ಕೇಂದ್ರ ಬಜೆಟ್ 2024 | ಗ್ರಾಮೀಣ ಭಾರತ, ಉದ್ಯೋಗದ ಮೇಲೆ ಕೇಂದ್ರೀಕರಿಸುವ ಸಾಧ್ಯತೆ: ಗೋಲ್ಡ್‌ಮನ್ ಸ್ಯಾಕ್ಸ್

Date:

2024ರ ಕೇಂದ್ರ ಬಜೆಟ್ ಗ್ರಾಮೀಣ ಭಾರತ, ಗ್ರಾಮೀಣ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯ ಮೇಲೆ ಕೇಂದ್ರೀಕರಿಸಬಹುದು. ಆದರೆ ಸಮಾಜ ಕಲ್ಯಾಣ ಕಾರ್ಯಗಳಿಗಾಗಿ ವೆಚ್ಚವನ್ನು ಕಡಿಮೆ ಮಾಡಬಹುದು ಎಂದು ಗೋಲ್ಡ್‌ಮನ್ ಸ್ಯಾಕ್ಸ್‌ನ ಅರ್ಥಶಾಸ್ತ್ರಜ್ಞರು ಸೋಮವಾರ ತಿಳಿಸಿದ್ದಾರೆ.

- Advertisement -

2025ರ ಮಾರ್ಚ್‌ಗೆ ಕೊನೆಯಾಗುವ ಹಣಕಾಸು ವರ್ಷದ ಬಜೆಟ್ ಅನ್ನು ಜುಲೈ 23ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ ಎಂದು ಕೇಂದ್ರ ಸರ್ಕಾರ ಕಳೆದ ವಾರಾಂತ್ಯದಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕೇಂದ್ರ ಸರ್ಕಾರವು ಮಧ್ಯಂತರ ಬಜೆಟ್‌ನಲ್ಲಿ ಜಿಡಿಪಿಯ ಶೇಕಡ 5.1ರಷ್ಟು ಹಣಕಾಸಿನ ಕೊರತೆಯ ಗುರಿಯನ್ನು ನಿಗದಿಪಡಿಸಿದ್ದು 2024-25ನೇ ಸಾಲಿನ ಬಜೆಟ್‌ನಲ್ಲಿಯೂ ಇದೇ ಗುರಿಯನ್ನು ನಿಗದಿಪಡಿಸುವ ನಿರೀಕ್ಷೆಯಿದೆ. ಆದರೆ ಈ ಬಾರಿ ದೀರ್ಘಾವಧಿಯ ಆರ್ಥಿಕ ನೀತಿಯ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡುವ ನಿರೀಕ್ಷೆಯಿದೆ ಎಂದು ಗೋಲ್ಡ್‌ಮನ್ ಅರ್ಥಶಾಸ್ತ್ರಜ್ಞರು ಅಭಿಪ್ರಾಯಿಸಿದ್ದಾರೆ.

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ 2024-25 | ಜುಲೈ 23ರಂದು ಆಯವ್ಯಯ ಮಂಡನೆ

“ಕಾರ್ಮಿಕ ಉತ್ಪಾದನೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾಲ ಸೌಲಭ್ಯ, ಸೇವಾ ರಫ್ತಿನ ಮೇಲೆ ಅಧಿಕ ಗಮನ, ದೇಶೀಯ ಆಹಾರ ಪೂರೈಕೆ ಸರಪಳಿಯ ಮೇಲೆ ಒತ್ತು ನೀಡುವ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡಬಹುದು” ಎಂದು ವಾಲ್ ಸ್ಟ್ರೀಟ್ ಬ್ಯಾಂಕ್‌ನ ಮುಖ್ಯ ಅರ್ಥಶಾಸ್ತ್ರಜ್ಞ ಸಂತನು ಸೇನ್‌ ಗುಪ್ತಾ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಅಧಿಕ ಕ್ಷೇತ್ರದಲ್ಲಿ ಗೆದ್ದು ಸರ್ಕಾರ ರಚಿಸುವ ವಿಶ್ವಾಸದಲ್ಲಿದ್ದ ಬಿಜೆಪಿಗೆ ನಿರಾಶೆಯಾಗಿದೆ. ಬಹುಮತವನ್ನೂ ಕೂಡಾ ಪಡೆಯಲು ಸಾಧ್ಯವಾಗದೆ ಮಿತ್ರ ಪಕ್ಷಗಳ ಸಹಾಯದಿಂದ ಸರ್ಕಾರವನ್ನು ರಚಿಸಿಕೊಂಡಿದೆ. ಪ್ರಬಲವಾದ ಇಂಡಿಯಾ ಒಕ್ಕೂಟದ ವಿಪಕ್ಷವು ಎನ್‌ಡಿಎ ಸರ್ಕಾರವನ್ನು ನಿರಂತರವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದೆ.

ಈದಿನ.ಕಾಮ್ ಸೇರಿದಂತೆ ಹಲವಾರು ಸಮೀಕ್ಷೆಗಳ ಪ್ರಕಾರ ಬಿಜೆಪಿಯ ಈ ಹಿನ್ನೆಡೆಗೆ ನಿರುದ್ಯೋಗ, ಹಣದುಬ್ಬರ ಕಾರಣವಾಗಿದೆ. ಭಾರತದ ಆರ್ಥಿಕತೆಯು ಶೇಕಡ 7.2ರಷ್ಟು ವೇಗದಲ್ಲಿ ಬೆಳೆಯುತ್ತಿದ್ದರೂ ಕೂಡಾ ಉದ್ಯೋಗ ಸೃಷ್ಟಿಯಲ್ಲಿ ಸರ್ಕಾರ ವಿಫಲವಾಗಿದೆ. ಜೊತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿಯೂ ಮೋದಿ ಸರ್ಕಾರ ವಿಫಲವಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...