ಸನಾತನ ಧರ್ಮ ಹೇಳಿಕೆ ಹಿಂದೂ ಧರ್ಮದ ವಿರುದ್ಧವಲ್ಲ, ಜಾತಿ ವ್ಯವಸ್ಥೆ ವಿರುದ್ಧ: ನ್ಯಾಯಾಲಯಕ್ಕೆ ಉದಯನಿಧಿ ವಿವರಣೆ

Date:

ಸನಾತನ ಧರ್ಮ ಕುರಿತಾದ ತಮ್ಮ ಹೇಳಿಕೆಯು ಜಾತಿ ವ್ಯವಸ್ಥೆ ವಿರೋಧಿಯೇ ವಿನಾ ಹಿಂದೂ ಧರ್ಮ ಅಥವಾ ಹಿಂದೂಗಳ ಜೀವನ ಕ್ರಮದ ಕುರಿತಾದದ್ದಲ್ಲ ಎಂದು ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್‌ ಗುರುವಾರ ಮದ್ರಾಸ್‌ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಹಿಂದೂ ಮುನ್ನಾನಿ ಸಮೂಹವು ಸ್ಟಾಲಿನ್‌ ಮತ್ತು ಇತರೆ ಡಿಎಂಕೆ ನಾಯಕರ ವಿರುದ್ಧ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿತಾ ಸುಮಂತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿದೆ.

ಉದಯನಿಧಿ ಸ್ಟಾಲಿನ್‌ ಪ್ರತಿನಿಧಿಸಿದ್ದ ಹಿರಿಯ ವಕೀಲ ಪಿ ವಿಲ್ಸನ್‌ ಅವರು “ತಮಿಳುನಾಡಿನ ಜನರು ಡಿಎಂಕೆಗೆ ಅಧಿಕಾರ ನೀಡಿದ್ದಾರೆ. ಇವರಲ್ಲಿ ಬಹುತೇಕರು ಹಿಂದೂ ಸಂಪ್ರದಾಯ ಆಚರಿಸುತ್ತಿದ್ದಾರೆ. ಬಹುತೇಕ ರಾಜ್ಯ ಅಥವಾ ಡಿಎಂಕೆಯ ಬಹುತೇಕ ಕಾರ್ಯಕರ್ತರು ಹಿಂದೂಗಳಾಗಿದ್ದಾರೆ” ಎಂದು ವಾದಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಏನಿದೆ ಪುರಾವೆ?: ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸುಪ್ರೀಂ ಕಠಿಣ ಪ್ರಶ್ನೆ

“ಡಿಎಂಕೆ ನಾಯಕರ ವಿರುದ್ಧ ಸಲ್ಲಿಸಿರುವ ಅರ್ಜಿಯು ರಾಜಕೀಯ ಪ್ರೇರಿತವಾಗಿದೆ. ಸಂಸದರು ಮತ್ತು ಶಾಸಕರನ್ನು ಅನರ್ಹಗೊಳಿಸುವ ನಿಯಮವು ಸಂವಿಧಾನದ 191(ಇ) ನೇ ವಿಧಿಯಡಿ ಸಂಸತ್‌ನ ವಿಶೇಷಾಧಿಕಾರವಾಗಿದೆ. ನ್ಯಾಯಾಲಯವು ಶಾಸಕಾಂಗ ಹಾಗೂ ನ್ಯಾಯಾಂಗದ ನಡುವಿನ ಅಧಿಕಾರ ಪ್ರತ್ಯೇಕತೆಯನ್ನು ಗೌರವಿಸಬೇಕು. ಸಾಂವಿಧಾನಿಕ ಖಾಲಿತನ ಕಂಡುಬಂದಾಗ ನ್ಯಾಯಾಲಯ ಮಧ್ಯಪ್ರವೇಶಿಸಬಹುದು. ಆದರೆ, ಸಂಸತ್‌ ಈಗಾಗಲೇ ಕೆಲವು ಅನರ್ಹತೆಯನ್ನು ಉಲ್ಲೇಖಿಸಿರುವಾಗ ನ್ಯಾಯಾಲಯ ಮುಂದಡಿ ಇಡಲಾಗದು” ಎಂದರು.

ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಜಿ ರಾಜಗೋಪಾಲನ್‌ ಅವರು “ಡಿಎಂಕೆಯನ್ನು ಹಿಂದೂಗಳು ಅಧಿಕಾರಕ್ಕೆ ತಂದಿರುವುದಾದರೆ ಸನಾತನ ಧರ್ಮದ ಕುರಿತು ಡಿಎಂಕೆ ನಾಯಕರು ನೀಡುವ ಹೇಳಿಕೆಗಳು ವಿರೋಧಾಭಾಸದಿಂದ ಕೂಡಿವೆ. ಡಿಎಂಕೆ ನಾಯಕ ಎ ರಾಜಾ ಅವರು ಎಸ್‌ಸಿ/ಎಸ್‌ಟಿ ಕೋಟಾದಡಿ ಸಂಸದರಾಗಿದ್ದಾರೆ. ಇಂಥ ಮೀಸಲಾತಿಗಳು ಹಿಂದೂಗಳಿಗೆ ಮಾತ್ರ” ಎಂದರು.

ಎಲ್ಲ ವಕೀಲರು ಮೌಖಿಕ ವಾದ ಪೂರ್ಣಗೊಳಿಸಿದ್ದು, ಲಿಖಿತ ವಾದ ಸಲ್ಲಿಸಲು ನ್ಯಾಯಾಲಯವು ಎಲ್ಲರಿಗೂ ಒಂದು ವಾರ ಕಾಲಾವಕಾಶ ನೀಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಂಧ್ರ, ತೆಲಂಗಾಣದಲ್ಲಿ ರಸ್ತೆ ಅಪಘಾತ: 8 ಸಾವು

ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 8 ಮಂದಿ...

ದುರಹಂಕಾರಿಗಳಿಗೆ ಭಗವಾನ್ ರಾಮ 241ಕ್ಕೆ ನಿಲ್ಲಿಸಿದ್ದಾನೆ: ಬಿಜೆಪಿ ವಿರುದ್ಧ ಆರ್‌ಎಸ್‌ಎಸ್‌ ನಾಯಕ ವಾಗ್ದಾಳಿ

ಬಿಜೆಪಿಯ ವಿರುದ್ಧ ಆರ್‌ಎಸ್‌ಎಸ್‌ ನಾಯಕರೊಬ್ಬರು ವಾಗ್ದಾಳಿ ನಡೆಸಿದ್ದು, ಆಡಳಿತ ಪಕ್ಷ ಲೋಕಸಭೆ...

ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾದ 45 ಮಂದಿಯ ಮೃತದೇಹಗಳು ಇಂದು ಭಾರತಕ್ಕೆ

ಎರಡು ದಿನಗಳ ಹಿಂದೆ ಕುವೈತ್ ಬೆಂಕಿ ದುರಂತದಲ್ಲಿ ಸಾವಿಗೀಡಾದ 45 ಮಂದಿಯ...

ಶಾಸಕ ಸ್ಥಾನಕ್ಕೆ ಸಿಕ್ಕಿಂ ಸಿಎಂ ಪತ್ನಿ ರಾಜೀನಾಮೆ: ಒಂದು ದಿನದ ಹಿಂದಷ್ಟೆ ಪ್ರೇಮ್ ಸಿಂಗ್‌ ಪ್ರಮಾಣವಚನ

ಒಂದು ದಿನದ ಹಿಂದಷ್ಟೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಿಕ್ಕಿಂ ಮುಖ್ಯಮಂತ್ರಿ...