‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

Date:

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ ಅಧಿಕ ಕಾಲದಿಂದ ಜೈಲಿನಲ್ಲಿದ್ದಾರೆ. ಇದೀಗ ಉಮರ್ ಬಂಧನವು ವಿಶ್ವಸಂಸ್ಥೆ ಸ್ಥಾಪಿಸಿದ ನಾಲ್ಕು ವರ್ಗಗಳ ಅನಿಯಂತ್ರಿತ ಬಂಧನದ ಅಡಿಯಲ್ಲಿ ಅಕ್ರಮ ಎಂದು ವಿಶ್ವಸಂಸ್ಥೆಯ ಅಂಗಸಂಸ್ಥೆ NWGAD ತಜ್ಞರು ಹೇಳಿದ್ದಾರೆ.

- Advertisement -

ಉಮರ್ ಖಾಲಿದ್ ಬಂಧನವು ಸ್ವಾತಂತ್ರ್ಯದ ಹರಣ. ಅಭಿವ್ಯಕ್ತಿ ಸ್ವಾತಂತ್ರ್ಯ, ಸಭೆ ಸೇರುವುದು, ಸಂಘಟಿತರಾಗುವುದು ಮತ್ತು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸುವ ಅವರ ಹಕ್ಕುಗಳ ಹರಣವಾಗಿದೆ ಎಂದು UNWGAD ತೀರ್ಮಾನಕ್ಕೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಇದನ್ನು ಓದಿದ್ದೀರಾ? ಉಮರ್ ಖಾಲಿದ್ ಸೆರೆವಾಸಕ್ಕೆ ಐದು ವರ್ಷಗಳು: ಮುಕ್ತಿ ಎಂದು?

ಮುಸ್ಲಿಮರನ್ನು ಭಾರತೀಯ ಪೌರತ್ವದಿಂದ ಹೊರಗಿಡಲು ರೂಪಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ರಾಷ್ಟ್ರವ್ಯಾಪಿ ಪ್ರತಿಭಟನೆಗಳಲ್ಲಿ ಪ್ರಮುಖ ಧ್ವನಿಯಾಗಿದ್ದವರು ಉಮರ್ ಖಾಲಿದ್ ಅವರನ್ನು 2020ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಬಂಧಿಸಲಾಗಿದೆ. ಖಾಲಿದ್ ಜಾಮೀನು ಅರ್ಜಿಯನ್ನು ಪದೇ ಪದೇ ವಜಾಗೊಳಿಸಲಾಗಿದ್ದು, ವಿಚಾರಣೆ ನಡೆಸದೆಯೇ ಕಳೆದ ಐದು ವರ್ಷಗಳಿಗೂ ಅಧಿಕ ಸಮಯದಿಂದ ಜೈಲಿನಲ್ಲಿರಿಸಲಾಗಿದೆ.

ಖಾಲಿದ್ ಬಿಡುಗಡೆಗಾಗಿ ಹಲವು ಮಾನವ ಹಕ್ಕುಗಳ ಸಂಘಟನೆಗಳು ಹೋರಾಟ ನಡೆಸುತ್ತಿರುವ ನಡುವೆ ವಿಶ್ವಸಂಸ್ಥೆಯ ಅಂಗಸಂಸ್ಥೆಯು ಈ ಪ್ರಕರಣವನ್ನು ಪರಿಶೀಲಿಸಿದೆ. 2025ರ ಮಾರ್ಚ್‌ನಲ್ಲಿ ಮಾನವ ಹಕ್ಕುಗಳ ಪ್ರತಿಷ್ಠಾನ (HRF) ಖಾಲಿದ್ ಪರವಾಗಿ UNWGAD ಗೆ ಅರ್ಜಿ ಸಲ್ಲಿಸಿದೆ. ಬಂಧನವು ಕಾನೂನುಬದ್ಧವಾಗಿ ಆಧಾರರಹಿತ, ತಾರತಮ್ಯ ಮತ್ತು ಮೂಲಭೂತ ಹಕ್ಕುಗಳ ಮೇಲೆ ಪರಿಣಾಮ ಬೀರಿದೆ ಎಂದು HRF ವಾದಿಸಿದೆ. ಈ ಅರ್ಜಿ ಪರಿಶೀಲಿಸಿದ UNWGAD ತಜ್ಞರು ಖಾಲಿದ್ ಬಂಧನ ಅಕ್ರಮ. ಖಾಲಿದ್ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ನನಗೂ 2020ರ ದೆಹಲಿ ಹಿಂಸಾಚಾರಕ್ಕೂ ಸಂಬಂಧವಿದೆ ಎಂಬುದಕ್ಕೆ ಪುರಾವೆಗಳಿಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಉಮರ್ ಖಾಲಿದ್

