ಅನೈತಿಕ ಪೊಲೀಸ್‌ಗಿರಿ | ಪುಣೆ ವಿವಿ ಕ್ಯಾಂಪಸ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿ ಮೇಲೆ ಹಲ್ಲೆ

Date:

ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾನಿಲಯದ ಕ್ಯಾಂಪನ್‌ನಲ್ಲಿ 19 ವರ್ಷದ ವಿದ್ಯಾರ್ಥಿ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ಮಾಡಿದೆ. ವಿದ್ಯಾರ್ಥಿ ಮೇಲೆ ‘ಲವ್ ಜಿಹಾದ್’ ಆರೋಪ ಮಾಡಿರುವ ಗುಂಪು ಕೊಲೆ ಬೆದರಿಕೆಯನ್ನೂ ಹಾಕಿದೆ ಎಂದು ವರದಿಯಾಗಿದೆ.

- Advertisement -

ಸಂತ್ರಸ್ತ ವಿದ್ಯಾರ್ಥಿ ಭಾನುವಾರ ತನ್ನ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುವಾಗ, ಅವರನ್ನು ಅಡ್ಡಗಟ್ಟಿದ ಅಪರಿಚಿತರ ಗುಂಪು, ಅವರ ಹೆಸರು, ಆಧಾರ್‌ ಕಾರ್ಡ್‌ಗಳನ್ನು ಕೇಳಿದೆ. ಸಂತ್ರಸ್ತ ತನ್ನ ಆಧಾರ್‌ ಕಾರ್ಡ್‌ ತೋರಿಸಿದಾಗ, ‘ನೀನು ಮುಸಲ್ಮಾನನೇ? ಲವ್ ಜಿಹಾದ್ ಮಾಡಲು ಇಲ್ಲಿಗೆ ಬಂದಿದ್ದೀಯಾ?’ ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕೆಲ ನಿಮಿಷಗಳಲ್ಲಿ ಆ ಗುಂಪಿನ ಇನ್ನೂ ಕೆಲವರು ವಿದ್ಯಾರ್ಥಿಗಳನ್ನು ಸುತ್ತುವರಿದಿದ್ದಾರೆ. ‘ಇನ್ನೊಮ್ಮೆ ಆವರಣದಲ್ಲಿ ಕಂಡರೆ ಕೊಲ್ಲುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ. ಘಟನೆ ಬಗ್ಗೆ ಸಂತ್ರಸ್ತ ವಿದ್ಯಾರ್ಥಿ ವಿಶ್ವವಿದ್ಯಾಲಯದ ಭದ್ರತಾ ವಿಭಾಗಕ್ಕೆ ಲಿಖಿತ ದೂರು ಸಲ್ಲಿಸಿದ್ದಾರೆ. ಅಲ್ಲದೆ, ಚತುರ್ಶೃಂಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

“ಅವರು ನನ್ನ ಕೆನ್ನೆಗೆ ಹೊಡೆದರು. ನಿಂದಿಸಿದರು. ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ನನ್ನ ಜೊತೆಗಿದ್ದ ನನ್ನ ಸ್ನೇಹಿತನಿಗೂ ಥಳಿಸಿದ್ದಾರೆ” ಎಂದು ಸಂತ್ರಸ್ತ ವಿದ್ಯಾರ್ಥಿ ತಿಳಿಸಿದ್ದಾರೆ.

“ಅವರು ತನ್ನ ಫೋನ್ ಕಸಿದುಕೊಂಡು, ತನ್ನ ತಂದೆಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಾನು ವಿಶ್ವವಿದ್ಯಾಲಯವನ್ನು ತೊರೆಯದಿದ್ದರೆ, ನನ್ನ ಮೃತ ದೇಹವನ್ನು ನಮ್ಮ ಗ್ರಾಮಕ್ಕೆ ಕಳಿಸುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ವಿದ್ಯಾರ್ಥಿ ಹೇಳಿದ್ದಾರೆ.

“ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿರುವ 19 ವರ್ಷದ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ನಾವು ಎಫ್‌ಐಆರ್ ದಾಖಲಿಸಿದ್ದೇವೆ. ಗಲಭೆ, ಕ್ರಿಮಿನಲ್ ಬೆದರಿಕೆ ಮತ್ತು ದೈಹಿಕ ಹಲ್ಲೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಶಂಕಿತರ ಹೆಸರುಗಳು ವಿದ್ಯಾರ್ಥಿಗೆ ಗೊತ್ತಿಲ್ಲ. ನಾವು ತನಿಖೆ ಆರಂಭಿಸಿದ್ದೇವೆ” ಎಂದು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಜಯ್ ಕುಲಕರ್ಣಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...

ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ...