ಸಾವರ್ಕರ್‌ ಪಠ್ಯ ಕೈಬಿಟ್ಟಿರುವುದು ನೋವು ತಂದಿದೆ: ನಿತಿನ್‌ ಗಡ್ಕರಿ

Date:

ಹಿಂದೂ ಸಿದ್ಧಾಂತವಾದಿ ವಿ ಡಿ ಸಾವರ್ಕರ್ ಅವರ ಕುರಿತಾದ ಅಧ್ಯಾಯಗಳನ್ನು ಶಾಲಾ ಪಠ್ಯಪುಸ್ತಕಗಳಿಂದ ಕರ್ನಾಟಕ ರಾಜ್ಯ ಸರ್ಕಾರ ಕೈಬಿಟ್ಟುರುವುದಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ಗಡ್ಕರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ʻಶಾಲಾ ಪಠ್ಯಕ್ರಮದಿಂದ ಆರ್‌ಎಸ್‌ಎಸ್ ಸಂಸ್ಥಾಪಕ ಕೆ ಬಿ ಹೆಡ್ಗೆವಾರ್ ಮತ್ತು ವಿ ಡಿ ಸಾವರ್ಕರ್ ಪಠ್ಯಗಳನ್ನು ತೆಗೆದುಹಾಕಿರುವುದು ದುರದೃಷ್ಟಕರ. ಇದಕ್ಕಿಂತ ನೋವಿನ ಸಂಗತಿ ಮತ್ತೊಂದಿಲ್ಲʼ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ಧಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಗಡ್ಕರಿ, ʻಹಿಂದುತ್ವ ಸಿದ್ಧಾಂತವಾದಿ ಸಾವರ್ಕರ್ ಸಮಾಜ ಸುಧಾರಕ ಮತ್ತು ದೇಶಭಕ್ತರಾಗಿದ್ದರು. ಅವರು ನಮಗೆ ಮಾದರಿಯಾಗಿದ್ದಾರೆ. ದೇಶಕ್ಕಾಗಿ ಎಲ್ಲವನ್ನೂ ನೀಡಿದ ವ್ಯಕ್ತಿಯನ್ನು ಅವಮಾನಿಸಲಾಗುತ್ತಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ತಿರುಗೇಟು

ಗಡ್ಕರಿ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್‌, ʻತನ್ನನ್ನು ಇಷ್ಟಪಡದ  ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಆರ್‌ಎಸ್‌ಎಸ್ ಅನ್ನು ಮೆಚ್ಚಿಸಲು ನಿತಿನ್‌ ಗಡ್ಕರಿ ಪ್ರಯತ್ನಿಸುತ್ತಿದ್ದಾರೆ’ ಎಂದು ಹೇಳಿದೆ.

“ಭಾರತ ಮತ್ತು ಕರ್ನಾಟಕದ ವಿದ್ಯಾರ್ಥಿಗಳು ಕೆ ಬಿ ಹೆಡ್ಗೆವಾರ್ ಮತ್ತು ಸಾವರ್ಕರ್ ಅವರ ಸಿದ್ಧಾಂತದ ಕುರಿತು ಅಧ್ಯಯನ ಮಾಡುವುದರ ಬದಲು ಬಿ ಆರ್ ಅಂಬೇಡ್ಕರ್, ಜವಾಹರಲಾಲ್ ನೆಹರು ಹಾಗೂ ಮಹಾತ್ಮ ಗಾಂಧಿಯವರ ಸಿದ್ಧಾಂತದ ಬಗ್ಗೆ ಅಧ್ಯಯನ ಮಾಡಬೇಕುʼ ಎಂಬುದು ನಮ್ಮ ಆಶಯ” ಎಂದು ಕಾಂಗ್ರೆಸ್ ನಾಯಕ ಗೌರವ್ ವಲ್ಲಭ್, ಎಎನ್‌ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಈ ಶೈಕ್ಷಣಿಕ ವರ್ಷಕ್ಕೆ ರಾಜ್ಯದಲ್ಲಿ 6 ರಿಂದ 10 ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಷ್ಕರಣೆ ಕುರಿತು ಆದೇಶ ಹೊರಡಿಸಿದೆ. ಆರ್‌ಎಸ್‌ಎಸ್ ಸಂಸ್ಥಾಪಕ ಕೆ ಬಿ ಹೆಡ್ಗೆವಾರ್ ಮತ್ತು ವಿ ಡಿ ಸಾವರ್ಕರ್ ಸೇರಿದಂತೆ ಕನ್ನಡ, ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...