ಶುಕ್ರವಾರ ದೆಹಲಿ-ಎನ್‌ಸಿಆರ್‌ಯಲ್ಲಿ ಭಾರೀ ಮಳೆಯಾಗಿದ್ದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದಲ್ಲಿ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ದಾದ್ರಿ ತಹಸಿಲ್ ವ್ಯಾಪ್ತಿಯ ಖೋಡ್ನಾ ಕಲಾನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪೋಲೀಸರ ಪ್ರಕಾರ, ನಿರ್ಮಾಣ ಹಂತದಲ್ಲಿರುವ ಮನೆಯ ಗೋಡೆಯ ಅವಶೇಷಗಳ ಅಡಿಯಲ್ಲಿ ಒಟ್ಟು ಎಂಟು ಮಕ್ಕಳು ಸಿಲುಕಿಕೊಂಡಿದ್ದರು. ಅವರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಗೌತಮ್ ಬುದ್ಧ ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅತುಲ್ ಕುಮಾರ್, “ದಾದ್ರಿ ತಹಸಿಲ್ ವ್ಯಾಪ್ತಿಯ ಖೋಡ್ನಾ ಕಲನ್ ಗ್ರಾಮದಲ್ಲಿ ಶುಕ್ರವಾರ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಎಂಟು ಮಕ್ಕಳು ಸಿಲುಕಿದ್ದಾರೆ” ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಕೇರಳ | ಮನೆಗೆ ಬೆಂಕಿ; ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ
“ನಿರ್ಮಾಣ ಹಂತದಲ್ಲಿದ್ದ ಮನೆಯ ಗೋಡೆ ಕುಸಿದಿದ್ದು, ಮೂವರು ಮಕ್ಕಳು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಉಳಿದ ಐವರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗುತ್ತದೆ” ಎಂದು ಮಾಹಿತಿ ನೀಡಿದರು.
#WATCH | 3 children died and 5 injured after the wall of an under-construction house collapsed in the Greater Noida’s Surajpur Police station area. Injured children are undergoing treatment at a hospital.
(Visuals from the hospital) https://t.co/Vu7IZAA0eJ pic.twitter.com/WpdFjXme35
— ANI (@ANI) June 28, 2024