ಪೂನಾದ ‘IISER’ ಗ್ರಂಥಾಲಯದಿಂದ ಉಮರ್ ಖಾಲಿದ್ ಪುಸ್ತಕ ತೆರವು

Date:

ಪುಣೆಯಲ್ಲಿರುವ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಆಂಡ್ ರಿಸರ್ಚ್’ (IISER) ಸಂಸ್ಥೆಯ ಗ್ರಂಥಾಲಯದಿಂದ ವಿದ್ಯಾರ್ಥಿ ಹೋರಾಟಗಾರ, ಸಂಶೋಧಕ ಉಮರ್ ಖಾಲಿದ್ ಅವರ ಶೈಕ್ಷಣಿಕ ಪುಸ್ತಕವನ್ನು ತೆರವುಗೊಳಿಸಲಾಗಿದೆ. “ಯಾವುದೇ ರೀತಿಯ ತಪ್ಪು ತಿಳುವಳಿಕೆ ಅಥವಾ ಅಶಾಂತಿಯನ್ನು ತಡೆಗಟ್ಟುವ ಮುನ್ನೆಚ್ಚರಿಕೆಯ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಸಂಸ್ಥೆಯ ಆಡಳಿತ ಮಂಡಳಿ ಹೇಳಿಕೊಂಡಿದೆ. ಆದರೆ, ಸಂಸ್ಥೆಯ ನಿರ್ಧಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

- Advertisement -

ಉಮರ್ ಖಾಲಿದ್ ಅವರು ಪಿಎಚ್‌ಡಿ ಅಧ್ಯಯನ ನಡೆಸುತ್ತಿದ್ದ ವೇಳೆ ಸಿದ್ಧಪಡಿಸಿದ್ದ ಸಂಶೋಧನಾ ಪ್ರಬಂಧವನ್ನು ಆಧರಿಸಿ ‘ಫ್ರ್ಯಾಕ್ಚರ್ಡ್ ಕಮ್ಯುನಿಟೀಸ್: ಆದಿವಾಸಿ ಹಿಸ್ಟರೀಸ್ ಅಂಡ್ ದಿ ಪಾಲಿಟಿಕ್ಸ್ ಆಫ್ ಪವರ್’ ಎಂಬ ಪುಸ್ತಕವನ್ನು ರಚಿಸಿದ್ದರು. ಈ ಪುಸ್ತಕದಲ್ಲಿ ಜಾರ್ಖಂಡ್‌ನ ಸಿಂಗ್‌ಭೂಮ್ ಪ್ರದೇಶದಲ್ಲಿನ ‘ಹೋ’ ಪಂಗಡದ ಬುಡಕಟ್ಟು ಸಮುದಾಯಗಳು, ಬ್ರಿಟಿಷ್ ವಸಾಹತುಶಾಹಿ ಆಡಳಿತ ಹಾಗೂ ರಾಜಕೀಯ ಅಧಿಕಾರದ 200 ವರ್ಷಗಳ ಇತಿಹಾಸವನ್ನು ವಿಶ್ಲೇಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ಸಂಸ್ಥೆಯ ನಿಯಮಾವಳಿಯಂತೆ ಗ್ರಂಥಾಲಯ ಸಮಿತಿಯ ಶಿಫಾರಸಿನ ಮೇರೆಗೆ ಪ್ರತಿ ತಿಂಗಳು ಸುಮಾರು 50ಕ್ಕೂ ಹೆಚ್ಚು ಹೊಸ ಪುಸ್ತಕಗಳನ್ನು ಸೇರ್ಪಡೆಗೊಳಿಸಲಾಗುತ್ತದೆ. ಅದೇ ರೀತಿ, ಈ ಪುಸ್ತಕವನ್ನು ಗ್ರಂಥಾಲಯಕ್ಕೆ ಸೇರಿಸಲಾಗಿತ್ತು. ಆದರೆ, “ಕೇಂದ್ರ ಸರ್ಕಾರದ ಪ್ರಮುಖ ವಿಜ್ಞಾನ ಸಂಶೋಧನಾ ಸಂಸ್ಥೆಯ ಗ್ರಂಥಾಲಯದಲ್ಲಿ ಉಮರ್ ಖಾಲಿದ್ ಬರೆದ ಕೃತಿಯನ್ನು ಇಡಲಾಗಿದೆ” ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪುಸ್ತಕವನ್ನು ತೆಗೆದು ಹಾಕಲಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಹೇಳಿಕೊಂಡಿದೆ.

