ಕೇಂದ್ರ ಬಜೆಟ್ | ಇನ್ಮುಂದೆ ಯಾವುದು ಅಗ್ಗ? ಯಾವುದು ದುಬಾರಿ?

Date:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಕೇಂದ್ರ ಬಜೆಟ್ ಮಂಡಿಸಿದ್ದು ಹಲವಾರು ವಸ್ತುಗಳ ಸುಂಕವನ್ನು ಹೆಚ್ಚಳ ಮತ್ತು ಇಳಿಕೆ ಮಾಡಿದ್ದಾರೆ. ಇದರಿಂದಾಗಿ ಕೆಲವು ವಸ್ತುಗಳ ಬೆಲೆ ಇಳಿಕೆಯಾದರೆ, ಕೆಲವು ವಸ್ತುಗಳ ಬೆಲೆ ಏರಿಕೆಯಾಗಲಿದೆ.

- Advertisement -

ಮಧ್ಯಮ ಮತ್ತು ಮೇಲ್ಮಧ್ಯಮ ವರ್ಗದವರಿಗೆ ಕೆಲವು ಹಣಕಾಸು ಆಸ್ತಿಗಳ ಮೇಲಿನ ಬಂಡವಾಳ ಲಾಭದ ವಿನಾಯಿತಿ ಮಿತಿಯನ್ನು ವರ್ಷಕ್ಕೆ 1.25 ಲಕ್ಷ ರೂ.ಗೆ ಏರಿಸಲು ಸರ್ಕಾರ ಪ್ರಸ್ತಾಪಿಸಿದೆ. ಹಾಗೆಯೇ ಹೊಸ ತೆರಿಗೆ ಪದ್ಧತಿ ಆಯ್ಕೆ ಮಾಡುವವರಿಗೆ ಸ್ಟ್ಯಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು 50,000 ರೂ.ನಿಂದ 75,000 ರೂ.ಗೆ ಏರಿಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆದರೆ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇಕಡ 15ರಿಂದ ಶೇಕಡ 5ಕ್ಕೆ ಇಳಿಸಲಾಗಿದೆ. ಇದು ವಿಶ್ವದ ಎರಡನೇ ಅತಿ ದೊಡ್ಡ ಚಿನ್ನದ ಗ್ರಾಹಕ ದೇಶವಾದ ಭಾರತದಲ್ಲಿ ಚಿನ್ನದ ಕಳ್ಳಸಾಗಣೆಯನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಿಸಿದೆ. ಲಿಥಿಯಂ ಸೇರಿದಂತೆ 25 ಖನಿಜಗಳ ಆಮದು ಸುಂಕ ವಿನಾಯಿತಿಯನ್ನು ಘೋಷಿಸಿದರು.

ಇದನ್ನು ಓದಿದ್ದೀರಾ?  ಕೇಂದ್ರ ಬಜೆಟ್ | ಬಿಹಾರ, ಆಂಧ್ರ ಪ್ರದೇಶಕ್ಕೆ ಬಂಪರ್; ಸೋಶಿಯಲ್ ಮೀಡಿಯಾದಲ್ಲಿ ಮೀಮ್ಸ್‌ಗಳು ವೈರಲ್

“ಚಿನ್ನ ಮತ್ತು ಅಮೂಲ್ಯವಾದ ಲೋಹದ ಆಭರಣಗಳಲ್ಲಿ ದೇಶೀಯ ಮೌಲ್ಯವರ್ಧನೆ ಹೆಚ್ಚಿಸಲು, ಚಿನ್ನ ಮತ್ತು ಬೆಳ್ಳಿಯ ಕಸ್ಟಮ್ಸ್ ಸುಂಕವನ್ನು ಶೇಕಡ 6ಕ್ಕೆ ಇಳಿಸಲು ನಾನು ಪ್ರಸ್ತಾಪಿಸುತ್ತೇನೆ” ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.

ಯಾವೆಲ್ಲ ವಸ್ತುಗಳು ಅಗ್ಗ?

ಸೋಲರ್ ಸೆಟ್‌ಗಳು
ಮೊಬೈಲ್ ಫೋನ್‌ಗಳು
ಮೊಬೈಲ್‌ನ ಬ್ಯಾಟರಿ, ಇತ್ಯಾದಿ
ಮೊಬೈಲ್ ಚಾರ್ಜರ್‌ಗಳು
ಕ್ಯಾನ್ಸರ್ ಔಷಧಿಗಳು
ಚಿನ್ನ ಮತ್ತು ಬೆಳ್ಳಿ
ಪ್ಲಾಟಿನಂ ಜ್ಯುವೆಲ್ಲರಿ
ಬಟ್ಟೆ
ಶೂಗಳು
ಎಕ್ಸ್-ರೇ ಉಪಕರಣಗಳು
ಎಲೆಕ್ಟ್ರಿಕ್ ಕಾರುಗಳು
ಲಿಥಿಯಂ ಬ್ಯಾಟರಿ
ತಾಮ್ರದ ಸರಕುಗಳು
ಚರ್ಮದ ಸಾಮಗ್ರಿಗಳು
ಮೀನು ಮತ್ತು ಮೀನು ಉತ್ಪನ್ನಗಳು
25 ಅಗತ್ಯ ಖನಿಜಗಳು

ಯಾವೆಲ್ಲ ವಸ್ತುಗಳು ದುಬಾರಿ?

ಪ್ಲಾಸ್ಟಿಕ್ ವಸ್ತುಗಳು
ಟೆಲಿಕಾಂ ಉಪಕರಣಗಳು

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...