ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ‌: ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ ಸಿಬಿಐ

ಪ್ರಶ್ನೆ ಪತ್ರಿಕೆ ಸೋರಿಕೆ

ಯುಜಿಸಿ ನೆಟ್ (UGC-NET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ‌ಕ್ಕೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಯನ್ನು ಆರಂಭಿಸಿದೆ.

ಪೇಪರ್ ಸೋರಿಕೆಯಾದ ಕಾರಣ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಇದಾದ ಒಂದು ದಿನದ ನಂತರ ಸಿಬಿಐ ತನಿಖೆಯನ್ನು ಆರಂಭಿಸಿದೆ.
ಜೂನ್ 18ರಂದು ಪರೀಕ್ಷೆ ನಡೆದಿತ್ತು.

“ಜೂನ್ 18ರಂದು ನಡೆಸಿದ ಯುಜಿಸಿ ನೆಟ್ ಪರೀಕ್ಷೆಯ ಸಮಗ್ರತೆಯನ್ನು ರಾಜಿ ಮಾಡಿಕೊಂಡಿದ್ದಕ್ಕಾಗಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಕ್ರಿಮಿನಲ್ ಸಂಚು ಮತ್ತು ವಂಚನೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  UGC-NET ಪರೀಕ್ಷೆ ನಡೆದ ಮರುದಿನವೇ ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಸರ್ಕಾರ!

ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, “ಮೇ 5ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಈಗಾಗಲೇ ತೀವ್ರ ಟೀಕೆಯನ್ನು ಎದುರಿಸುತ್ತಿದ್ದೇವೆ. ಈಗ ಯುಜಿಸಿ ನೆಟ್ 2024 ಪ್ರಶ್ನೆ ಪತ್ರಿಕೆ ಡಾರ್ಕ್‌ನೆಟ್‌ನಲ್ಲಿ ಸೋರಿಕೆಯಾಗಿದೆ” ಎಂದು ಹೇಳಿದರು.


“ಡಾರ್ಕ್‌ನೆಟ್‌ನಲ್ಲಿನ ಯುಜಿಸಿ ನೆಟ್ ಪ್ರಶ್ನೆಪತ್ರಿಕೆಯು ಯುಜಿಸಿ ನೆಟ್‌ನ ಮೂಲ ಪ್ರಶ್ನೆಪತ್ರಿಕೆಗೆ ಹೊಂದಿಕೆಯಾಗುತ್ತದೆ ಎಂಬುದು ಸ್ಪಷ್ಟವಾದ ನಂತರ ನಾವು ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ” ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ಇನ್ನು ಬುಧವಾರ ಪರೀಕ್ಷೆ ರದ್ದತಿ ಘೋಷಿಸಿದಾಗ ಶಿಕ್ಷಣ ಸಚಿವಾಲಯವು, ಪರೀಕ್ಷೆಯ ಸಮಗ್ರತೆ ‘ರಾಜಿಯಾಗಿದೆ’ ಎಂಬುದಕ್ಕೆ ‘ಪ್ರಾಥಮಿಕ ಸೂಚನೆ’ಗಳಿವೆ ಎಂದು ತಿಳಿಸಿತ್ತು.

“ಹೊಸ ಪರೀಕ್ಷೆಯನ್ನು ನಡೆಸಲಾಗುವುದು, ಇದಕ್ಕಾಗಿ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳಲಾಗುತ್ತದೆ. ಏಕಕಾಲದಲ್ಲಿ ಈ ವಿಷಯವನ್ನು ಸಮಗ್ರ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲಾಗುತ್ತಿದೆ” ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನು ಓದಿದ್ದೀರಾ?  UGC-NET ಪರೀಕ್ಷೆಯಂತೆ ನೀಟ್ ಪರೀಕ್ಷೆ ರದ್ದು ಮಾಡಲ್ಲ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ಯುಜಿಸಿ ಪರೀಕ್ಷೆ ಬರೆದ ಲಕ್ಷಾಂತರ ಮಂದಿ

ಯುಜಿಸಿ ಅಧ್ಯಕ್ಷರಾದ ಎಂ ಜಗದೇಶ್ ಕುಮಾರ್ ಅವರ ಪ್ರಕಾರ, 317 ನಗರಗಳಲ್ಲಿ 11.21 ಲಕ್ಷಕ್ಕೂ ಹೆಚ್ಚು ನೋಂದಾಯಿತ ಅಭ್ಯರ್ಥಿಗಳಲ್ಲಿ ಸುಮಾರು ಶೇಕಡ 81ರಷ್ಟು ಜನರು ನೆಟ್ ಪರೀಕ್ಷೆಗೆ ಹಾಜರಾಗಿದ್ದಾರೆ.

ನೀಟ್-ಯುಜಿ ಪರೀಕ್ಷೆ ನಡೆಯುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಯುಜಿಸಿ ನೆಟ್ ಪರೀಕ್ಷೆಯನ್ನು ನಡೆಸುತ್ತದೆ. ಈ ಪರೀಕ್ಷೆಯನ್ನು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ‘ಸಹಾಯಕ ಪ್ರೊಫೆಸರ್’ ಮತ್ತು ‘ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್’ ಹುದ್ದೆಗೆ ಭಾರತೀಯರ ಅರ್ಹತೆಯನ್ನು ನಿರ್ಧರಿಸಲು ನಡೆಸಲಾಗುತ್ತದೆ.

LEAVE A REPLY

Please enter your comment!
Please enter your name here