ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ನಿರಾಕರಣೆ: ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

Date:

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್, ದೆಹಲಿ ಗಲಭೆ ಪ್ರಕರಣದಲ್ಲಿ ತಮಗೆ ಜಾಮೀನು ನಿರಾಕರಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.

- Advertisement -

ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ಉನ್ನತ ನ್ಯಾಯಾಲಯದ ಪೀಠದ ಮುಂದೆ ವಕೀಲ ಎನ್ ಸಾಯಿ ವಿನೋದ್ ಖಾಲಿದ್ ಪರ ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ವಕೀಲ ಕಪಿಲ್ ಸಿಬಲ್ ಈ ವಿಷಯದಲ್ಲಿ ಮುಕ್ತ ನ್ಯಾಯಾಲಯದ ವಿಚಾರಣೆಯನ್ನು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? ದೆಹಲಿ ಗಲಭೆ ಸಮಯದಲ್ಲಿ ನನ್ನ ಮಗ ದೆಹಲಿಯಲ್ಲಿ ಇರಲಿಲ್ಲ: ಉಮರ್ ಖಾಲಿದ್ ತಂದೆ

ಮುಸ್ಲಿಮರನ್ನು ಭಾರತೀಯ ಪೌರತ್ವದಿಂದ ಹೊರಗಿಡಲು ರೂಪಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ರಾಷ್ಟ್ರವ್ಯಾಪಿ ಪ್ರತಿಭಟನೆಗಳಲ್ಲಿ ಪ್ರಮುಖ ಧ್ವನಿಯಾಗಿದ್ದವರು ಉಮರ್ ಖಾಲಿದ್. ಅವರನ್ನು 2020ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಬಂಧಿಸಲಾಗಿದೆ. ಖಾಲಿದ್ ಜಾಮೀನು ಅರ್ಜಿಯನ್ನು ಪದೇ ಪದೇ ವಜಾಗೊಳಿಸಲಾಗಿದ್ದು, ವಿಚಾರಣೆ ನಡೆಸದೆಯೇ ಕಳೆದ ಐದು ವರ್ಷಗಳಿಗೂ ಅಧಿಕ ಸಮಯದಿಂದ ಖಾಲಿದ್ ಜೈಲಿನಲ್ಲಿರಿಸಲಾಗಿದೆ.

ಖಾಲಿದ್ ಬಿಡುಗಡೆ ಮಾಡಬೇಕು ಎಂದು ಹಲವು ಮಾನವ ಹಕ್ಕುಗಳ ಸಂಘಟನೆಗಳು ಹೋರಾಟ ನಡೆಸುತ್ತಿದೆ. ಇತ್ತೀಚೆಗೆ ವಿಶ್ವಸಂಸ್ಥೆಯ ಅಂಗಸಂಸ್ಥೆ NWGAD ಉಮರ್ ಬಂಧನವು ವಿಶ್ವಸಂಸ್ಥೆ ಸ್ಥಾಪಿಸಿದ ನಾಲ್ಕು ವರ್ಗಗಳ ಅನಿಯಂತ್ರಿತ ಬಂಧನದ ಅಡಿಯಲ್ಲಿ ಅಕ್ರಮ ಎಂದು ಹೇಳಿದೆ.

ಇದನ್ನು ಓದಿದ್ದೀರಾ? ‘ನೀವು ಎದ್ದು ನಿಲ್ಲುವಿರಿ’: ಉಮರ್ ಖಾಲಿದ್‌ಗಾಗಿ ಕವಿತೆ ಬರೆದ ಸಂಸದೆ ಮಹುವಾ ಮೊಯಿತ್ರಾ

2025ರ ಮಾರ್ಚ್‌ನಲ್ಲಿ ಮಾನವ ಹಕ್ಕುಗಳ ಪ್ರತಿಷ್ಠಾನ (HRF) ಖಾಲಿದ್ ಪರವಾಗಿ UNWGAD ಗೆ ಅರ್ಜಿ ಸಲ್ಲಿಸಿದೆ. ಬಂಧನವು ಕಾನೂನುಬದ್ಧವಾಗಿ ಆಧಾರರಹಿತ, ತಾರತಮ್ಯ ಮತ್ತು ಮೂಲಭೂತ ಹಕ್ಕುಗಳ ಮೇಲೆ ಪರಿಣಾಮ ಬೀರಿದೆ ಎಂದು HRF ವಾದಿಸಿದೆ. ಈ ಅರ್ಜಿ ಪರಿಶೀಲಿಸಿದ UNWGAD ತಜ್ಞರು ಖಾಲಿದ್ ಬಂಧನ ಅಕ್ರಮ. ಖಾಲಿದ್ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹಾಗೆಯೇ ಉಮರ್ ಖಾಲಿದ್ ಬಂಧನವು ಸ್ವಾತಂತ್ರ್ಯದ ಹರಣ. ಅಭಿವ್ಯಕ್ತಿ ಸ್ವಾತಂತ್ರ್ಯ, ಸಭೆ ಸೇರುವುದು, ಸಂಘಟಿತರಾಗುವುದು ಮತ್ತು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುವ ಅವರ ಹಕ್ಕುಗಳ ಹರಣವಾಗಿದೆ ಎಂದು UNWGAD ತೀರ್ಮಾನಕ್ಕೆ ಬಂದಿದೆ. ಆದರೆ ಈ ಸಂಬಂಧ ಈವರೆಗೂ ಕೇಂದ್ರ ಸರ್ಕಾರ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಇಂದಿಗೂ UAPA ದುರುಪಯೋಗಕ್ಕೆ ಸಿಲುಕಿ ಉಮರ್ ಖಾಲಿದ್ ಜೈಲಿನಲ್ಲಿದ್ದಾರೆ. ಜಾಮೀನಿಗಾಗಿ ಅರ್ಜಿ ಸಲ್ಲಿಸುತ್ತಲೇ ಇದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...