ಗ್ಯಾನೇಶ್‌ ವಿರುದ್ಧ ‘ಇಂಡಿಯಾ’ ಪ್ರತಿಭಟನೆ; ಹೋರಾಟ ಹತ್ತಿಕ್ಕಲು ಮೋದಿ-ಶಾ ಸರ್ಕಸ್! 

Date:

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮತ್ತು SIR ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ INDIA ಒಕ್ಕೂಟ ಮತ್ತು ವಿವಿಧ ಸಂಘಟನೆಗಳು ನಾಳೆ (ನ.1) ರಾಮಲೀಲಾ ಮೈದಾನದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್‍ಯಾಲಿ  ಮತ್ತು ‘ಸಾರ್ವಜನಿಕ ದೋಷಾರೋಪಣೆ’ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಸದ್ಯ ದೆಹಲಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

- Advertisement -

ಮತ್ತೊಂದೆಡೆ, ಈ ಐತಿಹಾಸಿಕ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ದೆಹಲಿ ಪೊಲೀಸರು ನಡೆಸುತ್ತಿರುವ ತಡೆ ಕೃತ್ಯಗಳು, ಸರ್ವಾಧಿಕಾರಿ ಧೋರಣೆಗಳು ಮತ್ತು ಭದ್ರತೆಯ ಹೆಸರಿನಲ್ಲಿ ಸಾರ್ವಜನಿಕರ ಮೂಲಭೂತ ಹಕ್ಕುಗಳ ಮೇಲೆ ನಡೆಯಬಹುದಾದ ಹಾಗೂ ಈ ಹಿಂದೆ ನಡೆದಿರುವ ಘಟನೆಗಳ ಬಗ್ಗೆ ಈಗ ಮತ್ತೊಮ್ಮೆ ಚರ್ಚೆ ಶುರುವಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪ್ರತಿಭಟನಾಕಾರರನ್ನು ರಾಜಧಾನಿಗೆ ಪ್ರವೇಶಿಸದಂತೆ ತಡೆಯಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸ್ ಇಲಾಖೆ  ಕಠಿಣ ನಿರ್ಬಂಧಗಳನ್ನು ಹೇರಿವೆ.

ದೆಹಲಿಯಾದ್ಯಂತ ವ್ಯಾಪಕ ತಪಾಸಣೆ ನಡೆಯುತ್ತಿದ್ದು, ರಾಜಧಾನಿಗೆ ಬರುವ ರೈಲುಗಳು, ರಾಜಧಾನಿ ಎಕ್ಸ್‌ಪ್ರೆಸ್‌ಗಳನ್ನು ರದ್ದುಪಡಿಸಲಾಗಿದೆ. ಸುಮಾರು 57ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳನ್ನು ಮುಚ್ಚಲು ಆದೇಶಿಸಲಾಗಿದೆ. ಇದರಿಂದ ದೆಹಲಿಯ ದಿನನಿತ್ಯದ ಪ್ರಯಾಣಿಕರು, ಪ್ರವಾಸಿಗರು ಮತ್ತು ವ್ಯಾಪಾರಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಹೊರರಾಜ್ಯಗಳಿಂದ ದೆಹಲಿಗೆ ಬರುವ ಟ್ಯಾಕ್ಸಿ, ಕಾರುಗಳು ಮತ್ತು ಬಸ್‌ಗಳನ್ನು ತಡೆದು ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಹೋಟೆಲ್ ಬುಕಿಂಗ್ ವಿವರಗಳನ್ನು ಕೇಳುವ ಮೂಲಕ ಜನರನ್ನು ಭಯಭೀತಗೊಳಿಸುವ ವಾತಾವರಣ ಸೃಷ್ಟಿಸಲಾಗಿದೆ.

ದೆಹಲಿಯಲ್ಲಿ 250ಕ್ಕೂ ಹೆಚ್ಚು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (CAPF) ಕಂಪನಿಗಳು, CRPF, BSF, ITBP ಮತ್ತು ಮಹಿಳಾ ಬೆಟಾಲಿಯನ್ ಸೇರಿದಂತೆ ಸಾವಿರಾರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇಡೀ ದೆಹಲಿ ಅಕ್ಷರಶಃ ಪೊಲೀಸ್ ಛಾವಣಿಯಂತೆ ಬದಲಾಗಿದೆ.

