ದೆಹಲಿ ಗಲಭೆ ಪ್ರಕರಣ: ಉಮರ್ ಖಾಲೀದ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

Date:

Advertisements

ಈಶಾನ್ಯ ದೆಹಲಿಯಲ್ಲಿ 2020 ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕ ಉಮರ್‌ ಖಾಲೀದ್‌ ಅವರಿಗೆ ಜಾಮೀನು ನೀಡುವುದನ್ನು ದೆಹಲಿ ಹೈಕೋರ್ಟ್‌ ನಿರಾಕರಿಸಿದೆ.

ಹೆಚ್ಚುವರಿ ಸೆಷನ್ಸ್‌ನ ನ್ಯಾಯಾಧೀಶರಾದ ಸಮೀರ್‌ ಬಾಜಪೇಯಿ ಅವರು ಖಾಲೀದ್‌ ಜಾಮೀನು ಅರ್ಜಿಯನ್ನು ನಿರಾಕರಿಸಿದರು. ಇದು ಖಾಲೀದ್‌ ಅವರ ನಿಯಮಿತ ಜಾಮೀನು ಅರ್ಜಿಯಾಗಿದ್ದು, ಎರಡನೇ ಬಾರಿ ಜಾಮೀನು ಅರ್ಜಿಗೆ ಮನವಿ ಸಲ್ಲಿಸಿದ್ದರು.

ದೆಹಲಿ ಗಲಭೆಯಲ್ಲಿ ಪಿತೂರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್‌ ಖಾಲೀದ್‌ ಅವರು ಯುಎಪಿಎ ಪ್ರಕರಣದಡಿ 2020 ಸೆಪ್ಟಂಬರ್‌ನಿಂದ ಸೆರೆಮನೆಯಲ್ಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಧರ್ಮಾಧಿಕಾರಿ’ಗೆ ಅಡ್ಡಬಿದ್ದ ಸರ್ಕಾರ ಸಾರುತ್ತಿರುವ ಸಂದೇಶವೇನು?

ಖಾಲೀದ್‌ ಅವರು ಫೆ.14, 2024ರಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹಿಂಪಡೆದ ನಂತರ ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಮೊರೆ ಹೋಗಿದ್ದರು.

ಖಲೀದ್‌ ಪರ ವಕೀಲರಾದ ತ್ರಿದೀಪ್ ಪಯ್ಸ್, ಆರೋಪಿಯು ಯಾವುದೇ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿಲ್ಲ.ಆತನಿಂದ ಒಂದು ಸಣ್ಣ ದಾಖಲೆಯನ್ನು ವಶಪಡಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕೆಂದು ಕೋರ್ಟ್‌ಗೆ ಮನವಿ ಮಾಡಿದರು.

ಅನಂತರ ಕೋರ್ಟ್‌ ಮುಂದೆ ವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕರಾದ ಅಮಿತ್ ಪ್ರಸಾದ್, ಪಿತೂರಿಯ ಭಾಗವಾಗಿ ಖಾಲೀದ್‌ ಅವರು ತಮ್ಮ ಮಾತುಗಳನ್ನು ಎಲ್ಲ ಕಡೆ ಪ್ರಚುರಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಜನರೊಂದಿಗೆ ವಿವಿಧ ರೀತಿಯ ಚಾಟ್‌ಗಳನ್ನು ನಡೆಸಿದ್ದಾರೆ. ಪಿತೂರಿಯಲ್ಲಿ ಆರೋಪಿಯ ಹೆಸರು ಮೊದಲಿನಿಂದಲೂ ಕಾಣಿಸಿಕೊಂಡಿದೆ ಎಂದು ಕೋರ್ಟ್‌ಗೆ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X