ಮತ್ತೆ ತಿಹಾರ್ ಜೈಲಿಗೆ ಹಿಂದಿರುಗಿದ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್

Date:

ತಮ್ಮ ಸಹೋದರಿಯ ವಿವಾಹದ ಹಿನ್ನೆಲೆಯಲ್ಲಿ 14 ದಿನಗಳ ಕಾಲ‌ ನ್ಯಾಯಾಲಯದಿಂದ ಜಾಮೀನು ಪಡೆದಿದ್ದ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್, ಜಾಮೀನು ಅವಧಿಯು ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಮತ್ತೆ ತಿಹಾರ್ ಜೈಲಿಗೆ ಹಿಂದಿರುಗಿದ್ದಾರೆ.

- Advertisement -

ಉಮರ್ ಖಾಲಿದ್ ಅವರ ಕೆಲವು ವಾಟ್ಸ್‌ಆ್ಯಪ್‌ ಸಂದೇಶಗಳನ್ನು ಆಧರಿಸಿ ದೆಹಲಿ ಗಲಭೆಗೆ ಉಮರ್ ಖಾಲಿದ್ ಸಂಚು ರೂಪಿಸಿದ್ದರೆಂದು ಆರೋಪಿಸಲಾಗಿದೆ. ಇದೇ ಆರೋಪದ ಮೇಲೆ 2020ರಲ್ಲಿ ಅವರನ್ನು ದೆಹಲಿ ಪೊಲೀಸರು ಉಮರ್ ಖಾಲಿದ್ ಅವರನ್ನು ಬಂಧಿಸಿದ್ದರು. ಅಂದಿನಿಂದ ಸರಿಯಾದ ವಿಚಾರಣೆಯೂ ಇಲ್ಲದೆ, ಜಾಮೀನೂ ದೊರೆಯದೆ ಉಮರ್ ಖಾಲಿದ್‌ ಜೈಲಿನಲ್ಲಿಯೇ ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಮ್ಮ ಸಹೋದರಿಯ ವಿವಾಹದಲ್ಲಿ ಭಾಗಿಯಾಗಲು 14 ದಿನಗಳ ಷರತ್ತುಬದ್ಧ ಜಾಮೀನು ನೀಡಿ ದೆಹಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ಸಮೀರ್ ಬಾಜ್‌ಪೈ ಆದೇಶಿಸಿದ್ದರು.

ಖಾಲಿದ್ ಅವರ ಸಹೋದರಿಯ ವಿವಾಹವು ಡಿಸೆಂಬರ್ 27ರಂದು ನಿಗದಿಯಾಗಿತ್ತು. ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಡಿಸೆಂಬರ್ 14 ರಿಂದ ಡಿಸೆಂಬರ್ 29ರವರೆಗೆ ಜಾಮಿನು ನೀಡಬೇಕೆಂದು ಕೋರಿ ಖಾಲಿದ್‌ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ಡಿಸೆಂಬರ್ 14ರಿಂದ ಜಾಮೀನು ನೀಡುವ ಬದಲಾಗಿ, ಡಿಸೆಂಬರ್ 16ರಿಂದ ಜಾಮೀನು ಮಂಜೂರು ಮಾಡಿತ್ತು.

1141528

14 ದಿನಗಳ ಷರತ್ತು ಬದ್ಧ ಜಾಮೀನು ನೀಡಿದ್ದ ವೇಳೆ ನ್ಯಾಯಾಲಯವು, “ಜೈಲಿನಿಂದ ಹೊರಬಂದ ಅವಧಿಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ. ಕುಟುಂಬ, ಸಂಬಂಧಿಕರು ಹಾಗೂ ಸ್ನೇಹಿತರನ್ನಲ್ಲದೆ ಬೇರೆ ಯಾರನ್ನೂ ಭೇಟಿ ಮಾಡುವಂತಿಲ್ಲ. ತಮ್ಮ ಮನೆಯಲ್ಲಿ ಅಥವಾ ಅವರು ನಿರ್ದಿಷ್ಟಪಡಿಸಿದಂತೆ ವಿವಾಹ ಸಮಾರಂಭಗಳು ನಡೆಯುವ ಸ್ಥಳದಲ್ಲಿ ಮಾತ್ರವೇ ಅವರು ಇರಬೇಕು” ಎಂದು ನ್ಯಾಯಾಲಯ ಷರತ್ತು ವಿಧಿಸಿತ್ತು.

ಡಿಸೆಂಬರ್ 29ಕ್ಕೆ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಮತ್ತೆ ತಿಹಾರ್ ಜೈಲಿಗೆ ಉಮರ್ ಖಾಲಿದ್ ಹಿಂದಿರುಗಿದ್ದಾರೆ. ಈ ವೇಳೆ ಉಮರ್ ಖಾಲಿದ್ ಅವರ ತಂದೆ ಎಸ್ ಕ್ಯೂ ಆರ್ ಇಲ್ಯಾಸ್, ತಾಯಿ ಸೇರಿದಂತೆ ಕುಟುಂಬದ ಸದಸ್ಯರು, ಸ್ನೇಹಿತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...