾಗಲಿದೆ ಎಂದು ಹೇಳಿದ್ದರು.