ಪ್ರಜಾಪ್ರಭುತ್ವದ ಧ್ವನಿಯಾಗಿರುವ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಉದ್ದೇಶಪೂರ್ವಕವಾಗಿ ಅನುಮತಿ ನಿರಾಕರಿಸುತ್ತಿದ್ದರು. ಈಗಲೂ ಮುಂದುವರೆಸಿದ್ದಾರೆ. CJP ಹಾಗೂ ಇತರೆ ಸಂಘಟನೆಗಳು ನಡೆಸಿದ ‘ಸಂಸದ್ ಚಲೋ’ ಮತ್ತು ಜಂತರ್ ಮಂತರ್ ಪ್ರತಿಭಟನೆಗಳ ಸಂದರ್ಭದಲ್ಲಿ ದೆಹಲಿ ಪೊಲೀಸರು ಬಲಪ್ರಯೋಗ ಮಾಡಿದ್ದರು. ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ ಹಾಗೂ ವಶಕ್ಕೆ ಪಡೆಯುವ ಮೂಲಕ ಪ್ರತಿಭಟನಾಕರರ ಧ್ವನಿಯನ್ನು ಹತ್ತಿಕ್ಕುವ ಯತ್ನ ನಡೆದಿತ್ತು.

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಮತ್ತು ಕಾಮಿನಿ ಜೈಸ್ವಾಲ್ ಅವರು ಸರ್ಕಾರದ ಈ ನಡೆಗಳನ್ನು ತೀವ್ರವಾಗಿ ಖಂಡಿಸಿದ್ದು, “ಇದು ಜನರ ಮೇಲಿನ ಯುದ್ಧದ ಸಿದ್ಧತೆ. ಪ್ರಧಾನಿ ಮೋದಿ ಅವರಿಗೆ ಹಾಸ್ಯ ಹಾಗೂ ಟೀಕೆಗಳನ್ನು ಸಹಿಸಿಕೊಳ್ಳುವ ಶಕ್ತಿಯಿಲ್ಲ. ವಿರೋಧದ ಧ್ವನಿಯನ್ನು ಹತ್ತಿಕ್ಕಲು ಈ ರೀತಿಯ ಸರ್ವಾಧಿಕಾರಿ ಕ್ರಮಗಳನ್ನು ಕೈಗೊಳ್ಳಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, “ರಾಮ್‌ಲೀಲಾ ಮೈದಾನಕ್ಕೆ ಅಕ್ಟೋಬರ್ 25 ರಿಂದ ನವೆಂಬರ್ 3 ರವರೆಗೆ ಅಧಿಕೃತ ಅನುಮತಿ ಪಡೆದಿದ್ದರೂ, ಪೊಲೀಸರು ಕೊನೇ ಕ್ಷಣದಲ್ಲಿ ಮೈದಾನದಲ್ಲಿ ಸಿದ್ಧತೆ ನಡೆಸುವುದನ್ನು ತಡೆದಿದ್ದಾರೆ. ಇದು ದೆಹಲಿ ಪೊಲೀಸರ ಸ್ವತಂತ್ರ ನಿರ್ಧಾರವಲ್ಲ, ಬದಲಿಗೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನೇರ ಆದೇಶ” ಎಂದು ವಾಗ್ದಾಳಿ ನಡೆಸಿದ್ದಾರೆ.