ಯುಎಪಿಎ ದುರುಪಯೋಗದ ಆತಂಕ

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ದುರುಪಯೋಗದ ಬಗ್ಗೆ ಈ ಹಿಂದೆಯೇ ಹಲವು ಬಾರಿ ಮಾನವ ಹಕ್ಕುಗಳ ಹೋರಾಟಗಾರರು, ಕಾನೂನು ತಜ್ಞರು ಮತ್ತು ರಾಜಕೀಯ ವಿಶ್ಲೇಷಕರು ಆತಂಕ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಮಾಹಿತಿಯ ಪ್ರಕಾರ, ಯುಎಪಿಎ ಅಡಿಯಲ್ಲಿ ಬಂಧಿತರಾದವರಲ್ಲಿ ಕೇವಲ 2% ರಿಂದ 3% ಜನರಿಗೆ ಮಾತ್ರ ಶಿಕ್ಷೆಯಾಗುತ್ತಿದೆ. ಅಂದರೆ ಬಹುತೇಕ ಪ್ರಕರಣಗಳಲ್ಲಿ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗುತ್ತಿಲ್ಲ. ಹೆಚ್ಚಾಗಿ ನಿರಪರಾಧಿಗಳೇ ಆಗಿರುತ್ತಾರೆ. ಆದರೂ ವರ್ಷಗಟ್ಟಲೆ ಜೈಲಿನಲ್ಲಿ ಕಳೆಯಬೇಕಾಗುತ್ತದೆ.

ಈ ಕಾಯ್ದೆಯ ಸೆಕ್ಷನ್ 43D(5) ಅಡಿಯಲ್ಲಿ ಆರೋಪದ ಬಗ್ಗೆ “ಮೇಲ್ನೋಟಕ್ಕೆ ಸತ್ಯಾಂಶವಿದೆ” ಎಂದು ನ್ಯಾಯಾಲಯ ಭಾವಿಸಿದರೆ ಜಾಮೀನು ನೀಡುವುದನ್ನು ನಿರ್ಬಂಧಿಸಲಾಗಿದೆ. ಇದು ವಿಚಾರಣೆ ಪೂರ್ಣಗೊಳ್ಳುವ ಮೊದಲೇ ದೀರ್ಘಕಾಲ ಜೈಲಿನಲ್ಲಿ ನಿರಪರಾಧಿಗಳೂ ಇರುವಂತಾಗಿದೆ. ಅದಕ್ಕೂ ಮುಖ್ಯವಾಗಿ ಪತ್ರಕರ್ತರು, ವಿದ್ಯಾರ್ಥಿ ನಾಯಕರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ಕೇಂದ್ರ ಸರ್ಕಾರವು ಈ ಕಾಯ್ದೆಯನ್ನು ಬಳಸುತ್ತಿದೆ. ಈ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದೆ. ಉದಾಹರಣೆಗೆ, ಭೀಮಾ ಕೋರೆಗಾಂವ್ ಪ್ರಕರಣ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಈ ಕಾಯ್ದೆಯ ಬಳಕೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...