ಅಂದಹಾಗೆ, 2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಉಮರ್ ಖಾಲಿದ್ ಅವರನ್ನು ಅದೇ ವರ್ಷದ ಸೆಪ್ಟೆಂಬರ್‌ನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು. ಅವರು 6 ವರ್ಷಗಳಿಂದ ವಿಚಾರಣೆಯೂ ಇಲ್ಲದೆ, ಜಾಮೀನೂ ದೊರೆಯದೆ ದೆಹಲಿಯ ತಿಹಾರ್‌ ಜೈಲಿನಲ್ಲಿದ್ದಾರೆ.

2024ರ ಡಿಸೆಂಬರ್‌ನಲ್ಲಿ ತಮ್ಮ ತಂಗಿಯ ಮದುವೆಗೆ ಹಾಜರಾಗಲು ಮಾತ್ರ ಕೋರ್ಟ್ ಅವರಿಗೆ ಕೆಲ ದಿನಗಳ ಮಧ್ಯಂತರ ಜಾಮೀನು ನೀಡಿತ್ತು. ಆದಾಗ್ಯೂ, 2020ರಿಂದಲೂ ಖಾಲಿದ್‌ ಅವರು ದೆಹಲಿಯ ರೂಸ್‌ ಅವೆನ್ಯೂ ನ್ಯಾಯಾಲಯ, ದೆಹಲಿ ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ಗಳಲ್ಲಿ ಸತತವಾಗಿ ಜಾಮೀನು ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಅವರಿಗೆ ನಿರಂತರವಾಗಿ ಜಾಮೀನು ನಿರಾಕರಿಸಲಾಗುತ್ತಿದೆ.

ದುರದೃಷ್ಟಕರ ಸಂಗತಿಯೆಂದರೆ, ಇದುವರೆಗೆ ನ್ಯಾಯಾಲಯದಲ್ಲಿ ಈ ಪ್ರಕರಣದ ಮೂಲ ವಿಚಾರಣೆಯೇ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿಲ್ಲ. ‘ತಪ್ಪಿತಸ್ಥ ಎಂದು ಸಾಬೀತಾಗುವವರೆಗೆ ಪ್ರತಿಯೊಬ್ಬ ವ್ಯಕ್ತಿಯೂ ನಿರಪರಾಧಿ’ ಎಂಬುದು ಭಾರತೀಯ ಅಪರಾಧ ನ್ಯಾಯಶಾಸ್ತ್ರದ ಮೂಲ ತತ್ವ. ಆದರೆ, ಈ ತತ್ವಕ್ಕೆ ವಿರುದ್ಧವಾಗಿ, ವಿಚಾರಣೆಯೇ ನಡೆಯದೆ ವರ್ಷಾನುಗಟ್ಟಲೆ ಜೈಲಿನಲ್ಲಿಡುವ ಈ ಕ್ರಮವನ್ನು ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿಗಳು ಖಂಡಿಸಿದ್ದಾರೆ. ಕಳವಳ ವ್ಯಕ್ತಪಡಿಸಿದ್ದಾರೆ.

ಒಂದೆಡೆ ವಿಚಾರಣೆಯಿಲ್ಲದೆ ವರ್ಷಗಟ್ಟಲೆ ಜೈಲುವಾಸ ಅನುಭವಿಸುತ್ತಿರುವ ಅವರ ಕಾನೂನು ಸ್ಥಿತಿ ಮತ್ತು ಇನ್ನೊಂದೆಡೆ ಅವರ ಶೈಕ್ಷಣಿಕ ಸಂಶೋಧನಾ ಕೃತಿಯನ್ನೂ ಗ್ರಂಥಾಲಯಗಳಿಂದ ತೆರವುಗೊಳಿಸುತ್ತಿರುವ ಪ್ರವೃತ್ತಿ ದೇಶದ ಜ್ಞಾನರಂಗ, ಶೈಕ್ಷಣಿಕ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಪರಿಣಾಮಗಳ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಅದಾನಿ ಕುರಿತ ವಿಡಿಯೊ ಪ್ರಸಾರಕ್ಕೆ ಕಲ್ಕತ್ತಾ ಹೈಕೋರ್ಟ್ ತಡೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಸಮೂಹದ ನಡುವಿನ ಸಂಬಂಧದ ಕುರಿತು...

ಔರಾದ್‌ | ಭಕ್ತಿ-ಸಡಗರದಿಂದ ವಾಲ್ಮೀಕಿ ಜಯಂತಿ ಆಚರಣೆ

ಔರಾದ್ ತಾಲೂಕಿನ ರಕ್ಷಾಳ (ಬಿ) ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿ,...

ಕಲಬುರಗಿ | ಡಿ.12ರಿಂದ ಮೂರು ದಿನ ರಾಜ್ಯಮಟ್ಟದ ರೈತ ಸಮಾವೇಶ, ಕೃಷಿಮೇಳ

ನವ ಕರ್ನಾಟಕ ರೈತ ಸಂಘದ ವತಿಯಿಂದ ನಗರದ ಸುಮಾರು 18 ಎಕರೆ...