ಅಘೋಷಿತ ತುರ್ತು ಪರಿಸ್ಥಿತಿ: ಪ್ರತಿಭಟನಾಕಾರರ ಬಿಡುಗಡೆ ಮಾಡದಿದ್ದರೆ ಉಪವಾಸ; ವಾಂಗ್‌ಚುಕ್ ಎಚ್ಚರಿಕೆ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವಿವಿಧ ನಾಯಕರು ಮತ್ತು ಹೋರಾಟಗಾರರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿರುವ ಪ್ರಸಿದ್ಧ ಶಿಕ್ಷಣ ತಜ್ಞ, ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ’ ನೆಲೆಯಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ‘ಎಕ್ಸ್’ (X)ನ ತಮ್ಮ ಅಧಿಕೃತ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ವಾಂಗ್‌ಚುಕ್, ಬಂಧಿತ ನಾಯಕರನ್ನು ಭಾನುವಾರದೊಳಗೆ (ನಾಳೆ) ಬಿಡುಗಡೆ ಮಾಡದಿದ್ದರೆ ಉಪವಾಸ ಸತ್ಯಾಗ್ರಹ ಅಥವಾ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಸರ್ಕಾರಕ್ಕೆ ಗಡುವು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನೂ ಓದಿ: ಸಿಜೆಪಿ ದೆಹಲಿ ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

“ನಿನ್ನೆ ನಾನು ಇಂದಿನ ಪ್ರತಿಭಟನೆಯಲ್ಲಿ ಶಾಂತಿ ಮತ್ತು ಐಕ್ಯತೆಯನ್ನು ಕಾಯ್ದುಕೊಳ್ಳುವಂತೆ ಮನವಿ ಮಾಡಿ ಸಂದೇಶ ಪೋಸ್ಟ್ ಮಾಡಿದ್ದೆ. ಆದರೆ, ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವು ಹೀಗೆ ‘ಅಘೋಷಿತ ತುರ್ತು ಪರಿಸ್ಥಿತಿ’ಗೆ ಸಿಲುಕುತ್ತದೆ ಎಂದು ನಾನು ಎಂದೂ ಊಹಿಸಿರಲಿಲ್ಲ” ಎಂದು ಹೇಳಿದ್ದಾರೆ.

“ಈ ಚಳವಳಿಯನ್ನು ಮುನ್ನಡೆಸಲು ಹಲವು ನಾಯಕರಿದ್ದಾರೆ ಎಂದು ನನಗೆ ಸಂತೋಷವಾಗಿತ್ತು. ಆದರೆ ಈಗ ಅವರೆಲ್ಲರನ್ನೂ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತರನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ನಾನು ಭಾವಿಸುತ್ತೇನೆ. ನಾಳೆಯೊಳಗೆ ಅವರನ್ನು ಬಿಡುಗಡೆ ಮಾಡದಿದ್ದರೆ ನಾನು ಉಪವಾಸ ಸತ್ಯಾಗ್ರಹ ಅಥವಾ ಪಾದಯಾತ್ರೆ ನಡೆಸಲು ನಿರ್ಧರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಭದ್ರತಾ ಮುನ್ನೆಚ್ಚರಿಕೆಯಾಗಿ ದೆಹಲಿ ಪೊಲೀಸರು ಹಲವು ನಾಯಕರು ಮತ್ತು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಈ ಕ್ರಮವನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಬಣ್ಣಿಸಿರುವ ವಾಂಗ್‌ಚುಕ್, ಸರ್ಕಾರ ಕೂಡಲೇ ನಾಯಕರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...