ಅಪ್ರಾಪ್ತ ಬಾಲಕಿಯರ ಖಾಸಗಿ ವಿಡಿಯೋ ಚಿತ್ರೀಕರಿಸಿ ವಿದೇಶಕ್ಕೆ ಮಾರಾಟ: ಮಥುರಾ ಅರ್ಚಕನಿಗೆ ಜೀವಾವಧಿ ಶಿಕ್ಷೆ

Date:

ಉತ್ತರ ಪ್ರದೇಶದ ಮಥುರಾದಲ್ಲಿ ದೇವಸ್ಥಾನಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಯರ ಖಾಸಗಿ ವಿಡಿಯೋಗಳನ್ನು ಚಿತ್ರೀಕರಿಸಿ, ಅವುಗಳನ್ನು ವಿದೇಶಿ ಮೂಲದ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದ ಅರ್ಚಕ ಶ್ಯಾಮ್ ಬಿಹಾರಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ. ಮಥುರಾದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬ್ರಜೇಶ್ ಕುಮಾರ್ ಅವರು ತೀರ್ಪನ್ನು ಪ್ರಕಟಿಸಿದ್ದಾರೆ. ಶಿಕ್ಷೆಯ ಜೊತೆಗೆ ಅಪರಾಧಿಗೆ 1.43 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದ್ದಾರೆ.

- Advertisement -

ಇಂಟರ್‌ಪೋಲ್ ನೀಡಿದ ರಹಸ್ಯ ಮಾಹಿತಿಯ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) 2025ರ ಜೂನ್ 17ರಂದು ಪ್ರಕರಣವನ್ನು ದಾಖಲಿಸಿಕೊಂಡಿತ್ತು. ತನಿಖೆಯನ್ನು ಕೈಗೆತ್ತಿಕೊಂಡ ಸಿಬಿಐ ಅಧಿಕಾರಿಗಳು, ಜೈಂತ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ದೇವಸ್ಥಾನದಲ್ಲಿದ್ದ ಅರ್ಚಕ ಶ್ಯಾಮ್ ಬಿಹಾರಿಯನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ದೇವಸ್ಥಾನಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಯರಿಗೆ ‘ಪ್ರಸಾದ’ ನೀಡುವ ನೆಪದಲ್ಲಿ ಅರ್ಚಕನು ತನ್ನ ಕೋಣೆಗೆ ಕರೆದುಕೊಂಡು ಹೋಗುತ್ತಿದ್ದನು. ಅಲ್ಲಿ ಅವರ ಮೇಲೆ ಲೈಂಗಿಕ‌ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದನು ಎಂಬುದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ.

ತಾನು ಚಿತ್ರೀಕರಿಸಿಕೊಂಡ ವಿಡಿಯೋಗಳನ್ನು ಆತ ಆನ್‌ಲೈನ್ ಮೂಲಕ ವಿದೇಶದಲ್ಲಿದ್ದ ವ್ಯಕ್ತಿಗಳಿಗೆ ಹಣಕ್ಕಾಗಿ ಮಾರಾಟ ಮಾಡುತ್ತಿದ್ದನು. ಈ ಅಕ್ರಮ ಜಾಲದ ಕುರಿತು ಇಂಟರ್‌ಪೋಲ್ ಗಮನಕ್ಕೆ ಬಂದ ತಕ್ಷಣ, ಅವರು ಭಾರತ ಸರ್ಕಾರಕ್ಕೆ ಮಾಹಿತಿ ನೀಡಿದ್ದರು.

ಪ್ರಕರಣದ ತೀವ್ರತೆಯನ್ನು ಪರಿಗಣಿಸಿ ಕಾರ್ಯಾಚರಣೆ ನಡೆಸಿದ ಸಿಬಿಐ, ಕೇವಲ ಒಂದು ತಿಂಗಳ ಅವಧಿಯಲ್ಲಿ ಸಮಗ್ರ ತನಿಖೆಯನ್ನು ಪೂರ್ಣಗೊಳಿಸಿ 2025ರ ಆಗಸ್ಟ್ 18 ರಂದು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಾಸಿಕ್ಯೂಷನ್ ಮಂಡಿಸಿದ ಸಾಕ್ಷ್ಯಾಧಾರಗಳನ್ನು ಪುರಸ್ಕರಿಸಿ, ಅರ್ಚಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ | ʼವಿಂಟರ್ ಆಕ್ಷನ್ ಪ್ಲಾನ್ʼ ಮೊದಲ ದಿನವೇ 68.4 ಲಕ್ಷ ರೂ. ದಂಡ ವಸೂಲು!

ದೆಹಲಿಯಲ್ಲಿ ವಾಯು ಮಾಲಿನ್ಯ ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ಜಾರಿಗೆ ತಂದಿರುವ 'ವಿಂಟರ್ ಆಕ್ಷನ್...

ನ.3ರಂದು ಆಂಧ್ರ ಕರಾವಳಿಗೆ ಅಪ್ಪಳಿಸಲಿರುವ ‘ಮುರಸು’ ಚಂಡಮಾರುತ: ಏನಿದರ ಅರ್ಥ, ನಾಮಕರಣ ಹೇಗೆ?

ನೈರುತ್ಯ ಮತ್ತು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು 'ಮುರಸು'...

SIR ನಂತರವೂ ಬೆಂಗಳೂರು ಮತದಾರರ ಪಟ್ಟಿಯಲ್ಲಿ ಭಾರೀ ಯಡವಟ್ಟು: ‘XXX’, ‘????’, ಇಮೇಲ್ ಐಡಿಗಳೇ ಮತದಾರರ ಹೆಸರು!

'ಎಸ್‌ಐಆರ್' (SIR) ಪ್ರಕ್ರಿಯೆಯ ನಂತರವೂ ರಾಜಧಾನಿ ಬೆಂಗಳೂರಿನ ಅಂತಿಮ ಮತದಾರರ ಪಟ್ಟಿಯಲ್ಲಿ...

ಸಿಇಸಿ ವಿರುದ್ಧ ‘ಇಂಡಿಯಾ’ ಒಕ್ಕೂಟದ ಪ್ರತಿಭಟನೆ: ಉತ್ತರ ಪ್ರದೇಶದಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ 'ಇಂಡಿಯಾ'...