ಎಡಪಂಥೀಯ ನಾಯಕರಾದ ಎಂ.ಎ. ಬೇಬಿ ಹಾಗೂ ಸಂಸದ ಜಾನ್ ಬ್ರಿಟ್ಟಾಸ್ ಮಾತನಾಡಿ, ಸರ್ಕಾರದ ಎಷ್ಟೇ ಕಠಿಣ ತಡೆಗೋಡೆಗಳು ಮತ್ತು ಬೆದರಿಕೆಗಳ ನಡುವೆಯೂ ನವೆಂಬರ್ 1 ರಂದು ಸುಮಾರು 10 ಲಕ್ಷಕ್ಕೂ ಅಧಿಕ ಜನರು ದೆಹಲಿಗೆ ಆಗಮಿಸಿ ಈ ಐತಿಹಾಸಿಕ ಪ್ರತಿಭಟನೆಯನ್ನು ಯಶಸ್ವಿಗೊಳಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಮೂರು ಗಂಟೆಗಳ ಕಾಲ ಉನ್ನತ ಮಟ್ಟದ ಭದ್ರತಾ ವಿಮರ್ಶಾ ಸಭೆ ನಡೆಸಿದ್ದಾರೆ. ಪ್ರತಿಭಟನೆಗಳನ್ನು ಹತ್ತಿಕ್ಕಲು, ಗುಪ್ತಚರ ಮಾಹಿತಿಯನ್ನು ಬಲಪಡಿಸಲು ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಆದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಮಾತ್ರ ಕ್ರಮ ತೆಗೆದಕೊಳ್ಳುವರೇ ಅಥವಾ ಪ್ರತಿಭಟನಾಕರರನ್ನೂ ಗುರಿ ಮಾಡುವರೇ ಎಂಬುದೇ ಈಗ ದೊಡ್ಡ ಪ್ರಶ್ನೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸುವ, ಚುನಾವಣಾ ವ್ಯವಸ್ಥೆಯ ಲೋಪಗಳನ್ನು ಎತ್ತಿ ತೋರಿಸುವ ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ಸರ್ಕಾರದ ಯಂತ್ರಾಂಗ ನಡೆಸುತ್ತಿರುವ ಈ ದಬ್ಬಾಳಿಕೆಯು ದೇಶದ ರಾಜಕೀಯ ಇತಿಹಾಸದಲ್ಲಿ ಕಪ್ಪುಚುಕ್ಕೆ. ಪೊಲೀಸರ ಎಷ್ಟೇ ನಿರ್ಬಂಧಗಳು, ತಡೆಗಳು ಮತ್ತು ಬಂಧನಗಳ ಬೆದರಿಕೆಗಳಿದ್ದರೂ, ನಾಳಿನ ರಾಮ್‌ಲೀಲಾ ಮೈದಾನದ ಬೃಹತ್ ಸಮಾವೇಶ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ನಡೆಯುವ ಈ ಹೋರಾಟ ಹಿಂದೇಟು ಹಾಕುವುದಿಲ್ಲ ಎಂಬುದನ್ನು ವಿಪಕ್ಷ ನಾಯಕರು ಮತ್ತು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಾಥ ದೇಗುಲದ ಸುತ್ತ ಮಾಂಸಾಹಾರ ನಿಷೇಧ ಮುಂದುವರಿಕೆ; ಏಕಸದಸ್ಯ ಪೀಠದ ಆದೇಶಕ್ಕೆ ಗುಜರಾತ್ ಹೈಕೋರ್ಟ್ ತಡೆ

ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಂಸಾಹಾರ ತಯಾರಿಕೆ, ಮಾರಾಟ...

SIR ­| ಫಾರ್ಮ್-7 ದುರ್ಬಳಕೆ: ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ತಾಕೀತು!

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ‘ಫಾರ್ಮ್-7’ ನಮೂನೆಗಳನ್ನು ಅಪಾರ ಪ್ರಮಾಣದಲ್ಲಿ...

ವಿಮಲ್ ಜಾಹೀರಾತು ವಿವಾದ: ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ ನಟ ಅಜಯ್ ದೇವಗನ್! 

'ವಿಮಲ್ ಏಲಕ್ಕಿ' ಜಾಹೀರಾತಿನಲ್ಲಿ ನಟಿಸಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಇಲಾಖೆ...

ಅವಳ ಕಣ್ಣೋಟ | ‘ಅರುವಿ’- ಉಸಿರುಗಟ್ಟುವ ನೋವು, ಉರಿಯುವ ಸಿಟ್ಟು

ಚಿತ್ರದ ಮತ್ತೊಂದು ಮುಖ್ಯ ಚರ್ಚೆ ಕ್ಷಮೆಯ ಕುರಿತದ್ದು. ಅರುವಿ ತನ್ನನ್ನು ಶೋಷಿಸಿದ...