ಒಡಿಶಾ | ಆ್ಯಂಬುಲೆನ್ಸ್‌ಗೆ ಹಣ ಹೊಂದಿಸಲಾಗದೆ ಮಗಳ ಮೃತದೇಹವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

Date:

ಆ್ಯಂಬುಲೆನ್ಸ್‌ಗೆ ಹಣ ಹೊಂದಿಸಲಾಗದೆ ತನ್ನ 17 ವರ್ಷದ ಮಗಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಂದೆ ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಹೃದಯ ವಿದ್ರಾವಕ ಘಟನೆ ಒಡಿಶಾದ ಬಲಾಸೋರ್‌ನ ಬಲಿಯಾಪಾಲ್‌ನಲ್ಲಿ ನಡೆದಿದೆ. ಸುಮಾರು 7 ಕಿ.ಮೀ ದೂರದವರೆಗೆ ಮೃತದೇಹವನ್ನು ಟ್ರಾಲಿ ರಿಕ್ಷಾದಲ್ಲಿ ತಂದೆ ಕೊಂಡೊಯ್ದಿದ್ದಾರೆ.

- Advertisement -

ದೆಯುಲಾ ಗ್ರಾಮದ ಬಾಲಕಿ ಆಶಾ ಬಿಂಧಾನಿ ಗುರುವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಸ್ಥಳೀಯರು ತಿಳಿಸಿದ ಬಳಿಕ ಸ್ಥಳಕ್ಕೆ ತಂದೆ ಧಾವಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ವ್ಯಕ್ತಿಯ ಮೃತದೇಹ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್‌ ಅಪಘಾತ; ಕುಟುಂಬದ ಇಬ್ಬರು ಸೇರಿ ಮೂವರ ಸಾವು

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಲಿಯಾಪಾಲ್ ಸಿಎಚ್‌ಸಿಗೆ ಕೊಂಡೊಯ್ಯುವಂತೆ ದಿನಗೂಲಿ ಕಾರ್ಮಿಕರಾದ ಬಾಲಕಿಯ ತಂದೆ ಮಧು ಅವರಿಗೆ ಸೂಚಿಸಿದ್ದಾರೆ. ಪೊಲೀಸರ ಸೂಚನೆಯಂತೆ ಆ್ಯಂಬುಲೆನ್ಸ್‌ ಸೇವೆಗಾಗಿ ಚಾಲಕನನ್ನು ತಂದೆ ಸಂಪರ್ಕಿಸಿದಾಗ ಚಾಲಕ 1,200 ರೂಪಾಯಿ ಕೇಳಿದ್ದಾರೆ ಎನ್ನಲಾಗಿದೆ.

ಇಷ್ಟೊಂದು ಹಣ ನೀಡಲು ಮತ್ತು ಹೊಂದಿಸಲು ಆಗದ ಕಾರಣ ತಂದೆ ಸರ್ಕಾರಿ 108 ತುರ್ತು ಆ್ಯಂಬುಲೆನ್ಸ್‌ ಸೇವೆಯ ಸಹಾಯ ಕೋರಿದ್ದಾರೆ. ಆದರೆ ಮೃತದೇಹ ಸಾಗಿಸುವ ಸೇವೆ ನೀಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಮಧು ಸ್ಥಳೀಯರನ್ನು ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಆದರೆ ಯಾರೂ ಸಹಾಯ ಮಾಡಿಲ್ಲ. ಈ ವೇಳೆ ಸ್ಥಳೀಯರೊಬ್ಬರು ಮಧ್ಯಪ್ರವೇಶಿಸಿ ಮೃತದೇಹವನ್ನು ಸಾಗಿಸಲು ತಮ್ಮ ಟ್ರಾಲಿ ರಿಕ್ಷಾ ನೀಡಿದ್ದಾರೆ ಎಂದು ವರದಿಯಾಗಿದೆ.

“ನನ್ನ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮತ್ತೆ ಅದೇ ರಿಕ್ಷಾದಲ್ಲಿ ಮೃತದೇಹವನ್ನು ಡ್ಯೂಲಾ ಗ್ರಾಮಕ್ಕೆ ತಂದು ಅಂತಿಮ ವಿಧಿವಿಧಾನ ನಡೆಸಿದ್ದೇನೆ” ಎಂದು ಮಧು ಹೇಳಿದ್ದಾರೆ.

ಸದ್ಯ ಟ್ರಾಲಿ ರಿಕ್ಷಾದಲ್ಲಿ ಮೃತದೇಹವನ್ನು ಕೊಂಡೊಯ್ಯುತ್ತಿರುವ ವಿಡಿಯೋ, ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆದರೆ ಈ ವಿಡಿಯೋ ಮಾಡಿಕೊಂಡವರು ಬಡ ತಂದೆಗೆ ಯಾವುದೇ ಸಹಾಯ ಮಾಡದಿರುವುದು, ಮತ್ತೆ ಸ್ಥಳೀಯರು ಯಾವುದೇ ಸಹಾಯ ಮಾಡದಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...