ಉಮರ್ ಖಲೀದ್ ಜಾಮೀನು ಅರ್ಜಿ: ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

Date:

ದೆಹಲಿ ಗಲಭೆಗಳ ಪಿತೂರಿ ಪ್ರಕರಣಗಳ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಲೀದ್‌ ಜಾಮೀನು ಅರ್ಜಿ ವಿಚಾರಣೆಯಿಂದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಅಮಿತ್‌ ವರ್ಮಾ ಹಿಂದೆ ಸರಿದಿದ್ದಾರೆ.

- Advertisement -

ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದ ಪರಿಣಾಮ ಉಮರ್‌ ಖಲೀದ್ ಜಾಮೀನು ಅರ್ಜಿಯನ್ನು ಜುಲೈ 24ರಂದು ಬೇರೊಂದು ಪೀಠ ವಿಚಾರಣೆ ನಡೆಸಲಿದೆ. ಉಮರ್‌ ಅವರ ಜಾಮೀನು ಅರ್ಜಿಯನ್ನು ಇಂದು ನ್ಯಾಯಮೂರ್ತಿಗಳಾದ ಪ್ರತಿಭಾ ಎಂ ಸಿಂಗ್‌ ಹಾಗೂ ಅಮಿತ್‌ ಶರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಬೇಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಖಾಲಿದ್ ಅವರನ್ನು ಸೆಪ್ಟೆಂಬರ್ 2020 ರಲ್ಲಿ ಕ್ರಿಮಿನಲ್ ಪಿತೂರಿ, ಗಲಭೆ, ಕಾನೂನುಬಾಹಿರ ಸಭೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಯಿತು.

ಅಂದಿನಿಂದ ಜೈಲಿನಲ್ಲಿರುವ ಅವರು ಸಲ್ಲಿಸಿರುವ ಎರಡನೇ ಸುತ್ತಿನ ಜಾಮೀನು ಅರ್ಜಿ ಇದಾಗಿದೆ. ಖಾಲಿದ್‌ಗೆ ಎರಡು ಬಾರಿ ವಿಚಾರಣಾ ನ್ಯಾಯಾಲಯ ಮತ್ತು ಒಂದು ಬಾರಿ ಹೈಕೋರ್ಟ್ ಜಾಮೀನು ನಿರಾಕರಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

ವಿಚಾರಣಾ ನ್ಯಾಯಾಲಯವು ಮೊದಲು ಮಾರ್ಚ್ 2022ರಲ್ಲಿ ಅವರಿಗೆ ಜಾಮೀನು ನಿರಾಕರಿಸಿತು. ನಂತರ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದರು. ಆದರೆ ಹೈಕೋರ್ಟ್ ಅಕ್ಟೋಬರ್ 2022ರಲ್ಲಿ ಜಾಮೀನು ನಿರಾಕರಿಸಿದ ನಂತರ ಖಲೀದ್‌ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋದರು.

ಮೇ 2023 ರಲ್ಲಿ, ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿತು. ನಂತರ ಖಾಲಿದ್‌ ಅವರ ಮನವಿಯನ್ನು 14 ಬಾರಿ ಮುಂದೂಡಲಾಯಿತು.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ  ಮತ್ತು  ಪಂಕಜ್ ಮಿತ್ತಲ್‌ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ  ಫೆಬ್ರವರಿ 14 ರಂದು  ಪ್ರಕರಣದ ವಿಚಾರಣೆ ನಡೆಸಬೇಕಿತ್ತು. ಆದರೆ ಖಾಲಿದ್ ಪರ ವಕೀಲರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಳ್ಳುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...