ಶಿಕ್ಷಿತರಿಗೆ ಮತ ನೀಡಿ ಎಂದ ಶಿಕ್ಷಕನ ವಜಾ: ಅನ್‌ಅಕಾಡೆಮಿ ಆನ್‌ಲೈನ್ ಸಂಸ್ಥೆ ವಿರುದ್ಧ ಆಕ್ರೋಶ

Date:

ಶಿಕ್ಷಣ ತಂತ್ರಜ್ಞಾನ ಸಂಸ್ಥೆ ಅನ್‌ಅಕಾಡೆಮಿ ಶಿಕ್ಷಿತ ಅಭ್ಯರ್ಥಿಗಳಿಗೆ ಮತ ಚಲಾಯಿಸಿ ಎಂದು ಮನವಿ ಮಾಡಿದ ಶಿಕ್ಷಕರೊಬ್ಬರನ್ನು ಸೇವೆಯಿಂದ ವಜಾಗೊಳಿಸಿದೆ.

ವಿವಾದಾತ್ಮಕ ವಿಡಿಯೋದಲ್ಲಿ ಶಿಕ್ಷಕರಾದ ಕರನ್ ಸಾಂಗ್ವಾನ್ ಮುಂದಿನ ಬಾರಿ ಶಿಕ್ಷಿತ ಅಭ್ಯರ್ಥಿಗಳಿಗೆ ಮತ ಚಲಾಯಿಸಿ ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡುತ್ತಿರುವುದು ಸೆರೆಯಾಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಕೇವಲ ಹೆಸರುಗಳನ್ನು ಬದಲಾಯಿಸುವವರಿಗೆ ಮತ ಹಾಕಬೇಡಿ ಮತ್ತು ಸುಶಿಕ್ಷಿತ ರಾಜಕಾರಣಿಗಳನ್ನು ಆಯ್ಕೆ ಮಾಡುವಂತೆ ಕರನ್ ಸಾಂಗ್ವಾನ್ ಅವರು ವಿದ್ಯಾರ್ಥಿಗಳನ್ನು ಕೇಳಿಕೊಳ್ಳುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಳೆದ ಕೆಲವು ದಿನಗಳಿಂದ ಒಂದು ವಿಡಿಯೋ ವೈರಲ್ ಆಗಿರುವುದರಿಂದ ನಾನು ವಿವಾದಕ್ಕೆ ಸಿಲುಕಿದ್ದೇನೆ ಮತ್ತು ಈ ವಿವಾದದ ಕಾರಣಕ್ಕೆ ನ್ಯಾಯಾಂಗ ಸೇವೆ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ನನ್ನ ಹಲವಾರು ವಿದ್ಯಾರ್ಥಿಗಳು ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಅವರೊಂದಿಗೆ ನಾನೂ ಕೂಡಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ” ಎಂದು ಅನ್‌ಅಕಾಡೆಮಿ ಸಂಸ್ಥೆಯಿಂದ ವಜಾಗೊಂಡ ಸಾಂಗ್ವಾನ್ ಹೇಳಿಕೊಂಡಿದ್ದಾರೆ.

ಸಾಂಗ್ವಾನ್ ಈಗ ತಮ್ಮದೇ ಆದ ಯೂಟ್ಯೂಬ್ ಚಾನೆಲ್‌ನ್ನು ಪ್ರಾರಂಭಿಸಿದ್ದು,ಆಗಸ್ಟ್ 19 ರಂದು ವಿವಾದದ ವಿವರಗಳನ್ನು ಪೋಸ್ಟ್ ಮಾಡುವುದಾಗಿ ತಿಳಿಸಿದ್ದಾರೆ.

ಸಾಂಗ್ವಾನ್ ಅವರನ್ನು ವಜಾಗೊಳಿಸಿದ ವರದಿಗಳಿಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ವಿದ್ಯಾವಂತರಿಗೆ ಮತ ನೀಡಿ ಎಂದು ಕೇಳುವುದು ಅಪರಾಧವೇ? ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅನ್‌ಅಕಾಡಮಿ ಸಂಸ್ಥಾಪಕರನ್ನು ತೀವ್ರವಾಗಿ ಟೀಕಿಸಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಥೆ ”ಇಂತಹ ಬೆನ್ನು ಮೂಳೆಯಿಲ್ಲದ ಮತ್ತು ದುರ್ಬಲ ಜನರು ಶಿಕ್ಷಣ ವೇದಿಕೆಯನ್ನು ನಡೆಸುತ್ತಿರುವುದನ್ನು ನೋಡುವುದು ದುಃಖವಾಗುತ್ತಿದೆ. ಒತ್ತಡಕ್ಕೆ ಒಳಗಾಗುವವರು ಮತ್ತು ಹಿಂಸೆಗೆ ಒಳಗಾಗುವವರು ಈ ಜಗತ್ತಿನಲ್ಲಿರುವ ಎಲ್ಲ ವಿಲಕ್ಷಣಗಳ ವಿರುದ್ಧ ನಿಲ್ಲುವ ನಾಗರಿಕರನ್ನು ಬೆಳೆಸಲು ಎಂದಿಗೂ ಮುಂದೆ ಬರಲಾರರು” ಎಂದು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಸೋಲಿಸುವ ಅಭ್ಯರ್ಥಿಗಳಿಗೆ ಮತ ನೀಡಿ: ರೈತ ನಾಯಕ ರಾಕೇಶ್ ಟಿಕಾಯತ್ ಮನವಿ

ಲೋಕಸಭಾ ಚುನಾವಣೆಯಲ್ಲಿ ಮೇ.25 ಹಾಗೂ ಜೂನ್‌ 1ರ  ಕೊನೆಯ ಎರಡು ಹಂತದ...

ಹರಿಯಾಣದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 7 ಜನರ ಸಾವು, 25 ಮಂದಿಗೆ ಗಾಯ

ಹರಿಯಾಣ ದ ಅಂಬಾಲದಲ್ಲಿ ಇಂದು ಬೆಳಗಿನ ಜಾವ ಟ್ರಕ್‌ವೊಂದು ಮಿನಿ ಬಸ್‌ಗೆ...

5ನೇ ಹಂತದ ಲೋಕಸಭೆ ಚುನಾವಣೆ: ಶೇ. 62.2 ರಷ್ಟು ಮತದಾನ

ಮೇ 20 ರಂದು ನಡೆದ 5ನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಶೇ....

ಲೋಕಸಭೆ ಚುನಾವಣೆ 6ನೇಹಂತ: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಲೋಕಸಭಾ ಚುನಾವಣೆ 6ನೇ ಹಂತದ ಮತದಾನ ಇದೇ ಮೇ 25 ರಂದು...