ಯುಜಿಸಿ-ನೆಟ್ ಫಲಿತಾಂಶ: ಜೆಆರ್‌ಎಫ್ ಮತ್ತು ಪಿಎಚ್‌ಡಿ ಅರ್ಹರ ಅಂಕಿ-ಅಂಶ ಪ್ರಕಟ

Date:

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ನಡೆಸಿದ ಯುಜಿಸಿ-ನೆಟ್ ಜೂನ್ ಪರೀಕ್ಷೆಯ ಫಲಿತಾಂಶಗಳು ಪ್ರಕಟಗೊಂಡಿದೆ. ದೇಶಾದ್ಯಂತ ಒಟ್ಟು 97,434 ಅಭ್ಯರ್ಥಿಗಳು ಪಿಎಚ್‌ಡಿ (PhD) ಪ್ರವೇಶಾತಿಗಾಗಿ ಅರ್ಹತೆ ಪಡೆದುಕೊಂಡಿದ್ದಾರೆ. ಇದರೊಂದಿಗೆ 4,241 ಅಭ್ಯರ್ಥಿಗಳು ಕಿರಿಯ ಸಂಶೋಧನಾ ಫೆಲೋಶಿಪ್ (JRF) ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಹರಾಗಿದ್ದಾರೆ ಎಂದು NTA ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

ಈ ಬಾರಿ 84 ವಿಷಯಗಳಲ್ಲಿ ಒಟ್ಟು 6,07,151 ಅಭ್ಯರ್ಥಿಗಳು ಬರೆದಿದ್ದ ಪರೀಕ್ಷೆಯ ಫಲಿತಾಂಶವನ್ನು NTA ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ (ugcnet.nta.nic.in) ಪ್ರಕಟಿಸಿದೆ. ಒಟ್ಟು ಪರೀಕ್ಷೆಯಲ್ಲಿ 1,47,579 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: ಮತ್ತೆ ಬೆತ್ತಲಾದ ‘ಎನ್‌ಟಿಎ’ ವೈಫಲ್ಯ: ಯುಜಿಸಿ-ನೆಟ್ ಪರೀಕ್ಷೆ ಹೆಸರಿನಲ್ಲಿ ಮೋದಿ ಸರ್ಕಾರದ ಇನ್ನೊಂದು ಪ್ರಹಸನ

ಜೂನ್ ಮತ್ತು ಜುಲೈ ತಿಂಗಳಲ್ಲಿ ದೇಶದ 286 ನಗರಗಳ 655 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆಗಳು ನಡೆದಿದ್ದವು. ಇದಕ್ಕೂ ಮುನ್ನ ಆಗಸ್ಟ್ 16 ರಿಂದ 18 ರವರೆಗೆ ಅಭ್ಯರ್ಥಿಗಳಿಗೆ ಪ್ರಾವಿಷನಲ್ ಉತ್ತರ ಕೀಲಿಗಳನ್ನು ಪರಿಶೀಲಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಹಾಗೂ ಉನ್ನತ ಶಿಕ್ಷಣದಲ್ಲಿ ಸಂಶೋಧನೆ (PhD) ಕೈಗೊಳ್ಳಲು ಅಪೇಕ್ಷಿಸುವ ಅಭ್ಯರ್ಥಿಗಳಿಗೆ UGC-NET ಪರೀಕ್ಷೆ ಅತ್ಯಂತ ಪ್ರಮುಖವಾಗಿದೆ. ಮುಂದಿನ ಹಂತದ UGC-NET ಪರೀಕ್ಷೆಗಳು ಡಿಸೆಂಬರ್ ತಿಂಗಳಲ್ಲಿ ನಡೆಯಲಿವೆ ಎಂದು ಸಂಸ್ಥೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...