ಕ್ರಿಕೆಟ್ ಮೈದಾನದಲ್ಲಿ ಜೇನು ಹುಳುಗಳ ದಾಳಿ: ಅಂಪೈರ್ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Date:

ಕ್ರಿಕೆಟ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದಾಗ ಜೇನು ಹುಳುಗಳು ದಾಳಿ ನಡೆಸಿದ್ದು, 65 ವರ್ಷದ ಕ್ರಿಕೆಟ್ ಅಂಪೈರ್ ಸಾವನ್ನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಉನ್ನಾಂವ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಶುಕ್ಲಗಂಜ್ ಪ್ರದೇಶದ ಸಪ್ರು ಮೈದಾನದಲ್ಲಿ ಈ ಘಟನೆ ನಡೆದಿದ್ದು, ಆಟ ಆಯೋಜನೆ ಮಾಡಿದ್ದ ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್‌ನ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಚಿಕ್ಕಮಗಳೂರು l ರಾಸಾಯನಿಕ ಸಿಂಪರಣೆ; ಸಾವಿರಾರು ಜೇನು ಹುಳುಗಳು ಸಾವು

ಪೊಲೀಸ್ ಅಧಿಕಾರಿಗಳ ಪ್ರಕಾರ, ಕಾನ್ಪುರದ ಮಾಣಿಕ್ ಗುಪ್ತಾ ಕ್ರಿಕೆಟ್ ಪಂದ್ಯದ ಅಂಪೈರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾಗ ಜೇನು ಹುಳುಗಳ ಗುಂಪೊಂದು ಇದ್ದಕ್ಕಿದ್ದಂತೆ ಆಟಗಾರರು ಮತ್ತು ಮೈದಾನದಲ್ಲಿದ್ದ ಅಧಿಕಾರಿಗಳ ಮೇಲೆ ದಾಳಿ ನಡೆಸಿದೆ. ಈ ವೇಳೆ ಅಲ್ಲಿದ್ದವರೆಲ್ಲರೂ ಓಡಿದ್ದಾರೆ.

ದಾಳಿಯಿಂದಾಗಿ ಗುಪ್ತಾ ಗಂಭೀರ ಗಾಯಗೊಂಡು ಪ್ರಜ್ಞೆ ತಪ್ಪಿದ್ದು, ಅವರನ್ನು ಮೊದಲು ಶುಕ್ಲಗಂಜ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಅವರ ಸ್ಥಿತಿ ಹದಗೆಟ್ಟ ಕಾರಣ ಕಾನ್ಪುರದ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಆಸ್ಪತ್ರೆಯ ವೈದ್ಯರು ಗುಪ್ತಾ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಇನ್ನು ಮತ್ತೊಬ್ಬ ಅಂಪೈರ್ ಮತ್ತು ಸುಮಾರು 15 ರಿಂದ 20 ಆಟಗಾರರಿಗೂ ಜೇನು ಹುಳಗಳು ಕಡಿದಿದೆ. ಇನ್ನು ಗುಪ್ತಾ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ, ಜೇನುನೊಣಗಳು ಇನ್ನೂ ಅವರ ಮುಖ ಮತ್ತು ದೇಹಕ್ಕೆ ಅಂಟಿಕೊಂಡಿದ್ದವು ಎಂದು ಕಾನ್ಪುರ ಕ್ರಿಕೆಟ್ ಅಸೋಸಿಯೇಷನ್‌ನ ಅಧ್ಯಕ್ಷ ಎಸ್‌ ಎನ್ ಸಿಂಗ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...