ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ | ಸಾಕ್ಷ್ಯಾಧಾರ ಸೃಷ್ಟಿ; ಸಿಬಿಐ ತನಿಖೆಯಲ್ಲಿ ಪತ್ತೆ?

Date:

ಜೂನ್ 18ರಂದು 317 ನಗರಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗಿದ್ದಾರೆ. ಇದಾದ ಕೇವಲ ಒಂದು ದಿನದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಾಕ್ಷಿ ಲಭ್ಯವಾದ ಕಾರಣ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ಆದರೆ ಈ ಸಾಕ್ಷ್ಯಾಧಾರವನ್ನೇ ಸೃಷ್ಟಿ ಮಾಡಲಾಗಿದೆ ಎಂಬುವುದು ಸಿಬಿಐ ತನಿಖೆಯಿಂದ ಪತ್ತೆಯಾಗಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

- Advertisement -

ಜೂನ್ 19ರಂದು, ‘ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿರಬಹುದು’ ಎಂದು ದೇಶದ ಅತೀ ಉನ್ನತ ಪರೀಕ್ಷೆಗಳಲ್ಲಿ ಒಂದಾದ ಯುಜಿಸಿ ನೆಟ್ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಜೂನ್ 18ರಂದು ಪರೀಕ್ಷೆಯ ದಿನದಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಟೆಲಿಗ್ರಾಮ್ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಸೈಬರ್‌ಕ್ರೈಮ್‌ಗೆ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸೈಬರ್‌ಕ್ರೈಮ್‌ಗೆ ಲಭಿಸಿದ ಸಾಕ್ಷಿಯ ಆಧಾರದಲ್ಲಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಜೂನ್ 23ರಂದು, ಶಿಕ್ಷಣ ಸಚಿವಾಲಯದ ಆದೇಶದಂತೆ ಕೇಂದ್ರೀಯ ತನಿಖಾ ದಳವು (ಸಿಬಿಐ) ಈ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿತು.

ಇದನ್ನು ಓದಿದ್ದೀರಾ?  ಯುಜಿಸಿ-ನೆಟ್‌| ಹೊಸ ದಿನಾಂಕ ಪ್ರಕಟ; ಆಗಸ್ಟ್‌ 21ರಿಂದ ಸೆಪ್ಟೆಂಬರ್ 4ರವರೆಗೆ ಪರೀಕ್ಷೆ

ಆದರೆ ಸರ್ಕಾರಿ ಮೂಲಗಳ ಪ್ರಕಾರ, ಪ್ರಶ್ನೆ ಪತ್ರಿಕೆಯ ಸ್ಕ್ರೀನ್‌ಶಾಟ್ ಪರೀಕ್ಷೆಯ ಮೊದಲೇ ಲೀಕ್ ಆಗಿದೆ ಎಂಬಂತೆ ದಾಖಲೆಯನ್ನು ಸೃಷ್ಟಿ ಮಾಡಲಾಗಿದೆ ಎಂದು ಸಿಬಿಐ ಪತ್ತೆ ಮಾಡಿದೆ.

ಯುಜಿಸಿ ನೆಟ್‌ನ ಬೆಳಿಗ್ಗೆಯ ಪರೀಕ್ಷೆಯ ಬಳಿಕ ಮಧ್ಯಾಹ್ನದ ಪರೀಕ್ಷೆಗೂ ಮುನ್ನ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಟೆಲಿಗ್ರಾಮ್ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋವನ್ನು ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ ನಡೆದಿದೆ.

ಈ ಛಾಯಾಚಿತ್ರವು ಪರೀಕ್ಷೆಗೆ ಮುಂಚೆಯೇ ಜನರ ಬಳಿ ಲಭ್ಯವಿತ್ತು ಎಂದು ಸೂಚಿಸುವಂತೆ ಸಾಕ್ಷಿ ಸೃಷ್ಟಿಸಲಾಗಿದೆ. ಆದರೆ ಯಾವ ರೀತಿಯ ಸಾಕ್ಷಿ ಎಂಬ ಬಗ್ಗೆ ಮಾಹಿತಿ ತಿಳಿದಿಲ್ಲ ಎಂದು ವರದಿ ಉಲ್ಲೇಖಿಸಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...