ಗಂಡು ಹುಟ್ಟಿಲ್ಲವೆಂದು ನವಜಾತ ಹೆಣ್ಣು ಶಿಶುವನ್ನು ನೀರಿನ ಟ್ಯಾಂಕ್‌ಗೆ ಎಸೆದ ತಾಯಿ

Date:

ಗಂಡು ಮಗು ಹುಟ್ಟಿಲ್ಲವೆಂಬ ಕಾರಣಕ್ಕೆ ಹತಾಶೆಗೆ ಒಳಗಾಗಿ 17 ದಿನದ ಹೆಣ್ಣು ಶಿಶುವನ್ನು ತಾಯಿ ನೀರಿನ ಟ್ಯಾಂಕ್‌ಗೆ ಎಸೆದು ಕೊಂದ ಘಟನೆ ರಾಜಸ್ಥಾನದ ಜುಂಜುನುವಿನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ತಾನೇ ಮಗುವನ್ನು ನೀರಿನ ಟ್ಯಾಂಕ್‌ಗೆ ಎಸೆದು ಕೊಂದಿರುವುದಾಗಿ ತಾಯಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ತಾಯಿಯನ್ನು ಆಚ್ಕಿ ದೇವಿ (22) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ಹೆಣ್ಣು ಮಗು ಹುಟ್ಟಿದ್ದಕ್ಕೆ ಪತ್ನಿಯನ್ನೇ ಜೀವಂತ ಸುಟ್ಟ ವಿಕೃತ ಪತಿ

“ನನಗೆ ಗಂಡು ಮಗು ಜನಿಸಬೇಕು ಎಂಬ ಆಸೆ ಇತ್ತು. ಆದರೆ ನನಗೆ ಹೆಣ್ಣು ಮಗು ಜನಿಸಿತು. ಇದರಿಂದ ನನಗೆ ನಿರಾಶೆಯಾಯಿತು. ಅದಕ್ಕಾಗಿ ನೀರಿನ ಟ್ಯಾಂಕ್‌ಗೆ ಮಗುವನ್ನು ಎಸೆದು, ಅದರ ಮುಚ್ಚಿಬಿಟ್ಟೆ” ಎಂದು ತಾಯಿ ಪೊಲೀಸರಿಗೆ ತಿಳಿಸಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ನಾರಾಯಣ ಸಿಂಗ್, “ಶ್ರೀ ರಾಮ ಕಾಲೋನಿಯ ಆಚ್ಕಿ ದೇವಿ ಎಂಬ ಮಹಿಳೆ ತನ್ನ 17 ದಿನದ ಹೆಣ್ಣು ಮಗುವನ್ನು ಭಾನುವಾರ ನೀರಿನ ಟ್ಯಾಂಕ್‌ಗೆ ಎಸೆದಿದ್ದಾಳೆ. ತನಗೆ ಗಂಡು ಮಗು ಆಗಿಲ್ಲ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾಳೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ದೆಹಲಿ | ಚೀಲದಲ್ಲಿ 6 ದಿನದ ಹೆಣ್ಣು ಮಗುವಿನ ಮೃತದೇಹ ಪತ್ತೆ; ತಾಯಿಯ ಬಂಧನ

ಮಹಿಳೆಯು ತನ್ನ ಪರಿಚಯಸ್ಥರೊಬ್ಬರಿಗೆ ಈ ಬಗ್ಗೆ ತಿಳಿಸಿದ್ದಳು. ಆ ವ್ಯಕ್ತಿ ಮಹಿಳೆಯ ಪತಿಗೆ ತಿಳಿಸಿದ್ದು, ಪತಿ ಪೊಲೀಸರಿಗೆ ದೂರು ನೀಡಿದ್ದಾನೆ. ದೂರಿನ ಆಧಾರದಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ. ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಭಾರತದಲ್ಲಿ ಹಲವಾರು ಶತಕಗಳಿಂದ ಹೆಣ್ಣು ಮಗುವನ್ನು ತಿರಸ್ಕರಿಸುತ್ತಾ ಬರಲಾಗಿದೆ. ಇಂದಿಗೂ ಜನರಲ್ಲಿರುವ ಮನೋಭಾವ ಬದಲಾಗಿಲ್ಲ. ಅಕ್ರಮವಾಗಿ ಭ್ರೂಣದ ಲಿಂಗ ಪತ್ತೆ ಹಚ್ಚಿ, ಹೆಣ್ಣೆಂದು ತಿಳಿದಾಗ ಗರ್ಭಪಾತ ಮಾಡಿಸುವ ಅದೆಷ್ಟೋ ಪ್ರಕರಣಗಳು ಇಂದಿಗೂ ದಾಖಲಾಗುತ್ತಿವೆ. ಅದರಲ್ಲೂ ಮುಖ್ಯವಾಗಿ ಅತ್ತೆ, ಪತಿ, ಕುಟುಂಬಸ್ಥರ ತುಚ್ಛ ಮಾತುಗಳ ಒತ್ತಡದಿಂದಾಗಿ ತಾಯಿಯೇ ತನ್ನ ಹೆಣ್ಣು ಮಗುವನ್ನು ಕೊಂದಿರುವ ಘಟನೆಯೂ ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...